AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RR ವಿರುದ್ದದ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ RCB

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

IPL 2022: RR ವಿರುದ್ದದ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ RCB
RCB
TV9 Web
| Updated By: ಝಾಹಿರ್ ಯೂಸುಫ್|

Updated on: Apr 06, 2022 | 5:58 PM

Share

ರಾಜಸ್ಥಾನ್ ರಾಯಲ್ಸ್​ ವಿರುದ್ದ ಗೆಲ್ಲುವ ಮೂಲಕ ಆರ್​ಸಿಬಿ ತಂಡವು ಹೊಸ ದಾಖಲೆ ಬರೆದಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ 169 ರನ್​ಗಳ ಟಾರ್ಗೆಟ್​ನಲ್ಲಿ ಚೇಸ್ ಮಾಡುವ ಮೂಲಕ ಆರ್​ಸಿಬಿ 4 ವಿಕೆಟ್​ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐಪಿಎಲ್​ನಲ್ಲಿ 100 ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಗೆ ಆರ್​ಸಿಬಿ ಕೂಡ ಸೇರ್ಪಡೆಯಾಗಿದೆ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಇದು ಆರ್​ಸಿಬಿ ತಂಡದ ನೂರನೇ ಗೆಲುವಾಗಿತ್ತು. ಐಪಿಎಲ್​ನಲ್ಲಿ ಇದುವರೆಗೆ ಮೂರು ತಂಡಗಳು ಮಾತ್ರ 100 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿದೆ. ಈ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವಿದ್ದರೆ, ಮೂರನೇ ಸ್ಥಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವಿದೆ. ಇದೀಗ ಈ ಪಟ್ಟಿಗೆ ನಾಲ್ಕನೇ ತಂಡವಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಎಂಟ್ರಿ ಕೊಟ್ಟಿದೆ. ಈ ಮೂಲಕ ಐಪಿಎಲ್​ನಲ್ಲಿ 100 ಪಂದ್ಯಗಳನ್ನು ಗೆದ್ದ ದಾಖಲೆ ಪಟ್ಟಿಗೆ ಆರ್​ಸಿಬಿ ಕೂಡ ಸೇರ್ಪಡೆಯಾಗಿದೆ.

ಐಪಿಎಲ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದ ತಂಡಗಳು:

ಮುಂಬೈ ಇಂಡಿಯನ್ಸ್ – 125 ಪಂದ್ಯಗಳು

ಚೆನ್ನೈ ಸೂಪರ್ ಕಿಂಗ್ಸ್ – 117 ಪಂದ್ಯಗಳು

ಕೊಲ್ಕತ್ತಾ ನೈಟ್ ರೈಡರ್ಸ್​ – 109 ಪಂದ್ಯಗಳು

RCB – 100* ಪಂದ್ಯಗಳು

ಇನ್ನು ಗೆಲುವಿನೊಂದಿಗೆ ಸತತವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದ ಖ್ಯಾತಿ ಆರ್​ಸಿಬಿ ಪಾಲಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ಐಪಿಎಲ್​ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡರೂ ಆರ್​ಸಿಬಿ ವಿರುದ್ದ ಮಾತ್ರ ಮುಗ್ಗರಿಸುತ್ತಿದೆ. ಇದಕ್ಕೆ ಸಾಕ್ಷಿಯಾಗಿಯೇ ಆರ್​ಸಿಬಿ ತಂಡವು ಸತತವಾಗಿ 5 ಬಾರಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿರುವುದು. ಅಂದರೆ ಕಳೆದ ಎರಡು ಸೀಸನ್​​ಗಳಿಂದ ರಾಜಸ್ಥಾನ್ ರಾಯಲ್ಸ್​ ತಂಡಕ್ಕೆ ಆರ್​ಸಿಬಿ ವಿರುದ್ದ ಗೆಲ್ಲಲು ಸಾಧ್ಯವಾಗಿಲ್ಲ.

ಈ ಮೂಲಕ ಸತತ 5 ಬಾರಿ ಸೋಲುವ ಮೂಲಕ ಹೀನಾಯ ದಾಖಲೆಯೊಂದನ್ನು ಬರೆದಿದೆ. ಇತ್ತ ಆರ್​ಸಿಬಿ ಸತತ 5 ಬಾರಿ ಗೆಲ್ಲುವ ಮೂಲಕ ರಾಜಸ್ಥಾನ್ ವಿರುದ್ದ ಮೇಲುಗೈ ಸಾಧಿಸಿದೆ. ಇನ್ನು ಆರ್​​ಸಿಬಿ ಸತತವಾಗಿ ಅತೀ ಹೆಚ್ಚು ಪಂದ್ಯ ಗೆದ್ದಿರುವುದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ. 2011 ರಿಂದ 2015 ರವರೆಗೆ ಡೆಲ್ಲಿ ವಿರುದ್ದ ಆರ್​ಸಿಬಿ 8 ಪಂದ್ಯಗಳನ್ನು ಸತತವಾಗಿ ಗೆದ್ದುಕೊಂಡಿತು. ಇದು ಕೂಡ ಒಂದು ದಾಖಲೆಯಾಗಿದೆ. ಇದೀಗ ಸತತವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 5 ಬಾರಿ ಸೋಲಿಸಿ ಹೊಸ ದಾಖಲೆ ಬರೆಯುವತ್ತ ಆರ್​ಸಿಬಿ ಮುನ್ನುಗ್ಗುತ್ತಿದೆ.

ಒಟ್ಟಿನಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ದದ ಗೆಲುವಿನೊಂದಿಗೆ ಆರ್​ಸಿಬಿ ತಂಡವು ಗೆಲುವಿನ ನಾಗಲೋಟವನ್ನು ಮುಂದುವರೆಸಿದೆ. ಮುಂದಿನ ಪಂದ್ಯದಲ್ಲಿ ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಸೆಣಸಲಿದೆ. ಈ ಪಂದ್ಯವು ಏಪ್ರಿಲ್ 9 ರಂದು ನಡೆಯಲಿದ್ದು, ಈ ಪಂದ್ಯದ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್ , ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ