AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 RCB vs CSK Live Streaming: ಚೆನ್ನೈ-ಆರ್​ಸಿಬಿ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 RCB vs CSK Live Streaming: ಆರ್‌ಸಿಬಿ ಬ್ಯಾಟಿಂಗ್‌ ವಿಭಾಗ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ. ಕೊಹ್ಲಿ ಕಳಪೆ ಫಾರ್ಮ್‌ನಲ್ಲಿದ್ದರೆ, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಸಹ ಇದುವರೆಗೆ ಆರು ಪಂದ್ಯಗಳಲ್ಲಿ 124 ರನ್ ಗಳಿಸಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಮಾತ್ರ ಕೊಂಚ ಪ್ರತಿರೋಧ ತೋರುತ್ತಿದ್ದಾರೆ.

IPL 2022 RCB vs CSK Live Streaming: ಚೆನ್ನೈ-ಆರ್​ಸಿಬಿ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
CSK Fans RCB vs KKR IPL 2022
TV9 Web
| Updated By: ಪೃಥ್ವಿಶಂಕರ|

Updated on:May 03, 2022 | 5:53 PM

Share

ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಎದುರಿಸಲಿದೆ. ಅಂಕಪಟ್ಟಿಯ ರೇಸ್‌ನಲ್ಲಿ ಉಳಿಯಲು ಇಲ್ಲಿ ಗೆಲ್ಲಲೇಬೇಕಾದ ಕಾರಣ ಉಭಯ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿತ್ತು. ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹ್ಯಾಟ್ರಿಕ್ ಸೋಲು ಕಂಡಿದೆ, ಇದರಿಂದಾಗಿ ಪಾಯಿಂಟ್ ಪಟ್ಟಿಯಲ್ಲಿ ಅದರ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ.

ಆರ್‌ಸಿಬಿ ಬ್ಯಾಟಿಂಗ್‌ ವಿಭಾಗ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ. ಕೊಹ್ಲಿ ಕಳಪೆ ಫಾರ್ಮ್‌ನಲ್ಲಿದ್ದರೆ, ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಸಹ ಇದುವರೆಗೆ ಆರು ಪಂದ್ಯಗಳಲ್ಲಿ 124 ರನ್ ಗಳಿಸಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಮಾತ್ರ ಕೊಂಚ ಪ್ರತಿರೋಧ ತೋರುತ್ತಿದ್ದಾರೆ. RCB ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ 12 ವಿಕೆಟ್ ಪಡೆದಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಡಿ ಸಿಲ್ವಾ 13 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಜೋಶ್ ಹ್ಯಾಜಲ್‌ವುಡ್ ವೇಗದ ಬೌಲಿಂಗ್​ನಲ್ಲಿ ಕಮಾಲ್ ಮಾಡುತ್ತಿದ್ದಾರೆ.

ಚೆನ್ನೈ ಬ್ಯಾಟಿಂಗ್ ಸುಧಾರಿಸಿದೆ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಆರಂಭಿಕರಾದ ರಿತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ ಅವರು ಋತುವಿನ ಅತ್ಯಧಿಕ ಆರಂಭಿಕ-ವಿಕೆಟ್ ಜೊತೆಯಾಟದಲ್ಲಿ 182 ರನ್ ಮತ್ತು ಮುಖೇಶ್ ಚೌಧರಿ ಅವರ ನಾಲ್ಕು ವಿಕೆಟ್​ಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 13 ರನ್ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿತು. ಮೊದಲು ಬ್ಯಾಟಿಂಗ್‌ಗೆ ಇಳಿದ ಚೆನ್ನೈ ಎರಡು ವಿಕೆಟ್‌ಗೆ 202 ರನ್‌ಗಳನ್ನು ಗಳಿಸಿತು. ಗಾಯಕ್ವಾಡ್ ಶತಕದಿಂದ ವಂಚಿತರಾದರು ಆದರೆ 57 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಆರು ಸಿಕ್ಸರ್‌ಗಳನ್ನು ಒಳಗೊಂಡ 99 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್‌ ಆಡಿದರು. ಉತ್ತರವಾಗಿ ಸನ್‌ರೈಸರ್ಸ್ 20 ಓವರ್‌ಗಳಲ್ಲಿ ಆರು ವಿಕೆಟ್‌ಗೆ 189 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವು ಮಂಗಳವಾರ, ಮೇ 4 ರಂದು ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಪ್ರಾರಂಭವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಆನ್‌ಲೈನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ:RCB vs CSK 2022 Match Prediction: ಗೆಲ್ಲಲೇಬೇಕಾದ ಒತ್ತಡದಲ್ಲಿ ಉಭಯ ತಂಡಗಳು; ಯಾರಿಗೆ ಸಿಗಲಿದೆ ಜಯ?

Published On - 5:53 pm, Tue, 3 May 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್