IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

Riyan Parag-Harshal Patel Fight: ಕೇವಲ 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಪರಾಗ್ ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಹೋದರು. ಅಲ್ಲದೆ ಅಂತಿಮವಾಗಿ 31 ಎಸೆತಗಳಲ್ಲಿ 51 ರನ್​ ಬಾರಿಸಿ ರಾಜಸ್ಥಾನ್ ರಾಯಲ್ಸ್ ತಂಡದ ಮೊತ್ತವನ್ನು 144 ಕ್ಕೆ ತಂದು ನಿಲ್ಲಿಸಿದರು.

IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್
Riyan Parag-Harshal Patel Fight
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 27, 2022 | 11:21 AM

IPL 2022: ಐಪಿಎಲ್​ನ 39ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ದ ಸೋತಿದೆ. ಆದರೆ ಈ ಸೋಲಿನ ಹೊರತಾಗಿಯೂ ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಕಿರಿಕ್ ಮಾಡಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದ. ಹೌದು, ರಾಜಸ್ಥಾನ್ ರಾಯಲ್ಸ್ ಪರ ಯುವ ಆಟಗಾರ ರಿಯಾನ್ ಪರಾಗ್ (Riyaan Parag) ಅರ್ಧಶತಕ ಬಾರಿಸಿ ಮಿಂಚಿದ್ದರು. ಅದರಲ್ಲೂ ಹರ್ಷಲ್ ಪಟೇಲ್ (Harshal Patel) ಅವರ ಕೊನೆಯ ಓವರ್​ನಲ್ಲಿ 18 ರನ್ ಬಾರಿಸಿದ್ದರು. ಹರ್ಷಲ್ ಪಟೇಲ್ ಎಸೆದ 20ನೇ ಓವರ್​ನಲ್ಲಿ ಒಂದು ಫೋರ್ ಹಾಗೂ ಎರಡು ಸಿಕ್ಸ್ ಬಾರಿಸುವ ಮೂಲಕ ಪರಾಗ್ ತಂಡದ ಮೊತ್ತವನ್ನು 144 ಕ್ಕೆ ತಂದು ನಿಲ್ಲಿಸಿದ್ದರು.

ಅದರಲ್ಲೂ ಕೊನೆಯ ಎಸೆತದಲ್ಲಿ ಸಿಕ್ಸ್​ ಬಾರಿಸಿದ್ದರಿಂದ ಹರ್ಷಲ್ ಪಟೇಲ್​ಗೆ ಸಿಟ್ಟು ಬಂದಿದೆ. ಇತ್ತ ಇನಿಂಗ್ಸ್ ಮುಗಿಸಿ ಡಗೌಟ್​ಗೆ ಮರಳುತ್ತಿದ್ದ ಪರಾಗ್​ ಅವರನ್ನು ಮೇಲ್ನೋಟಕ್ಕೆ ಹರ್ಷಲ್ ಪಟೇಲ್ ಕೆಣಕಿದ್ದಾರೆ. ಇದರಿಂದ ಕೋಪಗೊಂಡ ರಿಯಾನ್ ಪರಾಗ್ ಕೂಡ ತಿರುಗೇಟು ನೀಡಿದ್ದರು. ಆ ಬಳಿಕ ಇಬ್ಬರ ನಡುವೆ ಮೈದಾನದಲ್ಲೇ ಮಾತಿನ ಚಕಮಕಿ ನಡೆಯಿತು. ಅಷ್ಟರಲ್ಲಿ ಇತರೆ ಆಟಗಾರರು ಆಗಮಿಸುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇದೀಗ ಹರ್ಷಲ್ ಪಟೇಲ್-ರಿಯಾನ್ ಪರಾಗ್ ಅವರ ಮೈದಾನದಲ್ಲಿನ ಜಗಳದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆಟಗಾರರ ಇಂತಹ ನಡೆಯ ಬಗ್ಗೆ ಕ್ರಿಕೆಟ್ ಪೇಮಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಕ್ರಮಾಂಕದಲ್ಲಿ ಬಡ್ತಿ ನೀಡಲಾಗಿತ್ತು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಮತ್ತೊಮ್ಮೆ ವಿಫಲರಾದರು. ಕೇವಲ 9 ರನ್​ಗೆ ಇನಿಂಗ್ಸ್​ ಅಂತ್ಯಗೊಳಿಸಿ ಮತ್ತೆ ನಿರಾಸೆ ಮೂಡಿಸಿದರು. ಈ ಬಗ್ಗೆ ಮಾತನಾಡಿದ ಡುಪ್ಲೆಸಿಸ್​, ನಾವು ಇಂದು ಬ್ಯಾಟಿಂಗ್ ಲೈನ್-ಅಪ್ ಅನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ಅದರಂತೆ ವಿರಾಟ್ ಕೊಹ್ಲಿ ಪಾಸಿಟಿವ್ ಆಗಿ ಆಡಲು ಪ್ರಯತ್ನಿಸಬಹುದು ಎಂದು ನಾವು ಭಾವಿಸುತ್ತೇವೆ.

ವಿರಾಟ್ ಕೊಹ್ಲಿಯನ್ನು ತಂಡದಿಂದ ಕೈ ಬಿಡಲು ಸಾಧ್ಯವಿಲ್ಲ. ಏಕೆಂದರೆ ಅವರು ಶ್ರೇಷ್ಠ ಆಟಗಾರ. ಈ ರೀತಿಯ ಕಳಪೆ ಫಾರ್ಮ್​ ಹಂತಗಳನ್ನು ಹಾದು ಹೋಗುತ್ತಾರೆ. ಇದು ಆತ್ಮವಿಶ್ವಾಸದ ಆಟವಾಗಿದೆ. ಅವರು ಮತ್ತೆ ಪುಟಿದೇಳುವ ವಿಶ್ವಾಸವಿದೆ. ಎಲ್ಲಾ ಶ್ರೇಷ್ಠ ಆಟಗಾರರು ಇಂತಹ ದುರ್ಬಲ ಹಂತಗಳನ್ನು ಎದುರಿಸುತ್ತಾರೆ. ಹೀಗಾಗಿ ಕೊಹ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರೀಕ್ಷೆಯನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ್ದ ಆರ್​ಸಿಬಿ ಬೌಲರ್​ಗಳು ಆರಂಭದಲ್ಲೇ ಯಶಸ್ಸು ಸಾಧಿಸಿದ್ದದರು. ಪವರ್​ಪ್ಲೇನಲ್ಲೇ 3 ವಿಕೆಟ್ ಉರುಳಿಸಿ ರಾಜಸ್ಥಾನ್ ರಾಯಲ್ಸ್​ಗೆ ಆಘಾತ ನೀಡಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್ ಅವರು ಮಾತ್ರ ಆರ್​ಸಿಬಿ ಬೌಲರ್​ಗಳ ವಿರುದ್ದ ತಿರುಗಿಬಿದ್ದರು.

ಕೇವಲ 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಪರಾಗ್ ತಂಡದ ಮೊತ್ತವನ್ನು ಹೆಚ್ಚಿಸುತ್ತಾ ಹೋದರು. ಅಲ್ಲದೆ ಅಂತಿಮವಾಗಿ 31 ಎಸೆತಗಳಲ್ಲಿ 51 ರನ್​ ಬಾರಿಸಿ ರಾಜಸ್ಥಾನ್ ರಾಯಲ್ಸ್ ತಂಡದ ಮೊತ್ತವನ್ನು 144 ಕ್ಕೆ ತಂದು ನಿಲ್ಲಿಸಿದರು. 145 ರನ್​ಗಳ ಸಾಧಾರಣ ಸವಾಲು ಪಡೆದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಬಡ್ತಿ ಪಡೆದಿದ್ದ ವಿರಾಟ್ ಕೊಹ್ಲಿ ಕೇವಲ 9 ರನ್​ಗಳಿಸಿ ಔಟಾಗಿದ್ದರು. ಇದರ ಬೆನ್ನಲ್ಲೇ ಡುಪ್ಲೆಸಿಸ್​ (23) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (0) ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಇನ್ನುಳಿದಂತೆ ರಜತ್ ಪಾಟಿದಾರ್ (16), ಸುಯಶ್ ಪ್ರಭುದೇಸಾಯಿ (2) ಬಂದ ವೇಗದಲ್ಲೇ ಹಿಂತಿರುಗಿದರು. ಇದಾಗ್ಯೂ ಶಹಬಾಜ್ ಅಹ್ಮದ್ (17) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತರು. ಆದರೆ ಈ ವೇಳೆ ಕೆಟ್ಟ ರನ್​ ಕರೆಯಿಂದಾಗಿ ದಿನೇಶ್ ಕಾರ್ತಿಕ್ (6) ಅವರು ರನೌಟ್ ಆದರು. ಇದರೊಂದಿಗೆ ಆರ್​ಸಿಬಿ ತಂಡದ ಸೋಲು ಖಚಿತವಾಗಿತ್ತು. ಅಂತಿಮವಾಗಿ ಆರ್​ಸಿಬಿ 19.3 ಓವರ್​ಗಳಲ್ಲಿ 115 ರನ್​ಗೆ ಆಲೌಟ್ ಆಗುವ ಮೂಲಕ 29 ರನ್​ಗಳಿಂದ ಸೋಲೊಪ್ಪಿಕೊಂಡಿತು. 31 ಎಸೆತಗಳಲ್ಲಿ 56 ರನ್ ಬಾರಿಸಿ ಮಿಂಚಿದ್ದ ರಿಯಾನ್ ಪರಾಗ್ ಈ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 11:19 am, Wed, 27 April 22

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ