ಐಪಿಎಲ್ ಸೀಸನ್ 15ರ 5ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ( SRH vs RR) ಮುಖಾಮುಖಿಯಾಗಲಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ಮೊದಲ ಪಂದ್ಯವಾಗಿದೆ. ಹೀಗಾಗಿ ಗೆಲುವಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ ಎರಡೂ ತಂಡಗಳು. ಇನ್ನು ಉಭಯ ತಂಡಗಳು ಬಲಿಷ್ಠವಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡವು ಬ್ಯಾಟಿಂಗ್ ಹೆಚ್ಚಾಗಿ ನಾಯಕ ಸಂಜು ಸ್ಯಾಮ್ಸನ್ ಮೇಲೆ ಅವಲಂಬಿತವಾಗಿದೆ. ಇನ್ನು ತಂಡದಲ್ಲಿ ಅನುಭವಿ ಜೋಸ್ ಬಟ್ಲರ್ ಕೂಡ ಇರುವುದು ರಾಜಸ್ಥಾನ್ ತಂಡದ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿದೆ.
ಹಾಗೆಯೇ ತಂಡದಲ್ಲಿ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಕೂಡ ತಂಡದಲ್ಲಿದ್ದಾರೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡವು ಅನುಭವಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಮೈದಾನಕ್ಕಿಳಿಯಲಿದೆ. ಹಾಗೆಯೇ ತಂಡದಲ್ಲಿ ನಿಕೋಲಸ್ ಪೂರನ್, ವೇಗಿ ಭುವನೇಶ್ವರ್ ಕುಮಾರ್ ಅವರಂತಹ ಆಟಗಾರರಿದ್ದಾರೆ.
SRH vs RR ನಡುವಿನ ಪಂದ್ಯವನ್ನು ಯಾವಾಗ ಆಡಲಾಗುತ್ತದೆ?
SRH vs RR ನಡುವಿನ ಈ ಪಂದ್ಯವು ಮಂಗಳವಾರ (29 ಮಾರ್ಚ್) ನಡೆಯಲಿದೆ.
SRH vs RR ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?
ಐಪಿಎಲ್ 2022ರ 5 ನೇ ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
SRH vs RR ಪಂದ್ಯ ಶುರು ಯಾವಾಗ?
SRH vs RR ನಡುವಿನ ಪಂದ್ಯ ರಾತ್ರಿ 7.30 ರಿಂದ ಶುರುವಾಗಲಿದೆ. ಟಾಸ್ 7:00 ಕ್ಕೆ ನಡೆಯಲಿದೆ.
SRH vs RR ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
SRH vs RR ನಡುವಿನ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು.
SRH vs RR ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ನೋಡಬಹುದಾಗಿದೆ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು