IPL 2022 RCB vs PBKS live streaming: ಪ್ಲೇ ಆಫ್​ಗೇರಲು ಆರ್​ಸಿಬಿ ಗೆಲ್ಲಲೇಬೇಕು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 RCB vs PBKS live streaming: ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಆ ಪಂದ್ಯದಲ್ಲಿ 2 ವಿಕೆಟ್‌ಗೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 6 ಎಸೆತಗಳು ಬಾಕಿ ಇರುವಂತೆ ಗುರಿ ಸಾಧಿಸಿತ್ತು.

IPL 2022 RCB vs PBKS live streaming: ಪ್ಲೇ ಆಫ್​ಗೇರಲು ಆರ್​ಸಿಬಿ ಗೆಲ್ಲಲೇಬೇಕು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
RCB and GT vs PBKS
Follow us
TV9 Web
| Updated By: ಪೃಥ್ವಿಶಂಕರ

Updated on:May 12, 2022 | 5:25 PM

ಐಪಿಎಲ್ 2022 (IPL 2022)ರಲ್ಲಿ ಶುಕ್ರವಾರ ನಡೆಯುವ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಬೆಂಗಳೂರು ತಂಡವು ಪ್ಲೇಆಫ್ ತಲುಪಲು ಪ್ರಬಲ ಸ್ಪರ್ಧಿ ಎನಿಸಿಕೊಂಡಿದೆ. ಆದರೆ ಪಂಜಾಬ್‌ನ (PBKS) ಭರವಸೆಯೂ ಹಾಗೇ ಇದೆ. ಅದೇ ಭರವಸೆಗೆ ರೆಕ್ಕೆಗಳನ್ನು ನೀಡಲು, ಬೆಂಗಳೂರು (RCB) ವಿರುದ್ಧ ಪಂಜಾಬ್ ಗೆಲುವಿನ ಸದ್ದು ಮಾಡಲೇಬೇಕು. ಈ ಪಂದ್ಯವನ್ನು ಪಂಜಾಬ್ ಗೆದ್ದರೆ, ಅದು ಬೆಂಗಳೂರಿನ ಲೆಕ್ಕಾಚಾರವನ್ನು ಸ್ವಲ್ಪ ವಕ್ರಗೊಳಿಸುತ್ತದೆ. ಬೆಂಗಳೂರು ಗೆದ್ದರೆ, ಪ್ಲೇ ಆಫ್​ಗೇರುವ ಅವರ ಕನಸಿಗೆ ಮತ್ತಷ್ಟು ಜೀವ ಸಿಗಲಿದೆ. ಉಭಯ ತಂಡಗಳ ನಡುವಿನ ಈ ಮಹತ್ವದ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಋತುವಿನಲ್ಲಿ ಉಭಯ ತಂಡಗಳ ಎರಡನೇ ಪಂದ್ಯ ಇದಾಗಿದೆ. ಇದಕ್ಕೂ ಮುನ್ನ ಇವರಿಬ್ಬರ ನಡುವೆ ನಡೆದ ಮೊದಲ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಆಗಿತ್ತು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 5 ವಿಕೆಟ್​ಗಳ ಜಯ ಸಾಧಿಸಿತ್ತು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಆ ಪಂದ್ಯದಲ್ಲಿ 2 ವಿಕೆಟ್‌ಗೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 6 ಎಸೆತಗಳು ಬಾಕಿ ಇರುವಂತೆ ಗುರಿ ಸಾಧಿಸಿತ್ತು. ಪಂಜಾಬ್ ಮತ್ತೆ ಅದೇ ಆಟವನ್ನು ಮಾಡಲು ಬಯಸುತ್ತದೆ. ಮತ್ತೊಂದೆಡೆ, ಆ ಸೋಲಿಗೆ ಸೇಡು ತೀರಿಸಿಕೊಳ್ಳಬೇಕು ಎಂಬ ನಿರೀಕ್ಷೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿದೆ.

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ, ಮೇ 13 ರಂದು ನಡೆಯಲಿದೆ.

ಇದನ್ನೂ ಓದಿ
Image
IPL 2022: ಬಲವಂತವಾಗಿ ನಾಯಕತ್ವದಿಂದ ವಜಾ! ಕೋಪದಿಂದ ತಂಡ ತೊರೆದ ಜಡೇಜಾ; ಸಿಎಸ್​ಕೆಗೆ ಆಡುವುದು ಅನುಮಾನ
Image
IPL 2022: 36 ವರ್ಷದ DK ಗೆ ತಂಡದಲ್ಲಿ ಸ್ಥಾನ ನೀಡಬೇಕಾ, ಬೇಡ್ವಾ? ಗವಾಸ್ಕರ್ ಹೇಳಿದ್ದೇನು?
Image
IPL 2022: ಮೊದಲು ರೈನಾ.. ಈಗ ಜಡೇಜಾ! ಇನ್ಸ್‌ಟಾಗ್ರಾಮ್ ಅನ್​ಫಾಲೋ; ವದಂತಿಗಳಿಗೆ ಸಿಎಸ್​ಕೆ ಸಿಇಒ ಉತ್ತರವೇನು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

Published On - 5:25 pm, Thu, 12 May 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ