ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ (IPL 2022) ಬಿಸಿಸಿಐ ಸಿದ್ದತೆಗಳನ್ನು ಆರಂಭಿಸಿದೆ. ಅದರ ಮೊದಲ ಹೆಜ್ಜೆಯಾಗಿ ಈಗಾಗಲೇ 2 ಹೊಸ ತಂಡಗಳನ್ನು ಘೋಷಿಸಿದೆ. ಅದರಂತೆ ಮುಂದಿನ ಸೀಸನ್ನಲ್ಲಿ ಒಟ್ಟು 10 ತಂಡಗಳು ಕಾಣಿಸಿಕೊಳ್ಳಲಿದೆ. ಇದೀಗ ಮುಂದಿನ ಸೀಸನ್ ಮೆಗಾ ಹರಾಜಿಗೂ ಬೇಕಾದ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಹೊಸ ರಿಟೈನ್ (IPL 2022 Retention Rules) ನಿಯಮದಂತೆ ಈ ಬಾರಿ ನಾಲ್ಕು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳುವ ಅವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ. ಅಂದರೆ ಹರಾಜಿಗೂ ಮುನ್ನ ಪ್ರಸ್ತುತ ಇರುವ 8 ತಂಡಗಳಿಗೆ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ಇರಲಿದೆ ಎಂದು ವರದಿಯಾಗಿದೆ. ಅದರಂತೆ ಫ್ರಾಂಚೈಸಿ ಬಯಸಿದರೆ ನಾಲ್ವರನ್ನು ರಿಟೈನ್ ಮಾಡಿಕೊಂಡು ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ.
ಇಲ್ಲಿ ರಿಟೈನ್ ನಿಯಮವನ್ನು ಎರಡು ರೀತಿಯಲ್ಲಿ ಮುಂದಿಡಲಾಗಿದೆ. ಈ ನಿಯಮದಂತೆ ಪ್ರಸ್ತುತ ಇರುವ 8 ಫ್ರಾಂಚೈಸಿ ಮೂವರು ಭಾರತೀಯ ಆಟಗಾರರು+ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರರು+ ಇಬ್ಬರು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಬಹುದು. ಇದರ ಹೊರತಾಗಿ ಯಾವುದೇ ರೈಟ್ ಟು ಮ್ಯಾಚ್ ಕಾರ್ಡ್ ಬಳಸಲು ಅವಕಾಶ ಇರುವುದಿಲ್ಲ. ಅಂದರೆ ಈ ಹಿಂದಿನ ಸೀಸನ್ ಹರಾಜಿನ ವೇಳೆ 3 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಜೊತೆಗೆ 2 ಆರ್ಟಿಎಂ ಕಾರ್ಡ್ ಆಯ್ಕೆ ನೀಡಲಾಗಿತ್ತು. ಅಂದರೆ ಇಬ್ಬರು ಆಟಗಾರರನ್ನು ಆರ್ಟಿಎಂ ಕಾರ್ಡ್ ಅಡಿಯಲ್ಲಿ ಬಿಡುಗಡೆ ಮಾಡಿ ಬಳಿಕ ಹರಾಜಿನಲ್ಲಿ ಬೇರೆ ತಂಡ ಬಿಡ್ ಮಾಡಿದ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ತಂಡಕ್ಕೆ ಸೇರಿಸಿಕೊಳ್ಳಲು ಅವಕಾಶ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ 4 ಆಟಗಾರರನ್ನು ನೇರವಾಗಿ ಉಳಿಸಿಕೊಳ್ಳುವ ಆಯ್ಕೆ ನೀಡಿರುವುದರಿಂದ ಆರ್ಟಿಎಂ ಕಾರ್ಡ್ ಆಯ್ಕೆಯನ್ನು ತೆಗೆದು ಹಾಕಲಾಗಿದೆ.
ಇನ್ನು ಹೊಸ ಎರಡು ಫ್ರಾಂಚೈಸಿಗಳಾದ ಲಕ್ನೋ ಹಾಗೂ ಅಹಮದಾಬಾದ್ ತಂಡಗಳಿಗೆ ತಲಾ 3 ಆಟಗಾರರನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ನೀಡಲಿದೆ. ಅಂದರೆ ಮೆಗಾ ಹರಾಜಿಗೂ ಮುನ್ನ ಹರಾಜು ಪಟ್ಟಿಯಿಂದ ಮೂವರು ಆಟಗಾರರನ್ನು ಹೊಸ ಫ್ರಾಂಚೈಸಿಗಳು ಆಯ್ಕೆ ಮಾಡಬಹುದು. ಅದರಂತೆ ಹೊಸ ಫ್ರಾಂಚೈಸಿ ಇಬ್ಬರು ಭಾರತೀಯ ಆಟಗಾರರು ಹಾಗೂ ಓರ್ವ ವಿದೇಶಿ ಆಟಗಾರನನ್ನು ಹರಾಜು ಪಟ್ಟಿಯಿಂದ ತಮ್ಮ ತಂಡಕ್ಕೆ ಆಯ್ಕೆ ಮಾಡಬಹುದಾಗಿದೆ.
ಶೀಘ್ರದಲ್ಲೇ ಬಿಸಿಸಿಐ ಹೊಸ ನಿಯಮಗಳು ಹಾಗೂ ಮೆಗಾ ಹರಾಜಿನ ದಿನಾಂಕವನ್ನು ಘೋಷಿಸಲಿದ್ದು, ಅದರ ಬಳಿಕ ಎಲ್ಲಾ ತಂಡಗಳು ಉಳಿಸಿಕೊಳ್ಳುವ ಆಟಗಾರರನ್ನು ಹೊರತುಪಡಿಸಿ ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಆನಂತರ ಹರಾಜಿಗಾಗಿ ಆಟಗಾರರ ಹೆಸರು ನೋಂದಣಿ ನಡೆಯಲಿದೆ.
ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?
ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ
ಇದನ್ನೂ ಓದಿ: T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ
(IPL 2022 Retention Rules: BCCI allows old franchises to retain four players)