IPL 2022 Points Table: ಆರನೇ ಸ್ಥಾನಕ್ಕೇರಿದ ಪಂಜಾಬ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಪಾಯಿಂಟ್ ಟೇಬಲ್:
- ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಏಳು ಪಂದ್ಯದಲ್ಲಿ ಒಂದರಲ್ಲಿ ಸೋಲು ಆರರಲ್ಲಿ ಗೆದ್ದು ಬೀಗಿದೆ. 12 ಅಂಕದೊಂದಿಗೆ ಗುಜರಾತ್ ನಿವ್ವಳ ರನ್ ರೇಟ್ +0.396 ಆಗಿದೆ.
- ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಫಿನಿಕ್ಸ್ನಂತೆ ಎದ್ದು ಬಂದು ಎರಡನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿ 10 ಅಂಕ ಸಂಪಾದಿಸಿ 0.691 ರನ್ ರೇಟ್ ಹೊಂದಿದೆ.
- ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. iವರು ಕೂಡ ಆಡಿದ ಏಳು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 10 ಅಂಕ ಸಂಪಾದಿಸಿದೆ. ಆರ್ಆರ್ +0.432 ರನ್ರೇಟ್ ಹೊಂದಿದೆ.
- ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಆಡಿದ ಎಂಟು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಒಟ್ಟು 10 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.334.
- ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದನೇ ಸ್ಥಾನದಲ್ಲಿದ್ದು, ಆಡಿದ ಎಂಟು ಪಂದ್ಯದಲ್ಲಿ ಮೂರರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ. ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.472 ಆಗಿದೆ.
- ಚೆನ್ನೈ ವಿರುದ್ಧದ ಗೆಲಯವಿನ ಬಳಿಕ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಎಂಟನೇ ಸ್ಥಾನದಿಂದ ಆರನೇ ಸ್ಥಾನಕ್ಕೇರಿದೆ. 8 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.419 ಆಗಿದೆ.
- ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.715 ಆಗಿದೆ.
- ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.080 ರನ್ರೇಟ್ನೊಂದಿಗೆ 7ನೇ ಸ್ಥಾನದಲ್ಲಿದೆ.
- ಇತ್ತ ಆಡಿದ ಎಂಟು ಪಂದ್ಯಗಳ ಪೈಕಿ 6 ರಲ್ಲಿ ಸೋಲು ಎರಡರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ಅಂಕದೊಂದಿಗೆ -0.538 ರನ್ರೇಟ್ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
- ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.000
ಆರೆಂಜ್ ಕ್ಯಾಪ್:
ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್ ಆರ್ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು ಏಳು ಪಂದ್ಯಗಳಿಂದ 491 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಭರ್ಜರಿ ಶತಕದೊಂದಿಗೆ ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಇವರು 368 ರನ್ ಗಳಿಸಿದ್ದಾರೆ. ಮೂರನೇ ಸ್ಥಾನಕ್ಕೆ ಪಂಜಾಬ್ ತಂಡದ ಶಿಖರ್ ಧವನ್ ಜಿಗಿದಿದ್ದು ಇವರು 8 ಪಂದ್ಯಗಳಿಂದ 302 ರನ್ ಕಲೆಹಾಕಿದ್ದಾರೆ. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕುಸಿದಿದ್ದು ಇವರು 6 ಪಂದ್ಯಗಳಲ್ಲಿ 295 ರನ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮುಂಬೈ ಆಟಗಾರ ತಿಲಕ್ ವರ್ಮಾ ಆಡಿದ ಎಂಟು ಪಂದ್ಯಗಳಿಂದ 272 ರನ್ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್:
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್ನಲ್ಲಿದ್ದಾರೆ. ಇವರು ಆಡಿದ ಏಳು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 18 ವಿಕೆಟ್ ಕಬಳಿಸಿದ್ದಾರೆ. ಟಿ. ನಟರಾಜನ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಏಳು ಪಂದ್ಯಗಳಿಂದ 15 ವಿಕೆಟ್ ಕಿತ್ತಿದ್ದಾರೆ. ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ ಇದ್ದು ಎಂಟು ಪಂದ್ಯಗಳಿಂದ 14 ವಿಕೆಟ್ ತಮ್ಮದಾಗಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಕುಲ್ದೀಪ್ ಯಾದವ್ ಇದ್ದು ಇವರು ಏಳು ಪಂದ್ಯಗಳಿಂದ 13 ಕಿತ್ತಿದ್ದಾರೆ. ಎಂಟು ಪಂದ್ಯಗಳಿಂದ 11 ವಿಕೆಟ್ ಪಡೆದಿರುವ ಉಮೇಶ್ ಯಾದವ್ 5ನೇ ಸ್ಥಾನದಲ್ಲಿದ್ದಾರೆ.
RCB vs RR, IPL 2022: ತಂಡದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಡುಪ್ಲೆಸಿಸ್: ಈ ಬಾರಿ ಕಂಪ್ಲೀಟ್ ಚೇಂಜ್
Ravindra Jadeja: ಪಂದ್ಯ ಮುಗಿದ ಬಳಿಕ ಈ ಬಾರಿ ರವೀಂದ್ರ ಜಡೇಜಾ ಸೋಲಿಗೆ ನೀಡಿದ ಕಾರಣವೇನು ಗೊತ್ತೇ?