AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾನ ಭೇಟಿಯಾಗಿದ್ದ ಅಭಿಮಾನಿ ಅರೆಸ್ಟ್..!

IPL 2022: ಆರ್​​ಸಿಬಿ ತಂಡ ಮುಂಬೈ ನೀಡಿದ್ದ 152 ರನ್​ಗಳ ಟಾರ್ಗೆಟ್ ಚೇಸ್ ಮಾಡುವ ವೇಳೆ ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಜ್ ರಾವತ್ ಬ್ಯಾಟಿಂಗ್ ಮಾಡುತ್ತಿದ್ದರು.

IPL 2022: ವಿರಾಟ್ ಕೊಹ್ಲಿ-ರೋಹಿತ್ ಶರ್ಮಾನ ಭೇಟಿಯಾಗಿದ್ದ ಅಭಿಮಾನಿ ಅರೆಸ್ಟ್..!
Rohit Sharma-Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Apr 11, 2022 | 5:16 PM

Share

ಶನಿವಾರ ಐಪಿಎಲ್ 2022 ರಲ್ಲಿ (IPL 2022) ನಡೆದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ (RCB vs MI) ನಡುವಣ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು. ಆರ್​ಸಿಬಿ-ಮುಂಬೈ ಅಭಿಮಾನಿಗಳ ಕೂಗು ಜೋರಾಗಿಯೇ ಇತ್ತು. ಇದರ ನಡುವೆ ಪಂದ್ಯ ನಡೆಯುತ್ತಿರುವಾಗ ಅಭಿಮಾನಿಯೊಬ್ಬರು ಮೈದಾನದೊಳಗೆ ಎಂಟ್ರಿ ಕೊಟ್ಟು ಒಂದು ಕ್ಷಣ ಎಲ್ಲರನ್ನೂ ದಂಗಾಗಿಸಿದ್ದರು. ಸೆಕ್ಯುರಿಟಿ ಕಣ್ಣು ತಪ್ಪಿಸಿ ಮೈದಾನದೊಳಕ್ಕೆ ಪ್ರವೇಶ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ (Viral Video) ಕೂಡ ಆಗಿತ್ತು.

ಆರ್​​ಸಿಬಿ ತಂಡ ಮುಂಬೈ ನೀಡಿದ್ದ 152 ರನ್​ಗಳ ಟಾರ್ಗೆಟ್ ಚೇಸ್ ಮಾಡುವ ವೇಳೆ ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಜ್ ರಾವತ್ ಬ್ಯಾಟಿಂಗ್ ಮಾಡುತ್ತಿದ್ದರು. ಪಂದ್ಯದ 12ನೇ ಓವರ್ ಮುಕ್ತಾಯವಾದ ಸಂದರ್ಭ ಅಭಿಮಾನಿಯೊಬ್ಬರು ಸೆಕ್ಯುರಿಟಿಗೆ ವಂಚಿಸಿ ದಿಢೀರ್ ಆಗಿ ಮೈದಾನಕ್ಕೆ ಪ್ರವೇಶಿಸಿದ್ದ. ಓಡಿ ಬಂದ ಅಭಿಮಾನಿ ನೇರವಾಗಿ ವಿರಾಟ್ ಕೊಹ್ಲಿಯ ಬಳಿ ತೆರಳಿದ್ದ. ಅಲ್ಲದೆ ಕೊಹ್ಲಿಗೆ ಶೇಕ್ ಹ್ಯಾಂಡ್ ನೀಡಿ ರೋಹಿತ್ ಶರ್ಮಾರತ್ತ ಓಡಿ ಹೋಗಿದ್ದ.

ಅಲ್ಲದೆ ಅಪ್ಪಿಕೊಳ್ಳುವಂತೆ ಕೇಳಿಕೊಂಡಿದ್ದ. ಮೇಲ್ನೋಟಕ್ಕೆ ಹಿಟ್​ಮ್ಯಾನ್ ಅಭಿಮಾನಿಯಾಗಿದ್ದರೂ, ಬಯೋ ಬಬಲ್ ಕಾರಣದಿಂದಾಗಿ ರೋಹಿತ್ ಶರ್ಮಾ ಹಗ್ ಮಾಡಲು ನಿರಾಕರಿಸಿದ್ದರು. ಅಲ್ಲದೆ ರೋಹಿತ್ ದೂರದಿಂದಲೇ ಹಗ್ ಮಾಡುವ ರೀತಿ ನಟಿಸಿದರು. ಅಷ್ಟರಲ್ಲಿ ಮೈದಾನಕ್ಕೆ ಧಾವಿಸಿದ ಪೊಲೀಸರು ಆತನನನ್ನು ವಶಕ್ಕೆ ಪಡೆದುಕೊಂಡಿದ್ದರು.

ಇದೀಗ ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ದಶರಥ್ ಜಾಧವ್ ಎಂದು ಗುರುತಿಸಲಾಗಿದೆ. ಅಲ್ಲದೆ 26 ವರ್ಷದ ದಶರಥನ ವಿರುದ್ದ ಪುಣೆ ತಾಲೇಗಾಂವ್ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಏಪ್ರಿಲ್ 10 ರ ಭಾನುವಾರದಂದು ಈ ಮಾಹಿತಿಯನ್ನು ನೀಡಿದ ಪೊಲೀಸ್ ಅಧಿಕಾರಿಯೊಬ್ಬರು ಆರೋಪಿ ಯುವಕ ಮಹಾರಾಷ್ಟ್ರದ ಸತಾರಾ ಜಿಲ್ಲೆಯವರು ಎಂದು ತಿಳಿಸಿದ್ದಾರೆ. ಜಾಧವ್ ವಿರುದ್ಧ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಮತ್ತು 353 (ಸಾರ್ವಜನಿಕ ಕರ್ತವ್ಯಕ್ಕೆ ತಡೆ ಮತ್ತು ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಾಲೇಗಾಂವ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮಧುಕರ್ ಸಾವಂತ್ ಹೇಳಿದ್ದಾರೆ. ಒಟ್ಟಿನಲ್ಲಿ ಅಭಿಮಾನ ಮೆರೆಯಲು ಮಾಡಿದ ಸಾಹಸದಿಂದಾಗಿ ಇದೀಗ ದಶರಥ್ ಜಾಧವ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಆರ್​ಸಿಬಿಗೆ ಹ್ಯಾಟ್ರಿಕ್ ಗೆಲುವು:

ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಸವಾರಿ ನಡೆಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್-15ರಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ, 6 ವಿಕೆಟ್‌ಗೆ 151 ರನ್‌ಗಳಿಸಿತು. ಸೂರ್ಯಕುಮಾರ್ ಯಾದವ್ (68*ರನ್, 37 ಎಸೆತ, 5 ಬೌಂಡರಿ, 6 ಸಿಕ್ಸರ್) ಏಕಾಂಗಿ ನಿರ್ವಹಣೆ ತೋರಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ಪ್ರತಿಯಾಗಿ ಆರ್‌ಸಿಬಿ, ಅನುಜ್ ರಾವತ್ (66 ರನ್, 47 ಎಸೆತ, 2 ಬೌಂಡರಿ, 6 ಸಿಕ್ಸರ್) ಹಾಗೂ ವಿರಾಟ್ ಕೊಹ್ಲಿ (48 ರನ್, 36 ಎಸೆತ, 5 ಬೌಂಡರಿ) ಕಟ್ಟಿದ ಅದ್ಭುತ ಇನಿಂಗ್ಸ್ ಫಲವಾಗಿ 18.3 ಓವರ್‌ಗಳಲ್ಲಿ 3 ವಿಕೆಟ್‌ಗೆ 152 ರನ್‌ಗಳಿಸಿ ಗೆಲುವು ಸಾಧಿಸಿತು.

ಈ ಗೆಲುವಿನೊಂದಿಗೆ ಐದನೇ ಸ್ಥಾನದಲ್ಲಿದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನಕ್ಕೆ ಜಿಗಿದಿದೆ. ಆರು ಅಂಕದೊಂದಿಗೆ ಆರ್​ಸಿಬಿ ನಿವ್ವಳ ರನ್ ರೇಟ್ 0.294 ಆಗಿದೆ. ಇತ್ತ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ. ಆಡಿದ ನಾಲ್ಕೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.181 ಆಗಿದೆ. ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ನಾಲ್ಕು ಸೋಲುಗಳನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಏಪ್ರಿಲ್ 12 ಮಂಗಳವಾರದಂದು ಆಡಲಿದೆ.

ಕ್ರೀಡಾಂಗಣದಲ್ಲಿ ಕಟ್ಟು ನಿಟ್ಟಿನ ಕ್ರಮ: ಬಿಸಿಸಿಐ ಈ ಬಾರಿಯ ಐಪಿಎಲ್​ನಲ್ಲಿ ಕೊರೋನಾ ಭೀತಿ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿಸಿದೆ. ಇದೀಗ ಅಭಿಮಾನಿಯೊಬ್ಬ ನೇರವಾಗಿ ಮೈದಾನಕ್ಕೆ ನುಗ್ಗಿರುವುದು ಬಿಸಿಸಿಐ ಚಿಂತೆಯನ್ನು ಹೆಚ್ಚಿಸಿದೆ. ಅಲ್ಲದೆ ಮುಂಬರುವ ಪಂದ್ಯಗಳಿಗೆ ಸ್ಟೇಡಿಯಂನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಹಾಗೆಯೇ ನಿಯಮ ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ದ ಪ್ರಕರಣಗಳನ್ನೂ ದಾಖಲಿಸಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ