IPL 2022 RCB vs SRH Live Streaming: ಗೆದ್ದ ತಂಡಗಳ ನಡುವೆ ಮಹಾ ಕಾಳಗ; ಪಂದ್ಯದ ಸಂಪೂರ್ಣ ಮಾಹಿತಿ
IPL 2022 RCB vs SRH Live Streaming: ವಿರಾಟ್ ಕೊಹ್ಲಿ ಬ್ಯಾಟ್ ಕೂಡ ನಿಶ್ಯಬ್ದವಾಗಿದ್ದು, ಉತ್ತಮ ಫಾರ್ಮ್ನಲ್ಲಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ಮ್ಯಾಕ್ಸ್‌ವೆಲ್ ಆಗಮನದಿಂದ ಬ್ಯಾಟಿಂಗ್ ಬಲಗೊಂಡಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ದೆಹಲಿ ವಿರುದ್ಧ 34 ಎಸೆತಗಳಲ್ಲಿ 55 ರನ್ ಗಳಿಸಿದ್ದರು.
ಐಪಿಎಲ್ 2022 (IPL 2022)ರಲ್ಲಿ, ದಿನದ ಎರಡನೇ ಪಂದ್ಯ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ( Sunrisers Hyderabad) ನಡುವೆ ಶನಿವಾರ ನಡೆಯಲಿದೆ. ಲೀಗ್‌ನ ಈ 36ನೇ ಪಂದ್ಯ ಮುಂಬೈನ ಬ್ರಬ್ರಾನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡೂ ತಂಡಗಳು ಉತ್ತಮ ಲಯದಲ್ಲಿದ್ದು, ಈ ಪಂದ್ಯ ರೋಚಕತೆಯಿಂದ ಕೂಡಿರಲಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್, ಆರಂಭಿಕ ಪಂದ್ಯಗಳಲ್ಲಿನ ಸೋಲಿನ ನಂತರ ಅದ್ಭುತ ಪುನರಾಗಮನ ಮಾಡಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದೇ ಸಮಯದಲ್ಲಿ ಆರ್‌ಸಿಬಿ (Royal Challengers Bangalore) ತಂಡ ಕೂಡ ಕಳೆದೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಹಂಬಲದಲ್ಲಿದೆ.
ಹೈದರಾಬಾದ್ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು ಏಳು ವಿಕೆಟ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅದ್ಭುತ ಬೌಲಿಂಗ್ ಮಾಡುವ ಮೂಲಕ ನಾಲ್ಕು ವಿಕೆಟ್ ಪಡೆದರು. ಕೊನೆಯ ಓವರ್‌ನಲ್ಲಿ ಮೂರು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಮೂರು ವಿಕೆಟ್ ಪಡೆದರು. 152 ರನ್‌ಗಳ ಗುರಿಯನ್ನು ಹೈದರಾಬಾದ್ ಕೇವಲ ಏಳು ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು. ಏಡನ್ ಮಾರ್ಕ್ರಾಮ್ 41 ಮತ್ತು ಅಭಿಷೇಕ್ ಶರ್ಮಾ 31 ರನ್ ಗಳಿಸಿದರು.
ಉತ್ತಮ ಲಯದಲ್ಲಿ ಆರ್‌ಸಿಬಿ ವಿರಾಟ್ ಕೊಹ್ಲಿ ಬ್ಯಾಟ್ ಕೂಡ ನಿಶ್ಯಬ್ದವಾಗಿದ್ದು, ಉತ್ತಮ ಫಾರ್ಮ್ನಲ್ಲಿದ್ದರೂ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ಮ್ಯಾಕ್ಸ್‌ವೆಲ್ ಆಗಮನದಿಂದ ಬ್ಯಾಟಿಂಗ್ ಬಲಗೊಂಡಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ದೆಹಲಿ ವಿರುದ್ಧ 34 ಎಸೆತಗಳಲ್ಲಿ 55 ರನ್ ಗಳಿಸಿದ್ದರು. ಅದೇ ಸಮಯದಲ್ಲಿ, ಕಾರ್ತಿಕ್ ತಂಡಕ್ಕಾಗಿ ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಡುತ್ತಿದ್ದಾರೆ ಮತ್ತು ಅವರು ಫಿನಿಶರ್ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಇಂಜಿನಿಯರ್‌ನಿಂದ ಕ್ರಿಕೆಟಿಗರಾಗಿರುವ ಶಹಬಾಜ್ ಅಹ್ಮದ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ಪ್ರಭಾವಿತರಾಗಿದ್ದಾರೆ. ಬೌಲಿಂಗ್‌ನಲ್ಲಿ, ಜೋಶ್ ಹ್ಯಾಜಲ್‌ವುಡ್ ಡೆಲ್ಲಿ ವಿರುದ್ಧ ಅದ್ಭುತ ಸ್ಪೆಲ್‌ನೊಂದಿಗೆ ಪಂದ್ಯದ ಹಾದಿಯನ್ನು ಬದಲಾಯಿಸಿದರು. ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗಾ ಫಾರ್ಮ್ಗೆ ಬರಬೇಕಾಗಿದೆ. ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಅವರ ಉತ್ತಮ ಪ್ರದರ್ಶನ ಹೀಗಿಯೇ ಮುಂದುವರೆಯಬೇಕಿದೆ.
ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಏಪ್ರಿಲ್ 23 ಶನಿವಾರದಂದು ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯ ಮುಂಬೈನ ಬ್ರಬನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವನ್ನು Disney+Hotstar ನಲ್ಲಿ ಚಂದಾದಾರಿಕೆಯೊಂದಿಗೆ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಇದನ್ನೂ ಓದಿ:IPL 2022 KKR vs GT Live Streaming: ಎರಡು ಬಲಿಷ್ಠ ತಂಡಗಳ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ವಿವರ