AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ವಿರಾಟ್ ಕೊಹ್ಲಿಯ ಕೆಟ್ಟ ಫಾರ್ಮ್​…ಸೋಲಿನ ಬಳಿಕ ಡುಪ್ಲೆಸಿಸ್​ ಹೇಳಿದ್ದೇನು?

IPL 2022 RCB vs RR: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರೀಕ್ಷೆಯನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ್ದ ಆರ್​ಸಿಬಿ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದ್ದರು.

IPL 2022: ವಿರಾಟ್ ಕೊಹ್ಲಿಯ ಕೆಟ್ಟ ಫಾರ್ಮ್​...ಸೋಲಿನ ಬಳಿಕ ಡುಪ್ಲೆಸಿಸ್​ ಹೇಳಿದ್ದೇನು?
Faf du Plessis-Virat Kohli
TV9 Web
| Edited By: |

Updated on: Apr 27, 2022 | 10:46 AM

Share

IPL 2022: ಐಪಿಎಲ್​ನ 39ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ದ ಆರ್​ಸಿಬಿ (RCB vs RR) ತಂಡವು 29 ರನ್​ಗಳಿಂದ ಹೀನಾಯವಾಗಿ ಸೋತಿದೆ. ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (Faf du Plessis), ಈ ಸೋಲಿಗೆ ಟಾಪ್ ಆರ್ಡರ್ ಬ್ಯಾಟ್ಸ್​ಮನ್​ಗಳ ವೈಫಲ್ಯ ಕಾರಣ ಎಂದಿದ್ದಾರೆ. ನಾವು ನಾಲ್ವರೂ ಕೂಡ ಟಾಪ್​ನಲ್ಲಿ ಚೆನ್ನಾಗಿ ಆಡಿಲ್ಲ. ನಮ್ಮ ಟಾಪ್ ಆರ್ಡರ್ ಅನ್ನು ಸರಿಪಡಿಸಬೇಕಾಗಿದೆ. ಏಕೆಂದರೆ ಮೇಲಿನ ಕ್ರಮಾಂಕದಲ್ಲಿ ನಾವು ಸ್ಥಿರವಾದ ಪ್ರದರ್ಶನ ನೀಡಿಲ್ಲ. ಇದರಿಂದಾಗಿ ನಾವು ಈ ಪಂದ್ಯದಲ್ಲೂ ವೈಫಲ್ಯ ಹೊಂದಿದೆವು ಎಂದು ಡುಪ್ಲೆಸಿಸ್​ ಹೇಳಿದರು.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ (Virat Kohli) ಅಗ್ರ ಕ್ರಮಾಂಕದಲ್ಲಿ ಬಡ್ತಿ ನೀಡಲಾಗಿತ್ತು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಮತ್ತೊಮ್ಮೆ ವಿಫಲರಾದರು. ಕೇವಲ 9 ರನ್​ಗೆ ಇನಿಂಗ್ಸ್​ ಅಂತ್ಯಗೊಳಿಸಿ ಮತ್ತೆ ನಿರಾಸೆ ಮೂಡಿಸಿದರು. ಈ ಬಗ್ಗೆ ಮಾತನಾಡಿದ ಡುಪ್ಲೆಸಿಸ್​, ನಾವು ಇಂದು ಬ್ಯಾಟಿಂಗ್ ಲೈನ್-ಅಪ್ ಅನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ಅದರಂತೆ ವಿರಾಟ್ ಕೊಹ್ಲಿ ಪಾಸಿಟಿವ್ ಆಗಿ ಆಡಲು ಪ್ರಯತ್ನಿಸಬಹುದು ಎಂದು ನಾವು ಭಾವಿಸುತ್ತೇವೆ.

ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡಲು ಸಾಧ್ಯವಿಲ್ಲ. ಏಕೆಂದರೆ ಅವರು ಶ್ರೇಷ್ಠ ಆಟಗಾರ. ಈ ರೀತಿಯ ಕಳಪೆ ಫಾರ್ಮ್​ ಹಂತಗಳನ್ನು ಹಾದು ಹೋಗುತ್ತಾರೆ. ಇದು ಆತ್ಮವಿಶ್ವಾಸದ ಆಟವಾಗಿದೆ. ಅವರು ಮತ್ತೆ ಪುಟಿದೇಳುವ ವಿಶ್ವಾಸವಿದೆ. ಎಲ್ಲಾ ಶ್ರೇಷ್ಠ ಆಟಗಾರರು ಇಂತಹ ದುರ್ಬಲ ಹಂತಗಳನ್ನು ಎದುರಿಸುತ್ತಾರೆ. ಹೀಗಾಗಿ ಕೊಹ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರೀಕ್ಷೆಯನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ್ದ ಆರ್​ಸಿಬಿ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದ್ದರು. ಪವರ್​ಪ್ಲೇನಲ್ಲೇ 3 ವಿಕೆಟ್ ಉರುಳಿಸಿ ರಾಜಸ್ಥಾನ್ ರಾಯಲ್ಸ್​ಗೆ ಆಘಾತ ನೀಡಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್ ಅವರು ಮಾತ್ರ ಆರ್​ಸಿಬಿ ಬೌಲರ್​ಗಳ ವಿರುದ್ದ ತಿರುಗಿಬಿದ್ದರು.

29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಪರಾಗ್ ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಹೋದರು. ಅಲ್ಲದೆ ಅಂತಿಮವಾಗಿ 31 ಎಸೆತಗಳಲ್ಲಿ 51 ರನ್​ ಬಾರಿಸಿ ರಾಜಸ್ಥಾನ್ ರಾಯಲ್ಸ್ ತಂಡದ ಮೊತ್ತವನ್ನು 144 ಕ್ಕೆ ತಂದು ನಿಲ್ಲಿಸಿದರು. 145 ರನ್​ಗಳ ಸಾಧಾರಣ ಸವಾಲು ಪಡೆದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಬಡ್ತಿ ಪಡೆದಿದ್ದ ವಿರಾಟ್ ಕೊಹ್ಲಿ ಕೇವಲ 9 ರನ್​ಗಳಿಸಿ ಔಟಾಗಿದ್ದರು. ಇದರ ಬೆನ್ನಲ್ಲೇ ಡುಪ್ಲೆಸಿಸ್​ (23) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (0) ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇನ್ನುಳಿದಂತೆ ರಜತ್ ಪಾಟಿದಾರ್ (16), ಸುಯಶ್ ಪ್ರಭುದೇಸಾಯಿ (2) ಬಂದ ವೇಗದಲ್ಲೇ ಹಿಂತಿರುಗಿದರು. ಇದಾಗ್ಯೂ ಶಹಬಾಜ್ ಅಹ್ಮದ್ (17) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರು. ಆದರೆ ಈ ವೇಳೆ ಕೆಟ್ಟ ರನ್​ ಕರೆಯಿಂದಾಗಿ ದಿನೇಶ್ ಕಾರ್ತಿಕ್ (6) ಅವರು ರನೌಟ್ ಆದರು. ಇದರೊಂದಿಗೆ ಆರ್​ಸಿಬಿ ತಂಡದ ಸೋಲು ಖಚಿತವಾಗಿತ್ತು. ಅಂತಿಮವಾಗಿ ಆರ್​ಸಿಬಿ 19.3 ಓವರ್​ಗಳಲ್ಲಿ 115 ರನ್​ಗೆ ಆಲೌಟ್ ಆಗುವ ಮೂಲಕ 29 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು