IPL 2022 Points Table: ರಾಜಸ್ಥಾನಕ್ಕೆ ವರವಾದ ಹೈದರಾಬಾದ್ ಗೆಲುವು: ಐಪಿಎಲ್ ಲೆಕ್ಕಚಾರ ಈಗ ಆರಂಭ
IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟೂರ್ನಿ ಇದೀಗ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಸತತ ನಾಲ್ಕು ಸೋಲಿನ ಬಳಿಕ ಗೆಲುವು ಕಂಡಿದ್ದರೆ ಇತ್ತ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿಯೂ ಸೋಲುಂಡು ಕೆಟ್ಟ ದಾಖಲೆ ಬರೆದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಪಾಯಿಂಟ್ ಟೇಬಲ್:
- ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ರಾಜಸ್ಥಾನ್ ವಿರುದ್ಧದ ಗೆಲುವಿನ ಬಳಿಕ ಆಡಿದ ಐದು ಪಂದ್ಯದಲ್ಲಿ ಒಂದರಲ್ಲಿ ಸೋಲು ನಾಲ್ಕರಲ್ಲಿ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.450.
- ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ಸೋಲುಂಡ ಪರಿಣಾಮ ಅಂಕಪಟ್ಟಿಯಲ್ಲಿ ಕುಸಿತ ಕಂಡಿದೆ. ಇದರಿಂದ ರಾಜಸ್ಥಅನ್ ತಂಡಕ್ಕೆ ಲಾಭವಾಗಿದ್ದು ಎರಡನೇ ಸ್ಥಾನಕ್ಕೆ ಜಿಗಿದಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 6 ಅಂಕದೊಂದಿಗೆ +0.389 ರನ್ರೇಟ್ ಹೊಂದಿದೆ.
- ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮೂರನೇ ಸ್ಥಾನಕ್ಕೇರಿದೆ. 6 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.239 ಆಗಿದೆ.
- ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಮೂರರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.223 ರನ್ರೇಟ್ನೊಂದಿಗೆ 4ನೇ ಸ್ಥಾನದಲ್ಲಿದೆ.
- ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಐದನೇ ಸ್ಥಾನದಲ್ಲಿದೆ. ಒಟ್ಟು 6 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.174.
- ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಆರು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.006 ಆಗಿದೆ.
- ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ಒಂದು ಸ್ಥಾನ ಮೇಲಕ್ಕೇರಿದ್ದು ಆಡಿದ ಐದು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿದ್ದು 6 ಅಂಕ ಸಂಪಾದಿಸಿ ಏಳನೇ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ -0.196.
- ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.476 ಆಗಿದೆ.
- ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಪೈಕಿ 4 ರಲ್ಲಿ ಸೋಲು ಒಂದರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಅಂಕದೊಂದಿಗೆ -0.745 ರನ್ರೇಟ್ನೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
- ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.072.
ಆರೆಂಜ್ ಕ್ಯಾಪ್:
ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್ ಆರ್ ತಂಡದ ಜೋಸ್ ಬಟ್ಲರ್ ಇದ್ದು ಇವರು ಐದು ಪಂದ್ಯಗಳಿಂದ 272 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಜಿಗಿದಿದ್ದು, ಇವರು ಐದು ಪಂದ್ಯಗಳಿಂದ 228 ರನ್ ಸಿಡಿಸಿದ್ದಾರೆ. ಸಿಎಸ್ಕೆ ತಂಡದ ಶಿವಂ ದುಬೆ ಮೂರನೇ ಸ್ಥಾನದಲ್ಲಿದ್ದು, 5 ಪಂದ್ಯಗಳಲ್ಲಿ 207 ರನ್ ಗಳಿಸಿದ್ದಾರೆ. ಶುಭ್ಮನ್ ಗಿಲ್ 200 ರನ್ ಕಲೆಹಾಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಶಿಮ್ರೋನ್ ಹೆಟ್ಮೇರ್ 197 ರನ್ನೊಂದಿಗೆ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.
ಪರ್ಪಲ್ ಕ್ಯಾಪ್:
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್ನಲ್ಲಿದ್ದಾರೆ. ಇವರು ಆಡಿದ ಐದು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 12 ವಿಕೆಟ್ ಕಬಳಿಸಿದ್ದಾರೆ. ಹೈದರಾಬಾದ್ ತಂಡದ ಟಿ. ನಟರಾಜನ್ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದು 5 ಪಂದ್ಯಗಳಿಂದ 11 ವಿಕೆಟ್ ಪಡೆದುಕೊಂಡಿದ್ದಾರೆ. ಕೆಕೆಆರ್ ತಂಡದ ಉಮೇಶ್ ಯಾದವ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇವರು ಆಡಿರುವ 6 ಪಂದ್ಯಗಳಿಂದ 10 ವಿಕೆಟ್ ಕಿತ್ತಿದ್ದಾರೆ. ಕುಲ್ದೀಪ್ ಯಾದವ್ 4 ಪಂದ್ಯಗಳಿಂದ 10 ವಿಕೆಟ್ ಪಡೆದು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಆರ್ಸಿಬಿ ತಂಡದ ವನಿಂದು ಹಸರಂಗ ಐದನೇ ಸ್ಥಾನಕ್ಕೆ ಕುಸಿದಿದ್ದು, ಇವರು ಆಡಿದ ಐದು ಪಂದ್ಯಗಳಿಂದ 10 ವಿಕೆಟ್ ಕಿತ್ತಿದ್ದಾರೆ.
RCB Playing XI: ಡೆಲ್ಲಿ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಆಘಾತ: ಆ ಪ್ಲೇಯರ್ ಆಡುವುದು ಅನುಮಾನ
David Warner: ವಾರ್ನರ್ ಮೈಮೇಲೆ ವೈಲೆನ್ಸ್ ರಾಕಿ ಭಾಯ್: ಆರ್ಸಿಬಿ ತಂಡಕ್ಕೆ ದೊಡ್ಡ ಸಿಗ್ನಲ್ ಕೊಟ್ಟ ಡೇವಿಡ್