IPL 2022 Points Table: ಐಪಿಎಲ್ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2022 Orange Cap and Purple Cap: ಸೋಮವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ಮತ್ತು ಗುಜರಾತ್ ನಡುವಣ ರಣ ರೋಚಕ ಪಂದ್ಯದಲ್ಲಿ ಎಸ್​ಆರ್​ಹೆಚ್ ​ ಗೆಲುವು ಕಂಡಿತು. ಇದೀಗ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಐಪಿಎಲ್ ಪಾಯಿಂಟ್ ಟೇಬಲ್ ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
Rajasthan Royals IPL 2022
Follow us
| Updated By: Vinay Bhat

Updated on: Apr 12, 2022 | 10:54 AM

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ಬೆಳಕಿಗೆ ಬರುತ್ತಿದೆ. ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಚೊಚ್ಚಲ ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲುಂಡು ಕೆಟ್ಟ ದಾಖಲೆ ಬರೆದಿದೆ. ಇಂದು ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಮತ್ತೊಂದು ಅಗ್ನಿ ಪರೀಕ್ಷೆಗೆ ಇಳಿಯಲಿದೆ. ಇದರ ನಡುವೆ ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿ ಒಟ್ಟು 6 ಅಂಕದೊಂದಿಗೆ +0.951 ರನ್​​ರೇಟ್ ಹೊಂದಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಎರರಡಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.446 ರನ್​​ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
  • ನಾಲ್ಕನೇ ಸ್ಥಾನದಲ್ಲಿದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನಕ್ಕೆ ಜಿಗಿದಿದೆ. ಆರು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.294 ಆಗಿದೆ.
  • ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನಕ್ಕೇರಿದೆ. ಒಟ್ಟು 6 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.174.
  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಕುಸಿದಿದೆ. ಎಸ್​ಆರ್​​ಹೆಚ್ ವಿರುದ್ಧದ ಸೋಲಿನ ಬಳಿಕ ಆಡಿದ ನಾಲ್ಕು ಪಂದ್ಯದಲ್ಲಿ ಒಂದರಲ್ಲಿ ಸೋಲಿ ಮೂರರಲ್ಲಿ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.097.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ -0.476 ಆಗಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಏಳನೇ ಸ್ಥಾನದಲ್ಲಿದೆ. 4 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.152 ಆಗಿದೆ.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡಲ್ಲಿ ಜಯ ಸಾಧಿಸಿದ್ದು 4 ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ -0.501.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ನಾಲ್ಕೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.181.
  • ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ನಾಲ್ಕರಲ್ಲೂ ಸೋಲು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ -1.211 ರನ್​ರೇಟ್​​ನೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ಇದ್ದು ಇವರು ನಾಲ್ಕು ಪಂದ್ಯಗಳಿಂದ 218 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ಲಖನೌ ತಂಡದ ಕ್ವಿಂಟನ್ ಡಿಕಾಕ್ ಜಿಗಿದಿದ್ದು ಇವರು ಐದು ಪಂದ್ಯಗಳಿಂದ 188 ರನ್ ಸಿಡಿಸಿದ್ದಾರೆ. ಗುಜರಾತ್ ತಂಡದ ಶುಭ್ಮನ್ ಗಿಲ್ ಜಿಗಿದಿದ್ದು 187 ರನ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮುಂಬೈ ತಂಡದ ಇಶಾನ್ ಕಿಶನ್ ನಾಲ್ಕನೇ ಸ್ಥಾನ ಪಡೆದು 175 ರನ್ ಕಲೆಹಾಕಿದ್ದಾರೆ.  ರಾಜಸ್ಥಾನ್ ತಂಡದ ಶಿಮ್ರೊನ್ ಹೆಟ್ಮೇರ್ 168 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 11 ವಿಕೆಟ್ ಕಬಳಿಸಿದ್ದಾರೆ. ಕೆಕೆಆರ್ ತಂಡದ ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಇವರು ಆಡಿರುವ 5 ಪಂದ್ಯಗಳಿಂದ 10 ವಿಕೆಟ್ ಕಿತ್ತಿದ್ದಾರೆ. ಕುಲ್ದೀಪ್ ಯಾದವ್ 4 ಪಂದ್ಯಗಳಿಂದ 10 ವಿಕೆಟ್ ಪಡೆದು ದಿಢೀರ್ ಮೂರನೇ ಸ್ಥಾನಕ್ಕೇರಿದ್ದಾರೆ. ಆರ್​​ಸಿಬಿ ತಂಡದ ವನಿಂದು ಹಸರಂಗ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು, ಇವರು ಆಡಿದ ನಾಲ್ಕು ಪಂದ್ಯಗಳಿಂದ 8 ವಿಕೆಟ್ ಕಿತ್ತಿದ್ದಾರೆ. 8 ವಿಕೆಟ್ ಕಿತ್ತ ಟಿ. ನಟರಾಜನ್ ಐದನೇ ಸ್ಥಾನದಲ್ಲಿದ್ದಾರೆ.

Hardik Pandya: ಸೀನಿಯರ್ ಪ್ಲೇಯರ್ ಎಂಬ ಗೌರವ ಕೊಡದೆ ಶಮಿಗೆ ಮನಬಂದಂತೆ ಬೈದ ಹಾರ್ದಿಕ್ ಪಾಂಡ್ಯ

CSK vs RCB, IPL 2022: ಬೆಂಗಳೂರು vs ಚೆನ್ನೈ: ಐಪಿಎಲ್​​ನಲ್ಲಿಂದು ರಣ ರೋಚಕ ಕದನ

ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು