ಐಪಿಎಲ್ನ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಆರ್‌ಸಿಬಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ಇಂಡಿಯನ್ಸ್ ನೀಡಿದ 152 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್‌ಸಿಬಿ ಉತ್ತಮ ಆರಂಭ ಪಡೆದಿತ್ತು. ಫಾಫ್ ಡುಪ್ಲೆಸಿಸ್ ಹಾಗೂ ಅನೂಜ್ ರಾವತ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್‌ಗೆ 50 ರನ್ಗಳ ಜೊತೆಯಾಟದೊಂದಿಗೆ ಆರ್‌ಸಿಬಿ ಭರ್ಜರಿ ಆರಂಭ ಪಡೆದಿತ್ತು. ಈ ವೇಳೆ ಡುಪ್ಲೆಸಿಸ್ ಔಟಾಗಿದ್ದರು. ಇದಾದ ಬಳಿಕ ಅನೂಜ್ ರಾವತ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಗಿದ್ದರು. ಈ ಜೋಡಿ 2ನೇ ವಿಕೆಟ್‌ಗೆ 80 ರನ್ಗಳ ಜೊತೆಯಾಟವಾಡಿದ್ದರು.
ಈ ಎರಡು ಜೊತೆಯಾಟದೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ದ ಆರ್‌ಸಿಬಿ ಕೊನೆಗೂ ಮೇಲುಗೈ ಸಾಧಿಸಿದೆ. ಏಕೆಂದರೆ ಕಳೆದ 14 ಸೀಸನ್ ಐಪಿಎಲ್ನಲ್ಲಿ ಆರ್‌ಸಿಬಿ ಬ್ಯಾಟ್ಸ್ಮನ್ಗಳು ಮೊದಲ ಹಾಗೂ 2ನೇ ವಿಕೆಟ್‌ಗೆ 50 ರನ್ಗಳ ಜೊತೆಯಾಟವಾಡಿಲ್ಲ. ಇದೀಗ ಅನೂಜ್ ರಾವತ್ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಜೊತೆ ಎರಡು ಅರ್ಧಶತಕದ ಜೊತೆಯಾಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ದ ಮೊದಲ ಹಾಗೂ 2ನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿ ಆರ್‌ಸಿಬಿ ವಿಶೇಷ ದಾಖಲೆ ನಿರ್ಮಿಸಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ ಆಡಿದರು. ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಲಾ 26 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟಾರ್ ಬ್ಯಾಟರ್ಗಳೆಲ್ಲ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಆದರೆ, ಏಳನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ (68*) ಜತೆ ಕೈಜೋಡಿಸಿದ ಜಯದೇವ್ ಉನಾದ್ಕಟ್ ಸಮಯೋಚಿತ ಆಟವಾಡಿ ಬೆಂಬಲವನ್ನು ನೀಡಿದರು. ಪರಿಣಾಮ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿತು.
ಗೆಲ್ಲಲು ಸಾಧಾರಣ ಸವಾಲು ಪಡೆದ ಆರ್‌ಸಿಬಿ ತಂಡವು ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ನಾಯಕ ಫಾ ಡುಪ್ಲೆಸಿಸ್ (16) ಮತ್ತು ಅನುಜ್ ರಾವತ್ ಮೊದಲ ವಿಕೆಟಿಗೆ 8.1 ಓವರ್‌ಗಳಲ್ಲಿ 50 ರನ್ ಪೇರಿಸಿದರು. ನಂತರ ವಿರಾಟ್ ಕೊಹ್ಲಿ (48)-ರಾವತ್ (66) ಭರ್ಜರಿ ಆಟವಾಡಿದರು. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18.3 ಓವರ್ನಲ್ಲೇ 152 ರನ್ ಬಾರಿಸಿ ಜಯ ಸಾಧಿಸಿತು.
ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ
ಇದನ್ನೂ ಓದಿ: Prithvi Shaw: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸೆಹ್ವಾಗ್ ದಾಖಲೆ ಸರಿಗಟ್ಟಿದ ಪೃಥ್ವಿ ಶಾ