IPL 2022: RCB ಆರಂಭಿಕ ಆಟಗಾರ ಬದಲಾಗಲಿದೆಯಾ?

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

IPL 2022: RCB ಆರಂಭಿಕ ಆಟಗಾರ ಬದಲಾಗಲಿದೆಯಾ?
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2022 | 7:32 PM

IPL 2022 ಸೀಸನ್​ 15ನ ಮೊದಲಾರ್ಧವನ್ನು RCB ತಂಡ ಭರ್ಜರಿಯಾಗಿ ಮುಗಿಸಿದೆ. 7 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನವನ್ನು ಅಲಂಕರಿಸಿದೆ. ಇದೀಗ ಆರ್​ಸಿಬಿ ತಂಡವು ದ್ವಿತಿಯಾರ್ಧಕ್ಕಾಗಿ ಭರ್ಜರಿ ತಯಾರಿಯಲ್ಲಿದೆ. 2ನೇ ಹಂತದಲ್ಲಿ ಆರ್​ಸಿಬಿ ತಂಡದ ಮೊದಲ ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್. ಮೊದಲ ಎರಡು ಪಂದಗಳಲ್ಲಿ ಸೋತಿದ್ದ ಎಸ್​ಆರ್​​ಹೆಚ್​ ತಂಡವು ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಕಂಬ್ಯಾಕ್ ಮಾಡಿದೆ. ಹೀಗಾಗಿ ಆರ್​ಸಿಬಿಗೆ ಎಸ್​ಆರ್​ಹೆಚ್​ ಕಡೆಯಿಂದ ಕಠಿಣ ಪೈಪೋಟಿ ಎದುರಾಗಬಹುದು.

ಇತ್ತ ಆರ್​ಸಿಬಿ ತಂಡವು ಬಲಿಷ್ಠವಾಗಿದ್ದರೂ, ಅತೀ ದೊಡ್ಡ ಸಮಸ್ಯೆ ಎನಿಸಿಕೊಂಡಿರುವುದು ಆರಂಭಿಕ ಆಟಗಾರನದ್ದು. ಅಂದರೆ ಆರ್​ಸಿಬಿ ತಂಡವು ಉತ್ತಮ ಆರಂಭ ಪಡೆಯುತ್ತಿಲ್ಲ. ಆರಂಭಿಕನಾಗಿ ಆಡುತ್ತಿರುವ ಅನೂಜ್ ರಾವತ್ ಪಂಜಾಬ್ ಕಿಂಗ್ಸ್​ ವಿರುದ್ದದ ಮೊದಲ ಪಂದ್ಯದಲ್ಲಿ 21 ರನ್​ಗಳಿಸಿ ಔಟಾಗಿದ್ದರು. ಇನ್ನು ಕೆಕೆಆರ್​ ವಿರುದ್ದದ 2ನೇ ಪಂದ್ಯದಲ್ಲಿ ಝಿರೋಗೆ ವಿಕೆಟ್ ಒಪ್ಪಿಸಿದ್ದರು. ಹಾಗೆಯೇ 3ನೇ ಪಂದ್ಯದಲ್ಲಿ 26 ರನ್​ಗಳಿಸಿ ವಿಕೆಟ್ ಕೈಚೆಲ್ಲಿದ್ದರು. ಇದಾಗ್ಯೂ ಮುಂಬೈ ಇಂಡಿಯನ್ಸ್ ವಿರುದ್ದ ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಆ ಬಳಿಕ ಸಿಎಸ್​ಕೆ ವಿರುದ್ದ ಕೇವಲ 12 ರನ್​ಗಳಿಸಿದರೆ,ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮತ್ತೆ ಝಿರೋಗೆ ಔಟ್ ಆಗಿದ್ದರು. ಅಲ್ಲದೆ ಲಕ್ನೋ ವಿರುದ್ದ ಕೇವಲ 4 ರನ್​ಗಳಿಸಿ ಪೆವಿಲಿಯನ್ ಕಡೆ ಮುಖ ಮಾಡಿದ್ದರು.

ಅಂದರೆ ಅನೂಜ್ ರಾವತ್ 7 ಇನಿಂಗ್ಸ್​ಗಳಲ್ಲಿ ಕಲೆಹಾಕಿದ ಒಟ್ಟು ಸ್ಕೋರ್ 129 ರನ್ ಮಾತ್ರ. ಈ ವೇಳೆ 116 ಎಸೆತಗಳನ್ನು ಎದುರಿಸಿದ್ದರು. ಅಂದರೆ ಪವರ್​ಪ್ಲೇನಲ್ಲಿ ಬ್ಯಾಟಿಂಗ್ ಮಾಡಿದರೂ ಅನೂಜ್ ರಾವತ್ ದೊಡ್ಡ ಮೊತ್ತಗಳಿಸಲು ಸಾಧ್ಯವಾಗಿಲ್ಲ. ಅದರಲ್ಲೂ ಪವರ್​ಪ್ಲೇನಲ್ಲೇ ವಿಕೆಟ್ ಕೈಚೆಲ್ಲುತ್ತಿರುವುದು ಆರ್​ಸಿಬಿ ತಂಡದ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಅನೂಜ್ ರಾವತ್ ಬೇಗನೆ ವಿಕೆಟ್ ಒಪ್ಪಿಸುತ್ತಿರುವ ಪರಿಣಾಮ ಫಾಫ್ ಡುಪ್ಲೆಸಿಸ್ ನಿಧಾನಗತಿಯಲ್ಲಿ ಆಡುತ್ತಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಕೊಹ್ಲಿ ಕೂಡ ವಿಫಲರಾಗುತ್ತಿರುವುದು ಕೂಡ ಉಳಿದ ಬ್ಯಾಟ್ಸ್​ಮನ್​ಗಳ ಮೇಲೆ ಹೆಚ್ಚಿನ ಒತ್ತಡ ಬೀರುತ್ತಿದೆ.

ಇದಾಗ್ಯೂ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್, ಶಹಬಾಜ್ ಅಹ್ಮದ್ ಹಾಗೂ ದಿನೇಶ್ ಕಾರ್ತಿಕ್ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿರುವ ಕಾರಣ ತಂಡದ ಆರಂಭಿಕ ವೈಫಲ್ಯ ಮುನ್ನಲೆಗೆ ಬರುತ್ತಿಲ್ಲ. ಆದರೆ ಚೇಸಿಂಗ್ ವೇಳೆ ಆರಂಭಿಕರು ಬೇಗನೆ ಔಟಾದರೆ ಅದು ಇಡೀ ಬ್ಯಾಟಿಂಗ್ ಬ್ಯಾಲೆನ್ಸ್​ ಅನ್ನು ತಪ್ಪಿಸಲಿದೆ. ಹೀಗಾಗಿ ದ್ವಿತಿಯಾರ್ಧದಲ್ಲಿ ಆರ್​ಸಿಬಿ ತಂಡವು ಹೊಸ ಆಟಗಾರನಿಗೆ ಆರಂಭಿಕನಾಗಿ ಅವಕಾಶ ನೀಡುವ ಸಾಧ್ಯತೆಯಿದೆ.

ಈ ಪಟ್ಟಿಯಲ್ಲಿ ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೋಮ್ರರ್ ಹೆಸರು ಮುಂಚೂಣಿಯಲ್ಲಿದೆ. ಏಕೆಂದರೆ ಈ ಆಟಗಾರರು ಈ ಹಿಂದೆ ಆರಂಭಿಕರಾಗಿ ಆಡಿದ ಅನುಭವ ಹೊಂದಿದ್ದಾರೆ. ಆದರೆ ಇಲ್ಲಿ ಫಿನ್ ಅಲೆನ್ ಅವರನ್ನು ಆಡಿಸಿದ್ರೆ ಒಬ್ಬ ವಿದೇಶಿ ಆಟಗಾರ ಹೊರಗುಳಿಯಬೇಕಾಗುತ್ತದೆ. ಇನ್ನು ಸುಯಶ್ ಪ್ರಭುದೇಸಾಯಿ ಈಗಾಗಲೇ ಪ್ಲೇಯಿಂಗ್ 11 ನ ಭಾಗವಾಗಿದ್ದು, ಹಾಗಾಗಿ ಅವರಿಗೆ ಭಡ್ತಿ ನೀಡುವುದು ಉತ್ತಮ ಎಂಬ ಅಭಿಪ್ರಾಯಗಳು ಕೂಡ ಕೇಳಿ ಬರುತ್ತಿದೆ. ಸುಯಶ್ ಆರಂಭಿಕನಾಗಿ ಆಡುವುದರಿಂದ ಮತ್ತೋರ್ವ ಆಲ್​ರೌಂಡರ್​ಗೂ ತಂಡದಲ್ಲಿ ಸ್ಥಾನ ನೀಡಬಹುದು. ಈ ಮೂಲಕ ಬೌಲಿಂಗ್ ಅನ್ನು ಸಹ ಬಲಿಷ್ಠಗೊಳಿಸಬಹುದು.

ಇದಲ್ಲದೆ ವಿರಾಟ್ ಕೊಹ್ಲಿ ಅವರನ್ನೂ ಸಹ ಆರಂಭಿಕನಾಗಿ ಆಡಿಸಬಹುದು. ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕೊಹ್ಲಿ ಆರಂಭಿಕರಾಗಿ ಆಡಿದ್ದರು. ಹೀಗಾಗಿ ಕಳಪೆ ಫಾರ್ಮ್​ನಲ್ಲಿರುವ ಕೊಹ್ಲಿಗೆ ಭಡ್ತಿ ನೀಡುವ ಮೂಲಕ ನಿರಾಳವಾಗಿ ಬ್ಯಾಟ್ ಬೀಸಲು ಆರ್​ಸಿಬಿ ಅವಕಾಶ ನೀಡಲಿದೆಯಾ ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಆರ್​ಸಿಬಿ ಆರಂಭಿಕ ಸಮಸ್ಯೆಯನ್ನು ಸರಿಪಡಿಸಿಕೊಂಡರೆ ದ್ವಿತಿಯಾರ್ಧದ ಮೂಲಕ ಸುಲಭವಾಗಿ ಪ್ಲೇಆಫ್​ ಪ್ರವೇಶಿಸುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ