IPL 2022: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಗುಜರಾತ್ ಟೈಟನ್ಸ್, ಸಿಎಸ್​ಕೆ ಆಟಗಾರರು..!

IPL 2022: 2008 ರಲ್ಲಿ ಡೆಕ್ಕನ್ ಚಾರ್ಜರ್ಸ್‌ ಪರ ಆಡಿದ್ದ ಸೈಮಂಡ್ಸ್​ ರಾಜಸ್ಥಾನ್ ರಾಯಲ್ಸ್ ವಿರುದ್ಧ 53 ಎಸೆತಗಳಲ್ಲಿ 117 ರನ್‌ಗಳ ಅಜೇಯ ಶತಕ ಸಿಡಿಸಿ ಅಬ್ಬರಿಸಿದ್ದರು.

IPL 2022: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಗುಜರಾತ್ ಟೈಟನ್ಸ್, ಸಿಎಸ್​ಕೆ ಆಟಗಾರರು..!
csk vs gt
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 15, 2022 | 6:40 PM

ಭಾನುವಾರ ಮುಂಬೈನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ (CSK vs GT) ತಂಡಗಳ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದರು. ಇದಕ್ಕೇನು ಕಾರಣ ಎಂದು ನೋಡುವುದಾದರೆ, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್ ಅವರ ದುರ್ಮರಣ. ಕಾರು ಅಪಘಾತದಲ್ಲಿ ಮೃತಪಟ್ಟ ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಅವರ ಗೌರವಾರ್ಥವಾಗಿ ಸಿಎಸ್​ಕೆ ಹಾಗೂ ಗುಜರಾತ್ ತಂಡದ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿದ್ದರು. ಸೈಮಂಡ್ಸ್ ಶನಿವಾರ ರಾತ್ರಿ ಕಾರು ಅಪಘಾತದಲ್ಲಿ 46 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈ ಹಿಂದೆ ಆಂಡ್ರ್ಯೂ ಸೈಮಂಡ್ಸ್ ಕೂಡ ಐಪಿಎಲ್‌ನಲ್ಲಿ ಆಡಿದ್ದರು. ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜರ್ಸ್‌ ತಂಡದ ಭಾಗವಾಗಿದ್ದ ಸೈಮಂಡ್ಸ್ ಆ ನಂತರ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. 2008 ರಲ್ಲಿ ಡೆಕ್ಕನ್ ಚಾರ್ಜರ್ಸ್‌ ಪರ ಆಡಿದ್ದ ಸೈಮಂಡ್ಸ್​ ರಾಜಸ್ಥಾನ್ ರಾಯಲ್ಸ್ ವಿರುದ್ಧ 53 ಎಸೆತಗಳಲ್ಲಿ 117 ರನ್‌ಗಳ ಅಜೇಯ ಶತಕ ಸಿಡಿಸಿ ಅಬ್ಬರಿಸಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಗೆಲ್ಲುವಲ್ಲಿ ಕೂಡ ಸೈಮಂಡ್ಸ್ ಪ್ರಮುಖ ಪಾತ್ರವಹಿಸಿದ್ದರು.

ಆದರೆ ಶನಿವಾರ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಆಸ್ಟ್ರೇಲಿಯಾ ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರ ಸ್ಥಿತಿ ತುಂಬಾ ಗಂಭೀರವಾಗಿದ್ದ ಕಾರಣ ವೈದ್ಯರು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಸೈಮಂಡ್ಸ್ 1998 ರಿಂದ 2009 ರವರೆಗೆ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು. ಈ ಸಮಯದಲ್ಲಿ, ಸ್ಟೀವ್ ವಾ ಮತ್ತು ನಂತರ ರಿಕಿ ಪಾಂಟಿಂಗ್ ನೇತೃತ್ವದ ಆಸೀಸ್​ ತಂಡ ಕ್ರಿಕೆಟ್​ ಅಂಗಳದಲ್ಲಿ ಸೋಲಿಲ್ಲದ ಸರದಾರರಾಗಿ ಮೆರೆಯಿತು. ಈ ವೇಳೆ ಸೈಮಂಡ್ಸ್ ಆಸೀಸ್ ತಂಡದ ಪ್ರಮುಖ ಆಲ್​ರೌಂಡರ್ ಆಗಿದ್ದರು ಎಂಬುದು ವಿಶೇಷ. ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್, 198 ODI ಮತ್ತು 14 T20I ಪಂದ್ಯಗಳನ್ನು ಆಡಿದ್ದಾರೆ. ಇದೀಗ ಕಾರು ಅಪಘಾತದಲ್ಲಿ ನಿಧನರಾಗಿರುವ ಆ್ಯಂಡ್ರ್ಯೂ ಸೈಮಂಡ್ಸ್ ಅವರ ಅಕಾಲಿಕ ಮರಣಕ್ಕೆ ವಿಶ್ವದ ಎಲ್ಲಾ ದಿಗ್ಗಜ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ