IPL 2022: ಹೊಸ ನಾಯಕ, ಅನುಭವಿಗಳ ಪಡೆ: ಹೇಗಿರಲಿದೆ RCB ಪ್ಲೇಯಿಂಗ್ 11

IPL 2022: RCB Playing 11 prediction: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್).

IPL 2022: ಹೊಸ ನಾಯಕ, ಅನುಭವಿಗಳ ಪಡೆ: ಹೇಗಿರಲಿದೆ RCB ಪ್ಲೇಯಿಂಗ್ 11
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2022 | 3:10 PM

ಹೊಸ ತಂಡದ ಜೊತೆಗೆ, ಹೊಸ ನಾಯಕನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈ ಬಾರಿ IPL 2022 ನಲ್ಲಿ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಸುದೀರ್ಘಾವಧಿಯ ಬಳಿಕ ವಿರಾಟ್ ಕೊಹ್ಲಿ ಕೇವಲ ಆಟಗಾರನಾಗಿ ಫೀಲ್ಡಿಗಿಳಿಯಲಿದ್ದಾರೆ. ಪ್ರತಿ ತಂಡದಂತೆ, RCB ತಂಡವು ಸಹ ಮೆಗಾ ಹರಾಜಿನ ನಂತರ ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿದೆ. ಕೆಲವು ದೇಶೀಯ ಮತ್ತು ವಿದೇಶಿ ಆಟಗಾರರನ್ನು ತಂಡಕ್ಕೆ ಸೇರಿಕೊಂಡಿದೆ. ಅದರಲ್ಲೂ ನಾಯಕನಾಗಿ ಹೊಸ ಆಟಗಾರ ಫಾಫ್ ಡು ಪ್ಲೆಸಿಸ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಈ ಸಲ ಆರ್​ಸಿಬಿ ತಂಡದ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹಲ ಮನೆ ಮಾಡಿದೆ.

ಕಳೆದ ಸೀಸನ್​​ನಲ್ಲಿ ಆರ್​ಸಿಬಿ ತಂಡದ ಖಾಯಂ ಸದಸ್ಯರಾಗಿದ್ದ ಎಬಿ ಡಿವಿಲಿಯರ್ಸ್ ಹಾಗೂ ಬಿಗ್ ಮ್ಯಾಚ್ ವಿನ್ನರ್ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಈ ಸಲ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ತಂಡವು ದೇವದತ್ ಪಡಿಕ್ಕಲ್ ಅವರಂತಹ ಯುವ ಆರಂಭಿಕರನ್ನು ಕೈಬಿಟ್ಟಿದೆ. ಹೀಗಾಗಿ ಈ ಮೂರು ಸ್ಥಾನಗಳಲ್ಲಿ ಯಾರು ಆಡಲಿದ್ದಾರೆ ಎಂಬುದೇ ಪ್ರಶ್ನೆ. ಇದಾಗ್ಯೂ ಕೇವಲ ಎರಡು ಹೆಸರುಗಳನ್ನು ಹೊರತುಪಡಿಸಿ, ಪ್ಲೇಯಿಂಗ್​ XI ನ ಉಳಿದ 9 ಆಟಗಾರರ ಆಯ್ಕೆಯು ಆರ್​ಸಿಬಿ ತಂಡಕ್ಕೆ ತುಂಬಾ ಸುಲಭ. ಏಕೆಂದರೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ ಟಾರ್ಗೆಟ್ ಮಾಡಿ ಆಟಗಾರರನ್ನು ಖರೀದಿಸಿದೆ.

ಬ್ಯಾಟಿಂಗ್​ ಬಲ: ತಂಡದ ಬ್ಯಾಟಿಂಗ್ ಶಕ್ತಿ ಮತ್ತೊಮ್ಮೆ ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಮೇಲೆ ಇರಲಿದೆ. ಡಿವಿಲಿಯರ್ಸ್ ನಿರ್ಗಮನದಿಂದಾಗಿ, ಈ ಶಕ್ತಿಯು ಸ್ವಲ್ಪ ಕಡಿಮೆಯಾಗುತ್ತಿರುವಂತೆ ಕಂಡುಬಂದರೂ, ಇದನ್ನು ಡುಪ್ಲೆಸಿಸ್ ಸರಿದೂಗಿಸಬಹುದು. ಇನ್ನು ಆರ್​ಸಿಬಿ ಪರ ಡು ಪ್ಲೆಸಿಸ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಜೊತೆಗೆ ವಿರಾಟ್ ಕೊಹ್ಲಿ ಆಡಲಿದ್ದಾರಾ ಅಥವಾ ದೆಹಲಿ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅನುಜ್ ರಾವತ್ ಓಪನಿಂಗ್‌ ಮಾಡ್ತಾರಾ ಕಾದು ನೋಡಬೇಕಿದೆ. ಒಂದು ವೇಳೆ ಅನುಜ್ ಆರಂಭಿಕರಾಗಿ ಆಡಿದ್ರೆ ಕೊಹ್ಲಿ ಮೂರನೇ ಕ್ರಮಾಂಕಕ್ಕೆ ಬರುವ ಮೂಲಕ ತಂಡದ ಮಧ್ಯಮ ಕ್ರಮಾಂಕವನ್ನು ಬಲಪಡಿಸಲಿದ್ದಾರೆ. ಇವರಲ್ಲದೆ ದಿನೇಶ್ ಕಾರ್ತಿಕ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಐದನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಎಡಗೈ ಬ್ಯಾಟ್ಸ್​ಮನ್ ಮಹಿಪಾಲ್ ಲೊಮ್ರರ್ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ.

ಆಲ್‌ರೌಂಡರ್‌ಗಳು: ಆಲ್‌ರೌಂಡರ್‌ಗಳ ವಿಷಯದಲ್ಲಿ, ಮ್ಯಾಕ್ಸ್‌ವೆಲ್ ಮತ್ತು ಲೊಮ್ರರ್ ಹೊರತುಪಡಿಸಿ, ಶ್ರೀಲಂಕಾದ ಸ್ಪಿನ್ನರ್‌ಗಳಾದ ವನಿಂದು ಹಸರಂಗ, ಹರ್ಷಲ್ ಪಟೇಲ್ ಮತ್ತು ಶಹಬಾಜ್ ಅಹ್ಮದ್ ಆಯ್ಕೆಯಾಗಲಿದ್ದಾರೆ. ಒಂದು ವೇಳೆ ಹಸರಂಗ ಅವರನ್ನು ಕೈ ಬಿಟ್ಟರೆ ಇಂಗ್ಲೆಂಡ್‌ನ ಮಧ್ಯಮ ವೇಗಿ ಆಲ್ ರೌಂಡರ್ ಡೇವಿಡ್ ವಿಲ್ಲಿ ಸ್ಥಾನ ಪಡೆಯುವುದು ಖಚಿತ.

ಬೌಲಿಂಗ್‌ ಬಲ: ತಂಡವು ಉತ್ತಮ ಬೌಲಿಂಗ್ ಬಳಗವನ್ನು ಹೊಂದಿದೆ. ಅದರಲ್ಲೂ ವೇಗದ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್​ವುಡ್ ಮತ್ತು ಹರ್ಷಲ್ ಪಟೇಲ್ ಕಾಣಿಸಿಕೊಳ್ಳುವುದು ಖಚಿತ. ಮತ್ತೊಂದೆಡೆ, ಹಸರಂಗ ಮತ್ತು ಶಹಬಾಜ್ ಅಹ್ಮದ್ ಸ್ಪಿನ್‌ ಜೋಡಿಯಾಗಲಿದ್ದಾರೆ., ಇವರಿಗೆ ಸಾಥ್ ನೀಡಲು ಮ್ಯಾಕ್ಸ್‌ವೆಲ್ ಮತ್ತು ಲೊಮ್ರರ್​ ಕೂಡ ಸ್ಪಿನ್ ಬೌಲಿಂಗ್ ಮಾಡಲಿದ್ದಾರೆ.

RCB ಸಂಭ್ಯಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: RCB Playing 11 prediction)

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ