Ravi Shastri: ಐಪಿಎಲ್ ಶುರುವಾಗುತ್ತಿದ್ದಂತೆ ಅದೆಂಗೆ ಆಟಗಾರರ ಗಾಯ ಗುಣವಾಗುತ್ತೆ?
IPL 2022: ಸದ್ಯ ಟೀಮ್ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿದಿರುವ ರವಿ ಶಾಸ್ತ್ರಿ ಈ ಬಾರಿ ಐಪಿಎಲ್‌ನಲ್ಲಿ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ ಸೀಸನ್ 15 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಎಲ್ಲಾ ಆಟಗಾರರು ಐಪಿಎಲ್ಗಾಗಿ ಸಿದ್ದತೆಗಳನ್ನು ಆರಂಭಿಸಿದೆ. ಆದರೆ ಈ ಸಿದ್ದತೆಗಳ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾ ಮಾಜಿ ಕೋಚ್ ರವಿ ಶಾಸ್ತ್ರಿ ಗಂಭೀರ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಏಕೆಂದರೆ ಕೆಲ ಆಟಗಾರರು ಐಪಿಎಲ್ಗೂ ಮುನ್ನ ಗಾಯದ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಇನ್ನು ಕೆಲ ಆಟಗಾರರು ಗಾಯದ ಸಮಸ್ಯೆ ಕಾರಣ ಆಯ್ಕೆಗೆ ಲಭ್ಯರಿಲ್ಲ ಎಂದಿದ್ದರು. ಆದರೆ ಇದೀಗ ಟೀಮ್ ಇಂಡಿಯಾದಿಂದ ಹೊರಗುಳಿದ ಆಟಗಾರರು ಇದೀಗ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೆ ಪ್ರಸ್ತಾಪಿಸಿರುವ ರವಿ ಶಾಸ್ತ್ರಿ, ಐಪಿಎಲ್ ವಿಶ್ವದ ‘ಶ್ರೇಷ್ಠ ಫಿಸಿಯೋ’ಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ, ಅಶ್ವಿನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್ ಸೇರಿದಂತೆ ಅನೇಕ ಆಟಗಾರರು ಗಾಯದ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಇದೀಗ ಈ ಎಲ್ಲಾ ಆಟಗಾರರು ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿಯೇ ರವಿ ಶಾಸ್ತ್ರಿ ಐಪಿಎಲ್ ಆಟಗಾರರಿಗೆ ಚಿಕಿತ್ಸೆ ನೀಡುವ ಫಿಸಿಯೋ ಆಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಐಪಿಎಲ್ ಹರಾಜಿಗೂ ಮುನ್ನ ಅನೇಕ ಆಟಗಾರರು ಫಿಟ್ ಆಗಲು ಒಲವು ತೋರುವುದರಿಂದ, ಐಪಿಎಲ್ ವಿಶ್ವದ ‘ಶ್ರೇಷ್ಠ ಫಿಸಿಯೋ’ಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್ 15ನೇ ಆವೃತ್ತಿಗೆ ಮುನ್ನ ಸ್ಟಾರ್ ಸ್ಪೋರ್ಟ್ಸ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸ್ತ್ರಿ, ಐಪಿಎಲ್ ವಿಶ್ವದ ಶ್ರೇಷ್ಠ ಲೀಗ್‌ಗಳಲ್ಲಿ ಒಂದಾಗಿದೆ. ಇದು ವಿಶ್ವದ ಶ್ರೇಷ್ಠ ಫಿಸಿಯೋ ಕೂಡ ಹೌದು, ಏಕೆಂದರೆ ಐಪಿಎಲ್ ಹರಾಜಿನ ಮೊದಲು ಪ್ರತಿಯೊಬ್ಬರೂ ಫಿಟ್ ಆಗಲು ಬಯಸುತ್ತಾರೆ. ಏಕೆಂದರೆ ಪ್ರತಿಯೊಬ್ಬರೂ ಐಪಿಎಲ್‌ನಲ್ಲಿ ಆಡಲು ಬಯಸುತ್ತಾರೆ ಎಂದಿದ್ದಾರೆ.
ಇದೀಗ ಟೀಮ್ ಇಂಡಿಯಾ ಮಾಜಿ ಕೋಚ್ ನೀಡಿರುವ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ ಆಟಗಾರರು ಗಾಯದ ಭಯದಿಂದಾಗಿ ಐಪಿಎಲ್ಗಾಗಿ ಟೀಮ್ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ. ಸದ್ಯ ಟೀಮ್ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿದಿರುವ ರವಿ ಶಾಸ್ತ್ರಿ ಈ ಬಾರಿ ಐಪಿಎಲ್‌ನಲ್ಲಿ ಕಾಮೆಂಟೇಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: IPL 2022: ಐಪಿಎಲ್‌ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!
ಇದನ್ನೂ ಓದಿ: IPL 2022: ಐಪಿಎಲ್‌ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಇವರೇ..!
ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?
(IPL 2022: Ravi Shastri takes a dig at players’ FITNESS issues)




