IPL 2022: ಪ್ಲೇಆಫ್​ಗೇರಲು RCB ಇನ್ನು ಎಷ್ಟು ಪಂದ್ಯ ಗೆಲ್ಲಬೇಕು..?

IPL 2022: ಈಗಾಗಲೇ ಗುಜರಾತ್ ಟೈಟನ್ಸ್ 16 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ 16 ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 14 ಪಾಯಿಂಟ್ಸ್​ ಹೊಂದಿದೆ.

IPL 2022: ಪ್ಲೇಆಫ್​ಗೇರಲು RCB ಇನ್ನು ಎಷ್ಟು ಪಂದ್ಯ ಗೆಲ್ಲಬೇಕು..?
RCB
Follow us
TV9 Web
| Updated By: Vinay Bhat

Updated on:May 09, 2022 | 10:22 AM

IPL 2022: ಐಪಿಎಲ್​ ಸೀಸನ್​ 15 ನ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ (RCB) ತಂಡ ದ್ವಿತಿಯಾರ್ಧದಲ್ಲಿ 5 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್​ಸಿಬಿ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿ 14 ಪಾಯಿಂಟ್ಸ್ ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡಕ್ಕೆ ಎರಡು ಪಂದ್ಯಗಳು ಮಾತ್ರ ಉಳಿದಿದ್ದು, ಈ 2 ಮ್ಯಾಚ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ನಿರ್ಣಾಯಕ.

ಏಕೆಂದರೆ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಕನ್​​ಫರ್ಮ್ ಮಾಡಿಕೊಳ್ಳಬಹುದು. ಅಂದರೆ ಒಟ್ಟು 18 ಪಾಯಿಂಟ್​ಗಳಿಸಿ ಪ್ಲೇಆಫ್​ ಪ್ರವೇಶಿಸಬಹುದು. ಇನ್ನು ಒಂದರಲ್ಲಿ ಮಾತ್ರ ಗೆದ್ದರೆ ಒಟ್ಟು 16 ಪಾಯಿಂಟ್ ಆಗಲಿದೆ. ಆದರೆ ಈಗಾಗಲೇ ಗುಜರಾತ್ ಟೈಟನ್ಸ್ 16 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ 16 ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 14 ಪಾಯಿಂಟ್ಸ್​ ಹೊಂದಿದೆ. ಆದರೆ ರಾಜಸ್ಥಾನ್​ ರಾಯಲ್ಸ್ ಇನ್ನೂ 3 ಮ್ಯಾಚ್ ಉಳಿದಿದೆ. ಹೀಗಾಗಿ ಆರ್​ಆರ್ ಕೂಡ 16 ಪಾಯಿಂಟ್ಸ್​ ಗಳಿಸುವ ಸಾಧ್ಯತೆಯಿದೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್​ 10 ಮ್ಯಾಚ್ ಆಡಿ 10 ಪಾಯಿಂಟ್ಸ್ ಪಡೆದುಕೊಂಡಿದೆ. ಅಂದರೆ ನಾಲ್ಕು ಮ್ಯಾಚ್​ನಲ್ಲಿ ಮೂರು ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 3 ಮ್ಯಾಚ್​ಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಈ ಎರಡು ತಂಡಗಳು ಗೆದ್ದರೆ ಆ ತಂಡಗಳ ಪಾಯಿಂಟ್ಸ್ ಕೂಡ 16 ಆಗಲಿದೆ.

ಹಾಗಾಗಿ ಆರ್​ಸಿಬಿ ಮುಂದಿನ 2 ಪಂದ್ಯಗಳನ್ನೂ ಗೆಲ್ಲುವ ಮೂಲಕ ಪ್ಲೇ ಆಫ್ ಅನ್ನು ಖಚಿತಪಡಿಸಿಕೊಳ್ಳಬೇಕಿದೆ. ಒಂದು ವೇಳೆ 2 ರಲ್ಲಿ 1 ಮ್ಯಾಚ್ ಗೆದ್ದರೆ 16 ಪಾಯಿಂಟ್ಸ್ ಸಿಗಲಿದೆ. ಹಾಗೆಯೇ ಉಳಿದ ತಂಡಗಳು ಕೂಡ 16 ಪಾಯಿಂಟ್ಸ್​ಗಳಿಸಿ 3ನೇ ಮತ್ತು ನಾಲ್ಕನೇ ಸ್ಥಾನ ಪಡೆದರೆ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲು ನೆಟ್​ ರನ್​ ರೇಟ್​ನ ಮೊರೆ ಹೋಗಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ 2 ನಪಂದ್ಯಗಳನ್ನು ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು.

ಹೀಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 1ನೇ ಅಥವಾ 2ನೇ ಸ್ಥಾನ ಅಲಂಕರಿಸಬಹುದು. ಅಲ್ಲದೆ ನೇರವಾಗಿ ಪ್ಲೇಆಫ್ ಎಂಟ್ರಿಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.

RCB ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:37 pm, Sun, 8 May 22

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ