IPL 2022: ಪ್ಲೇಆಫ್​ಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ RCB ಗೆ ಹೊಸ ಚಿಂತೆ ಶುರು..!

IPL 2022 Playoffs: ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ, ದ್ವಿತಿಯಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ.

IPL 2022: ಪ್ಲೇಆಫ್​ಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ RCB ಗೆ ಹೊಸ ಚಿಂತೆ ಶುರು..!
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on:May 22, 2022 | 3:03 PM

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್​ 15 ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇದರೊಂದಿಗೆ ಪ್ಲೇಆಫ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (GT vs RR) ಕ್ವಾಲಿಫೈಯರ್ 1 ಪಂದ್ಯವಾಡಲಿದೆ. ಆದರೆ ಆರ್​ಸಿಬಿ ಆಡಬೇಕಿರುವುದು ಎಲಿಮಿನೇಟರ್ ಪಂದ್ಯ ಎಂಬುದು ವಿಶೇಷ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದಿರುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಅದರಂತೆ ಆರ್​ಸಿಬಿ ತಂಡವು ಮೇ 25 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ (RCB vs LSG) ಎಲಿಮಿನೇಟರ್ ಪಂದ್ಯ ವಾಡಲಿದೆ. ಕೊಲ್ಕತ್ತಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯವು RCB ಪಾಲಿಗೆ ನಿರ್ಣಾಯಕ ಪಂದ್ಯ.

ಏಕೆಂದರೆ ಎಲಿಮಿನೇಟರ್ ಪಂದ್ಯವಾಡುವ ಆರ್​ಸಿಬಿ ಅಥವಾ ಲಕ್ನೋ ಸೂಪರ್ ಜೈಂಟ್ಸ್​ ಐಪಿಎಲ್​ನಿಂದ ಹೊರಬೀಳಲಿದೆ. ಇದರೊಂದಿಗೆ ಐಪಿಎಲ್​ ಅಭಿಯಾನ ಕೂಡ ಅಂತ್ಯವಾಗಲಿದೆ. ಇತ್ತ ಕಳೆದ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ ಆರ್​ಸಿಬಿ ತಂಡವು ಮೈನಸ್ ನೆಟ್​ ರನ್​ ರೇಟ್ ಇದ್ದರೂ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವಂತಾಯಿತು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ನಿರ್ಣಾಯಕವಾಗಿತ್ತು.

ಇದನ್ನೂ ಓದಿ: IPL 2022: ಹೇಗಿರಲಿದೆ ಪ್ಲೇಆಫ್: ಇಲ್ಲಿ 2 ತಂಡಗಳಿಗೆ ಡಬಲ್ ಚಾನ್ಸ್​..!

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿರುವ ಆರ್​ಸಿಬಿ ಖುದ್ದು ನಿರ್ಣಾಯಕ ಪಂದ್ಯವಾಡಬೇಕಿದೆ. ಅದರಂತೆ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಬುಧವಾರ ಎಲಿಮಿನೇಟರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆದ್ದ ಮಾತ್ರಕ್ಕೆ ಆರ್​ಸಿಬಿ ಫೈನಲ್​ಗೆ ಎಂಟ್ರಿ ಕೊಡುವುದಿಲ್ಲ. ಬದಲಾಗಿ ಮೊದಲ ಕ್ವಾಲಿಫೈಯರ್​ ಪಂದ್ಯವಾಡುತ್ತಿರುವ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಸೋತ ತಂಡದ ಜೊತೆ 2ನೇ ಕ್ವಾಲಿಫೈಯರ್ ಪಂದ್ಯವಾಡಬೇಕಿದೆ. ಅಂದರೆ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಬೇಕಿದ್ರೆ ಎರಡು ನಿರ್ಣಾಯಕ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಮುಂದಿರುವುದು ಮಾಡು ಇಲ್ಲವೇ ಮಡಿ ಪಂದ್ಯಗಳು ಮಾತ್ರ. ಈ ಎರಡೂ ಪಂದ್ಯಗಳಲ್ಲಿ ಗೆದ್ದರೆ ಆರ್​ಸಿಬಿ 6 ವರ್ಷಗಳ ಬಳಿಕ ಫೈನಲ್​ಗೆ ಪ್ರವೇಶಿಸಬಹುದು.

ಆದರೆ ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ, ದ್ವಿತಿಯಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಏಕೆಂದರೆ ದ್ವಿತಿಯಾರ್ಧದ 7 ಪಂದ್ಯಗಳಲ್ಲಿ ಕೇವಲ 3 ಗೆಲುವು ದಾಖಲಿಸಿತ್ತು. ಹೀಗಾಗಿಯೇ ಎಲಿಮಿನೇಟರ್ ಪಂದ್ಯದಲ್ಲಿ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ದ ಆರ್​ಸಿಬಿ ರಣತಂತ್ರದೊಂದಿಗೆ ಕಣಕ್ಕಿಳಿಯಬೇಕಾಗುತ್ತದೆ. ಆದರೆ ಪ್ರಸ್ತುತ ಆರ್​ಸಿಬಿ ತಂಡದ ಪ್ರದರ್ಶನ ಗಮನಿಸಿದ್ರೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಪಾಯಿಂಟ್ಸ್ ಟೇಬಲ್​ನ ಟಾಪರ್​ ಗುಜರಾತ್ ಟೈಟನ್ಸ್​ಗೆ ಸೋಲುಣಿಸಿರುವ ಆರ್​ಸಿಬಿ ಕಡೆಯಿಂದ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

ಆರ್​ಸಿಬಿ ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Sun, 22 May 22