ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಹೊಸ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ. ಈಗಾಗಲೇ ಆರ್ಸಿಬಿ ನಾಯಕನನ್ನು ಫೈನಲ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಅನೌನ್ಸ್ ಮಾಡಲಿದೆ. ಇದಕ್ಕೂ ಮುನ್ನ ಆರ್ಸಿಬಿ ತಂಡದ ಮುಂದಿನ ನಾಯಕ ಯಾರು ಎಂಬುದರ ಬಗ್ಗೆ ಆರ್ಸಿಬಿ ಫ್ರಾಂಚೈಸಿ ಸಣ್ಣ ಸುಳಿವು ನೀಡಿದೆ. ಮೆಗಾ ಹರಾಜಿಗೂ ಮುನ್ನವೇ ಆರ್ಸಿಬಿ ಫ್ರಾಂಚೈಸಿ ನಾಯಕತ್ವದ ಗುಣಗಳಿರುವ ಆಟಗಾರನ ಖರೀದಿಗೆ ಪ್ಲ್ಯಾನ್ ರೂಪಿಸಿತ್ತು. ಅದರಂತೆ ಆರ್ಸಿಬಿ ಹಿಟ್ ಲೀಸ್ಟ್ನಲ್ಲಿ ಮುಂಚೂಣಿಯಲ್ಲಿದ್ದ ಹೆಸರು ಫಾಫ್ ಡುಪ್ಲೆಸಿಸ್. ಇದೀಗ ಡುಪ್ಲೆಸಿಸ್ ಆರ್ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ನಾಯಕನ ಪಟ್ಟ ಸಿಗುವುದು ಖಚಿತ.
ಈ ಬಗ್ಗೆ ತಂಡದ ಡೈರೆಕ್ಟರ್ ಮೈಕ್ ಹೆಸನ್ ಮಾತನಾಡುತ್ತಿರುವ ವಿಡಿಯೋವೊಂದನ್ನು ಆರ್ಸಿಬಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಹೆಸನ್ ಡುಪ್ಲೆಸ್ಸಿ ಅವರ ನಾಯಕತ್ವದ ಕೌಶಲ್ಯ ಮತ್ತು ತಂಡಕ್ಕೆ ಅವರ ಪ್ರಾಮುಖ್ಯತೆಯ ಬಗ್ಗೆ ಮಾತನಾಡುತ್ತಿರುವುದು ಕಾಣಬಹುದು. ಅಷ್ಟೇ ಅಲ್ಲದೆ ಡು ಪ್ಲೆಸಿಸ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವದ ಅನುಭವವನ್ನು ಹೊಂದಿರುವ ಬಗ್ಗೆ ಇತರಿಗೆ ಹೆಸನ್ ವಿವರಿಸಿದ್ದಾರೆ. ಹೀಗಾಗಿ ನಾವು ಅವರನ್ನು ಹರಾಜಿನಲ್ಲಿ ಖರೀದಿಸಬೇಕಾಗಿದೆ. ಇದಕ್ಕಾಗಿ ದೊಡ್ಡ ಮೊತ್ತವೊಂದನ್ನು ಫಾಫ್ ಡುಪ್ಲೆಸಿಸ್ಗಾಗಿ ತೆಗೆದಿಡಬೇಕಾಗುತ್ತದೆ ಎಂದು ಮೈಕ್ ಹೆಸನ್ ಮೆಗಾ ಹರಾಜಿಗೂ ಮುನ್ನ ನಡೆದ ಚರ್ಚೆಯಲ್ಲಿ ತಮ್ಮ ಪ್ಲ್ಯಾನ್ ಅನ್ನು ಮುಂದಿಟ್ಟಿದ್ದರು. ಅದರಂತೆ ಮೆಗಾ ಹರಾಜು ಮೂಲಕ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಬರೋಬ್ಬರಿ 7 ಕೋಟಿ ರೂ. ನೀಡಿ ಖರೀದಿಸಿದೆ.
ಇನ್ನು ವಿರಾಟ್ ಕೊಹ್ಲಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕತ್ವದ ಅನುಭವ ಹೊಂದಿರುವ ಏಕೈಕ ಆಯ್ಕೆ ಫಾಫ್ ಡುಪ್ಲೆಸಿಸ್ ಮಾತ್ರ. ಇನ್-ಫಾರ್ಮ್ ಓಪನರ್ ಕೂಡ ಆಗಿರುವ ಫಾಫ್ ಡು ಪ್ಲೆಸಿಸ್ ಆರ್ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆ. ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ಡುಪ್ಲೆಸಿಸ್ ಐಪಿಎಲ್ 2022 ರ ಸಂಪೂರ್ಣ ಅವಧಿಗೆ ಲಭ್ಯವಿರುತ್ತಾರೆ. ನಾಯಕತ್ವದ ಗುಣಗಳಿರುವ ಡುಪ್ಲೆಸಿಸ್ ಅವರನ್ನು ಮೊದಲ ಪ್ಲ್ಯಾನ್ ರೂಪಿಸಿ ಖರೀದಿಸಿರುವ ಆರ್ಸಿಬಿ ಅವರಿಗೇನೇ ಕ್ಯಾಪ್ಟನ್ ಪಟ್ಟ ನೀಡುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಮುಂದಿನ ಸೀಸನ್ನಲ್ಲಿ ಆರ್ಸಿಬಿ ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸ್, ಚಮಾ ಮಿಲಿಂದ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲವ್ನೀತ್ ಸಿಸೋಡಿಯಾ, ಡೇವಿಡ್ ವಿಲ್ಲಿ
ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?
ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್