IPL 2022: RCB vs KKR ಬಲಾಬಲ: ಯಾರು ಬಲಿಷ್ಠ..?

RCB vs KKR Head To Head Records: ಆರ್​ಸಿಬಿ ಪರ ಅತ್ಯುತ್ತಮ ಓಪನರ್ ಆಗಿ ಡುಪ್ಲೆಸಿಸ್​ ಇದ್ದರೆ, ಕೆಕೆಆರ್ ತಂಡದಲ್ಲಿ ಸ್ಪೋಟಕ ಆರಂಭಿಕನಾಗಿ ವೆಂಕಟೇಶ್ ಅಯ್ಯರ್ ಇದ್ದಾರೆ.

IPL 2022: RCB vs KKR ಬಲಾಬಲ: ಯಾರು ಬಲಿಷ್ಠ..?
RCB vs KKR
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 30, 2022 | 3:15 PM

ಐಪಿಎಲ್​ನಲ್ಲಿ (IPL 2022) ಇಂದು ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ-ಕೆಕೆಆರ್ (RCB vs KKR)  ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಉಭಯ ತಂಡಗಳು ಮೊದಲ ಪಂದ್ಯವನ್ನಾಡಿದೆ. ಅದರಲ್ಲಿ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ದ ಸೋತರೆ, ಕೆಕೆಆರ್ ಸಿಎಸ್​ಕೆ ವಿರುದ್ದ ಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇಬೇಕಾಗಿದೆ. ಇನ್ನು ಆರ್​ಸಿಬಿಗೆ ಕೆಕೆಆರ್ ತಂಡವನ್ನು ಮಣಿಸುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಉಭಯ ತಂಡಗಳು ಇದುವರೆಗೆ 29 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ಗೆದ್ದಿದ್ದು ಬರೋಬ್ಬರಿ 16 ಬಾರಿ. ಅಂದರೆ ಆರ್​ಸಿಬಿ ಕೆಕೆಆರ್​ ವಿರುದ್ದ 13 ಬಾರಿ ಮಾತ್ರ ಜಯ ಸಾಧಿಸಿದೆ. ಈ ಹಿಂದಿನ ಅಂಕಿ ಅಂಶಗಳ ಪ್ರಕಾರ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ.

ಇನ್ನು ಕಳೆದ ಸೀಸನ್​ನಲ್ಲಿ ಉಭಯ ತಂಡಗಳು 3 ಬಾರಿ ಆಡಿವೆ. ಈ ವೇಳೆ ಕೆಕೆಆರ್ 2 ಸಲ ಗೆದ್ದಿತ್ತು. ಇದಾಗ್ಯೂ ಈ ಬಾರಿ ಆರ್​ಸಿಬಿ ತಂಡದ ನಾಯಕ ಬದಲಾಗಿದ್ದಾರೆ. ಹಾಗೆಯೇ ತಂಡದಲ್ಲಿ ಹೊಸ ಆಟಗಾರರು ಕೂಡ ಕಾಣಿಸಿಕೊಂಡಿದ್ದಾರೆ. ಅದರಂತೆ ಅನುಭವಿ ನಾಯಕ ಫಾಫ್ ಡುಪ್ಲೆಸಿಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ಗೆಲುವನ್ನು ನಿರೀ್ಕ್ಷಿಸಬಹುದು. ಆದರೆ ಮತ್ತೊಂದೆಡೆ ಐಪಿಎಲ್​ನ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಈ ಬಾರಿ ಕೆಕೆಆರ್ ತಂಡದ ನಾಯಕ. ಹಾಗಾಗಿ ತಂತ್ರಕ್ಕೆ ಪ್ರತಿತಂತ್ರವಂತು ಕಂಡು ಬರಲಿದೆ. ಇದಾಗ್ಯೂ ಉಭಯ ತಂಡಗಳಲ್ಲೂ ಬಲಿಷ್ಠ ಆಟಗಾರರಿದ್ದಾರೆ.

ಆರ್​ಸಿಬಿ ಪರ ಅತ್ಯುತ್ತಮ ಓಪನರ್ ಆಗಿ ಡುಪ್ಲೆಸಿಸ್​ ಇದ್ದರೆ, ಕೆಕೆಆರ್ ತಂಡದಲ್ಲಿ ಸ್ಪೋಟಕ ಆರಂಭಿಕನಾಗಿ ವೆಂಕಟೇಶ್ ಅಯ್ಯರ್ ಇದ್ದಾರೆ. ಇನ್ನು ವಿರಾಟ್ ಕೊಹ್ಲಿಗೆ ಸಾಟಿಯಾಗಿ ಅಂಡ್ರೆ ರಸೆಲ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ ಹರ್ಷಲ್ ಪಟೇಲ್​ಗೆ ಸರಿಸಾಟಿಯಾಗಿ ಸುನಿಲ್ ನರೈನ್ ಇದ್ದಾರೆ. ಅಂದರೆ ಉಭಯ ತಂಡಗಳೂ ಕೂಡ ಸ್ಟಾರ್ ಆಟಗಾರರನ್ನು ಹೊಂದಿದ್ದಾರೆ. ಹೀಗಾಗಿ ಬಲಿಷ್ಠತೆಯ ವಿಷಯದಲ್ಲಿ ಎರಡೂ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಇದಾಗ್ಯೂ ಮೊದಲ ಪಂದ್ಯದಲ್ಲಿ ಸಿಎಸ್​ಕೆ ವಿರುದ್ದ ಗೆದ್ದಿರುವ ಕಾರಣ ಕೆಕೆಆರ್ ಗೆಲುವಿನ ಹುಮ್ಮಸ್ಸಿನಲ್ಲಿದೆ. ಹೀಗಾಗಿ ಆರ್​ಸಿಬಿ ಗೆಲ್ಲಬೇಕಾದ್ರೆ ಕಠಿಣ ಪೈಪೋಟಿ ನೀಡಬೇಕಾಗಿ ಬರಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಕೋಲ್ಕತ್ತಾ ನೈಟ್ ರೈಡರ್ಸ್ (KKR): ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಸ್ಯಾಮ್ ಬಿಲ್ಲಿಂಗ್ಸ್, ಅನುಕುಲ್ ರಾಯ್, ರಸಿಖ್ ಸಲಾಮ್, ಅಭಿಜಿತ್ ಸಿಂಗ್ , ರಮೇಶ್ ಕುಮಾರ್, ಅಶೋಕ್ ಶರ್ಮಾ, ಟಿಮ್ ಸೌಥಿ, ಆರೋನ್ ಫಿಂಚ್, ಮೊಹಮ್ಮದ್ ನಬಿ, ಉಮೇಶ್ ಯಾದವ್, ಬಿ ಇಂದ್ರಜಿತ್, ಚಾಮಿಕಾ ಕರುಣಾರತ್ನೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

(IPL 2022: RCB vs KKR Head To Head Records)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ