PBKS vs RR Live Streaming: ಬಲಿಷ್ಠ ರಾಜಸ್ಥಾನಕ್ಕೆ ಪಂಜಾಬ್ ಸವಾಲು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 PBKS vs RR Live Streaming: ಪ್ಲೇ ಆಫ್ ಆಡುವ ಪಂಜಾಬ್ ಕಿಂಗ್ಸ್ ತಂಡದ ಆಸೆ ಇನ್ನೂ ಜೀವಂತವಾಗಿದ್ದು, ಇದಕ್ಕಾಗಿ ಅವರು ಇನ್ನುಳಿದ ತಮ್ಮ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು.

PBKS vs RR Live Streaming: ಬಲಿಷ್ಠ ರಾಜಸ್ಥಾನಕ್ಕೆ ಪಂಜಾಬ್ ಸವಾಲು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
PBKS vs RR
Follow us
TV9 Web
| Updated By: ಪೃಥ್ವಿಶಂಕರ

Updated on:May 06, 2022 | 5:03 PM

ಐಪಿಎಲ್ 2022 (IPL 2022)ರಲ್ಲಿ, ಪಂಜಾಬ್ ಕಿಂಗ್ಸ್ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು ಸೋಲಿಸಿತು. 8 ವಿಕೆಟ್‌ಗಳ ಆ ಗೆಲುವು ಅವರಿಗೆ ಜೀವಾಳವಾಗಿ ಕೆಲಸ ಮಾಡಿದೆ. ಅದರಲ್ಲಿ ಪಂಜಾಬ್​ ತಂಡದ ಬ್ಯಾಟರ್​ಗಳು ತಂಡಕ್ಕೆ ಉತ್ತಮ ಕೊಡುಗೆ ನೀಡಿದರು. ಶಿಖರ್ ಧವನ್ ಮತ್ತು ಲಿಯಾಮ್ ಲಿವಿಂಗ್‌ಸ್ಟನ್ (Shikhar Dhawan and Liam Livingston) ಅವರ ಫಾರ್ಮ್ ಕೂಡ ಪಂಜಾಬ್​ಗೆ ಪ್ಲಸ್​ ಪಾಯಿಂಟ್ ಆಗಿದೆ. ಇವೆಲ್ಲವೂ ತಂಡದ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡಿವೆ. ಈಗ ಅದೇ ಹೆಚ್ಚಿದ ನೈತಿಕತೆಯೊಂದಿಗೆ, ಈ ತಂಡವು ತನ್ನ ಹಾದಿಯಲ್ಲಿ ಮುಂದಿನ ಅಡಚಣೆಯಾಗಿರುವ ರಾಜಸ್ಥಾನ ರಾಯಲ್ಸ್‌ನ ಸವಾಲನ್ನು ಸಹ ಎದುರಿಸಲಿದೆ.

ಪ್ಲೇ ಆಫ್ ಆಡುವ ಪಂಜಾಬ್ ಕಿಂಗ್ಸ್ ತಂಡದ ಆಸೆ ಇನ್ನೂ ಜೀವಂತವಾಗಿದ್ದು, ಇದಕ್ಕಾಗಿ ಅವರು ಇನ್ನುಳಿದ ತಮ್ಮ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕು. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ತಂಡವನ್ನು ಸೋಲಿಸಿದ್ದರೂ, ಈ ತಂಡದ ಬೌಲರ್‌ಗಳು ಕೊಂಚ ಮಾರಕವಾಗಿರುವುದರಿಂದ ಅವರಿಗೆ ರಾಜಸ್ಥಾನವೇ ದೊಡ್ಡ ಅಡ್ಡಿಯಾಗಿದೆ. ಅಶ್ವಿನ್, ಚಹಾಲ್, ಪ್ರಸಿದ್ಧ್, ಬೋಲ್ಟ್ ಮತ್ತು ಕುಲ್ದೀಪ್ ಸೇನ್ ರಂತಹ ಮಾರಕ ಬೌಲಿಂಗ್​ ವಿಭಾಗವನ್ನು ಮೆಟ್ಟಿ ನಿಲ್ಲುವುದು ಪಂಜಾಬ್​ಗೆ ಈಗ ದೊಡ್ಡ ಸವಾಲಾಗಿದೆ.

ಪಂಜಾಬ್‌ಗೆ ರಾಜಸ್ಥಾನ ದೊಡ್ಡ ಸವಾಲು ರಾಜಸ್ಥಾನ್ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ರಾಜಸ್ಥಾನ್ 6ರಲ್ಲಿ ಗೆಲುವು ಸಾಧಿಸಿದೆ. ಆದರೆ, ಪಂಜಾಬ್ ಕಿಂಗ್ಸ್ ಇಷ್ಟೇ ಪಂದ್ಯಗಳಲ್ಲಿ 5 ಗೆಲುವಿನೊಂದಿಗೆ 7ನೇ ಸ್ಥಾನದಲ್ಲಿದೆ. ಆದರೆ, ಪಂಜಾಬ್ ತಂಡ ರಾಜಸ್ಥಾನವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ, ದೊಡ್ಡ ಲಾಭ ಪಡೆಯಬಹುದು.

ಇದನ್ನೂ ಓದಿ
Image
PBKS vs RR, Head to Head: ಪ್ಲೇ ಆಫ್​ಗೇರಲು ಇಬ್ಬರಿಗೂ ಗೆಲುವು ಅಗತ್ಯ; ಹಿಂದಿನ ಮುಖಾಮುಖಿ ಫಲಿತಾಂಶ ಇಲ್ಲಿದೆ

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವು ಮೇ 7 ರಂದು ಶನಿವಾರ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 03:30 ಕ್ಕೆ ಆರಂಭವಾಗಲಿದೆ.

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಆನ್‌ಲೈನ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

Published On - 5:03 pm, Fri, 6 May 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ