AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Points Table: ಪರ್ಪಲ್ ಕ್ಯಾಪ್ ಪಕ್ಕ ಬಂದ ಕುಲ್ದೀಪ್: ಪಾಯಿಂಟ್ ಟೇಬಲ್, ಆರೆಂಜ್ ಕ್ಯಾಪ್ ಪಟ್ಟಿ ಇಲ್ಲಿದೆ ನೋಡಿ

IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಪರ್ಪಲ್ ಕ್ಯಾಪ್ ಪಕ್ಕ ಬಂದ ಕುಲ್ದೀಪ್: ಪಾಯಿಂಟ್ ಟೇಬಲ್, ಆರೆಂಜ್ ಕ್ಯಾಪ್ ಪಟ್ಟಿ ಇಲ್ಲಿದೆ ನೋಡಿ
Kuldeep Yadav
TV9 Web
| Updated By: Vinay Bhat|

Updated on: Apr 29, 2022 | 10:36 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಹಾರ್ದಿಕ್ ಪಡೆ 14 ಅಂಕದೊಂದಿಗೆ ಪ್ಲೇ ಆಫ್ ಹಾದಿ ಖಚಿತ ಪಡಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಸೋಲು, ಏಳರಲ್ಲಿ ಗೆಲುವು ಕಂಡು 14 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸುವುದು ಪಕ್ಕಾ ಆಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.371 ಆಗಿದೆ.
  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಇವರು ಆಡಿದ ಎಂಟು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 12 ಅಂಕ ಸಂಪಾದಿಸಿದೆ. ಆರ್​ಆರ್​ +0.561 ರನ್​​ರೇಟ್ ಹೊಂದಿದೆ.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಒಂದು ಸ್ಥಾನ ಕುಸಿದು ಮೂರನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿ 10 ಅಂಕ ಸಂಪಾದಿಸಿ 0.600 ರನ್ ರೇಟ್ ಹೊಂದಿದೆ.
  • ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಆಡಿದ ಎಂಟು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 10 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.334.
  • ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದನೇ ಸ್ಥಾನದಲ್ಲಿದ್ದು, ಆಡಿದ ಒಂಬತ್ತು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ.  ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.572 ಆಗಿದೆ.
  • ಕೆಕೆಆರ್ ವಿರುದ್ಧದ ಗೆಲುವಿನ ಬಳಿಕ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಒಂದು ಸ್ಥಾನ ಮೇಲಕ್ಕೇರಿದ್ದು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. 8 ಅಂಕದೊಂದಿಗೆ ಡೆಲ್ಲಿಯ ನಿವ್ವಳ ರನ್ ರೇಟ್ 0.695 ಆಗಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಏಳನೇ ಸ್ಥಾನಕ್ಕೆ ಕುಸಿದಿದೆ. 8 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.419 ಆಗಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಆರರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ -0.006 ರನ್​​ರೇಟ್​ ಹೊಂದಿದೆ.
  • ಇತ್ತ ಆಡಿದ ಎಂಟು ಪಂದ್ಯಗಳ ಪೈಕಿ 6 ರಲ್ಲಿ ಸೋಲು ಎರಡರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ಅಂಕದೊಂದಿಗೆ -0.538 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.000

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು ಎಂಟು ಪಂದ್ಯಗಳಿಂದ 499 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಇವರು 368 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರಿದ್ದು7 ಪಂದ್ಯಗಳಿಂದ 305 ರನ್ ಸಿಡಿಸಿದ್ದಾರೆ. ಪಂಜಾಬ್ ತಂಡದ ಶಿಖರ್ ಧವನ್ 8 ಪಂದ್ಯಗಳಿಂದ 302 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆಡಿದ 9 ಪಂದ್ಯಗಳಿಂದ 290 ರನ್ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ಎಂಟು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 18 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಯಾದವ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಎಂಟು ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಉಮ್ರಾನ್ ಮಲಿಕ್ ಮೂರನೇ ಸ್ಥಾನಕ್ಕೆ ಕುಸಿದಿದ್ದು ಎಂಟು ಪಂದ್ಯಗಳಿಂದ 15 ವಿಕೆಟ್ ಕಿತ್ತಿದ್ದಾರೆ. ಇವರ ಜೊತೆಗೆ ಟಿ. ನಟರಾಜನ್ ಕೂಡ ಎಂಟು ಪಂದ್ಯಗಳಿಂದ 15 ವಿಕೆಟ್ ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಉಮೇಶ್ ಯಾದವ್ ಎಂಟು ಪಂದ್ಯಗಳಿಂದ 14 ವಿಕೆಟ್ ಪಡೆದು 5ನೇ ಸ್ಥಾನದಲ್ಲಿದ್ದಾರೆ.

PBKS vs LSG: ಐಪಿಎಲ್​​ನಲ್ಲಿಂದು ಕನ್ನಡಿಗರ ಸೆಣೆಸಾಟ: ಗೆಲ್ಲಬೇಕಾದ ಒತ್ತಡದಲ್ಲಿ ಪಂಜಾಬ್

Shreyas Iyer: ಸತತ ಐದನೇ ಸೋಲು: ಪಂದ್ಯ ಮುಗಿದ ಬಳಿಕ ಶ್ರೇಯಸ್ ಅಯ್ಯರ್ ಗರಂ: ಏನು ಹೇಳಿದ್ರು ಕೇಳಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?