ರಾಜಸ್ಥಾನ್ ರಾಯಲ್ಸ್ ವಿರುದ್ದ ಗೆಲ್ಲುವ ಮೂಲಕ ಆರ್ಸಿಬಿ ತಂಡವು ಹೊಸ ದಾಖಲೆ ಬರೆದಿದೆ. ರಾಜಸ್ಥಾನ್ ರಾಯಲ್ಸ್ ನೀಡಿದ 169 ರನ್ಗಳ ಟಾರ್ಗೆಟ್ನಲ್ಲಿ ಚೇಸ್ ಮಾಡುವ ಮೂಲಕ ಆರ್ಸಿಬಿ 4 ವಿಕೆಟ್ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐಪಿಎಲ್‌ನಲ್ಲಿ 100 ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಗೆ ಆರ್ಸಿಬಿ ಕೂಡ ಸೇರ್ಪಡೆಯಾಗಿದೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇದು ಆರ್ಸಿಬಿ ತಂಡದ ನೂರನೇ ಗೆಲುವಾಗಿತ್ತು. ಐಪಿಎಲ್‌ನಲ್ಲಿ ಇದುವರೆಗೆ ಮೂರು ತಂಡಗಳು ಮಾತ್ರ 100 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದಿದೆ. ಈ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವಿದ್ದರೆ, ಮೂರನೇ ಸ್ಥಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವಿದೆ. ಇದೀಗ ಈ ಪಟ್ಟಿಗೆ ನಾಲ್ಕನೇ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಟ್ರಿ ಕೊಟ್ಟಿದೆ. ಈ ಮೂಲಕ ಐಪಿಎಲ್‌ನಲ್ಲಿ 100 ಪಂದ್ಯಗಳನ್ನು ಗೆದ್ದ ದಾಖಲೆ ಪಟ್ಟಿಗೆ ಆರ್ಸಿಬಿ ಕೂಡ ಸೇರ್ಪಡೆಯಾಗಿದೆ.
ಐಪಿಎಲ್‌ನಲ್ಲಿ 100 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳನ್ನು ಗೆದ್ದ ತಂಡಗಳು:
ಮುಂಬೈ ಇಂಡಿಯನ್ಸ್ – 125 ಪಂದ್ಯಗಳು
ಚೆನ್ನೈ ಸೂಪರ್ ಕಿಂಗ್ಸ್ – 117 ಪಂದ್ಯಗಳು
ಕೊಲ್ಕತ್ತಾ ನೈಟ್ ರೈಡರ್ಸ್ – 109 ಪಂದ್ಯಗಳು
RCB – 100* ಪಂದ್ಯಗಳು
ಇನ್ನು ಗೆಲುವಿನೊಂದಿಗೆ ಸತತವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದ ಖ್ಯಾತಿ ಆರ್ಸಿಬಿ ಪಾಲಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ಐಪಿಎಲ್‌ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡರೂ ಆರ್ಸಿಬಿ ವಿರುದ್ದ ಮಾತ್ರ ಮುಗ್ಗರಿಸುತ್ತಿದೆ. ಇದಕ್ಕೆ ಸಾಕ್ಷಿಯಾಗಿಯೇ ಆರ್ಸಿಬಿ ತಂಡವು ಸತತವಾಗಿ 5 ಬಾರಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿರುವುದು. ಅಂದರೆ ಕಳೆದ ಎರಡು ಸೀಸನ್ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆರ್ಸಿಬಿ ವಿರುದ್ದ ಗೆಲ್ಲಲು ಸಾಧ್ಯವಾಗಿಲ್ಲ.
ಈ ಮೂಲಕ ಸತತ 5 ಬಾರಿ ಸೋಲುವ ಮೂಲಕ ಹೀನಾಯ ದಾಖಲೆಯೊಂದನ್ನು ಬರೆದಿದೆ. ಇತ್ತ ಆರ್ಸಿಬಿ ಸತತ 5 ಬಾರಿ ಗೆಲ್ಲುವ ಮೂಲಕ ರಾಜಸ್ಥಾನ್ ವಿರುದ್ದ ಮೇಲುಗೈ ಸಾಧಿಸಿದೆ. ಇನ್ನು ಆರ್ಸಿಬಿ ಸತತವಾಗಿ ಅತೀ ಹೆಚ್ಚು ಪಂದ್ಯ ಗೆದ್ದಿರುವುದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ. 2011 ರಿಂದ 2015 ರವರೆಗೆ ಡೆಲ್ಲಿ ವಿರುದ್ದ ಆರ್ಸಿಬಿ 8 ಪಂದ್ಯಗಳನ್ನು ಸತತವಾಗಿ ಗೆದ್ದುಕೊಂಡಿತು. ಇದು ಕೂಡ ಒಂದು ದಾಖಲೆಯಾಗಿದೆ.
ಇದೀಗ ಸತತವಾಗಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 5 ಬಾರಿ ಸೋಲಿಸಿ ಹೊಸ ದಾಖಲೆ ಬರೆಯುವತ್ತ ಆರ್ಸಿಬಿ ಮುನ್ನುಗ್ಗುತ್ತಿದೆ.
ಒಟ್ಟಿನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದದ ಗೆಲುವಿನೊಂದಿಗೆ ಆರ್ಸಿಬಿ ತಂಡವು ಗೆಲುವಿನ ನಾಗಲೋಟವನ್ನು ಮುಂದುವರೆಸಿದೆ. ಮುಂದಿನ ಪಂದ್ಯದಲ್ಲಿ ಆರ್ಸಿಬಿ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ ಸೆಣಸಲಿದೆ. ಈ ಪಂದ್ಯವು ಏಪ್ರಿಲ್ 9 ರಂದು ನಡೆಯಲಿದ್ದು, ಈ ಪಂದ್ಯದ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಆರ್ಸಿಬಿ ಪರ ಕಣಕ್ಕಿಳಿಯಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB):
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್ , ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.
ಇದನ್ನೂ ಓದಿ: IPL 2022: ಐಪಿಎಲ್ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!
ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್