IPL 2022: CSK ತಂಡದ ಆತಂಕ ದೂರ: ಸ್ಟಾರ್ ಆಟಗಾರ ಆಗಮನ

IPL 2022: ಸಿಎಸ್​ಕೆ ತಂಡ ಹೀಗಿದೆ: ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯಡು, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ದೀಪಕ್ ಚಹರ್, ಕೆಎಂ ಆಸಿಫ್, ಶಿವಂ ದುಬೆ.

IPL 2022: CSK ತಂಡದ ಆತಂಕ ದೂರ: ಸ್ಟಾರ್ ಆಟಗಾರ ಆಗಮನ
Ruturaj Gaikwad
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 16, 2022 | 3:44 PM

ಐಪಿಎಲ್ (IPL 2022) ಸೀಸನ್ 15 ಆರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ಕೊನೆಗೂ ಸಮಾಧಾನಕರ ಸುದ್ದಿ ಸಿಕ್ಕಿದೆ. ಏಕೆಂದರೆ ಕಳೆದ ಒಂದು ತಿಂಗಳಿಂದ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಗಾಯದಿಂದ ಬಳಲುತ್ತಿದ್ದರು. ಅಲ್ಲದೆ ಫಿಟ್​ನೆಸ್ ಟೆಸ್ಟ್ ಪೂರ್ಣಗೊಳಿಸದೇ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ಐಪಿಎಲ್​ನಲ್ಲಿ ಅವಕಾಶ ನೀಡುವುದಿಲ್ಲ ಎಂಬುದನ್ನು ಈ ಹಿಂದೆಯೇ ಬಿಸಿಸಿಐ ಸ್ಪಷ್ಟಪಡಿಸಿತ್ತು. ಇತ್ತ ಐಪಿಎಲ್ ಆರಂಭವಾಗಲು ವಾರಗಳು ಮಾತ್ರ ಉಳಿದಿದ್ದರೂ ರುತುರಾಜ್ ಗಾಯದ ಬಗ್ಗೆ ಯಾವುದೇ ಅಪ್​ಡೇಟ್ ಹೊರಬಿದ್ದಿರಲಿಲ್ಲ. ಆದರೆ ಇದೀಗ ರುತುರಾಜ್ ಗಾಯಕ್ವಾಡ್ ಅಂತಿಮವಾಗಿ ಎನ್‌ಸಿಎಯಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲು ಅರ್ಹತೆ ಪಡೆದುಕೊಂಡಿದ್ದಾರೆ. ಅದರಂತೆ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಅಭ್ಯಾಸ ಶಿಬಿರಕ್ಕೆ ಸೇರಲು ಸೂರತ್‌ಗೆ ತೆರಳಿದ್ದಾರೆ.

ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಮೂರನೇ ಟಿ20 ಗೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ರುತುರಾಜ್ ಗಾಯಕ್ವಾಡ್ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರನ್ನು ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಗೆ ಕಳುಹಿಸಲಾಗಿತ್ತು. ಇದೀಗ ಸಂಪೂರ್ಣ ಫಿಟ್​ ಆಗಿರುವ ರುತುರಾಜ್ ಸಿಎಸ್​ಕೆ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರೊಂದಿಗೆ ರುತುರಾಜ್ ಗಾಯಕ್ವಾಡ್ ಆಡುತ್ತಾರೋ ಇಲ್ಲವೋ ಎಂಬ ಸಿಎಸ್​ಕೆ ತಂಡದ ಆತಂಕ ಕೂಡ ದೂರವಾಗಿದೆ.

ಮತ್ತೊಂದೆಡೆ ಮತ್ತೋರ್ವ ಸಿಎಸ್​ಕೆ ಆಟಗಾರ ದೀಪಕ್ ಚಹರ್ ಕೂಡ ಗಾಯಗೊಂಡಿದ್ದು, ಅವರು ಫಿಟ್​ನೆಸ್ ವರದಿ ಇನ್ನಷ್ಟೇ ಬರಬೇಕಿದೆ. ಒಂದು ವೇಳೆ ಐಪಿಎಲ್ ಆರಂಭದ ವೇಳೆಗೆ ಚಹರ್ ಗಾಯದಿಂದ ಗುಣಮುಖವಾಗದಿದ್ದರೆ, ಮೊದಲಾರ್ಧದ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಹಾಲಿ ಚಾಂಪಿಯನ್​ ಸಿಎಸ್​ಕೆ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್​ 26 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ತಂಡ ಕೆಕೆಆರ್​ ವಿರುದ್ದ ಸೆಣಸಲಿದೆ.

ಸಿಎಸ್​ಕೆ ತಂಡ ಹೀಗಿದೆ: ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯಡು, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ದೀಪಕ್ ಚಹರ್, ಕೆಎಂ ಆಸಿಫ್, ಶಿವಂ ದುಬೆ, ಮಹೇಶ್ ತೀಕ್ಷಣ, ರಾಜವರ್ಧನ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಡೆವೊನ್ ಕಾನ್ವೇ, ಡ್ವೈನ್ ಪ್ರೀಟೊರಸ್, ಆಡಮ್ ಮಿಲ್ನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಸಿ ಹರಿ ನಿಶಾಂತ್, ಎನ್ ಜಗದೀಸನ್, ಕ್ರಿಸ್ ಜೋರ್ಡನ್, ಭಗತ್ ವರ್ಮಾ.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Relief for CSK, Ruturaj Gaikwad set to join CSK camp)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!