
IPL 2022 ರ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಸ್ ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ (RCB v KKR) ಅನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಗೆಲ್ಲುವ ಮೂಲಕ ಆರ್ಸಿಬಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ. ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ ಮೊದಲ ಸೋಲಿನ ಹೊರತಾಗಿಯೂ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೋಲ್ಕತ್ತಾದ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಶಿವಂ ಮಾವಿ ಬದಲಿಗೆ ಟಿಮ್ ಸೌಥಿಗೆ ಅವಕಾಶ ಪಡೆದಿದ್ದಾರೆ.
ಉಭಯ ತಂಡಗಳು ಇದುವರೆಗೆ 29 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ಗೆದ್ದಿದ್ದು ಬರೋಬ್ಬರಿ 16 ಬಾರಿ. ಅಂದರೆ ಆರ್ಸಿಬಿ ಕೆಕೆಆರ್ ವಿರುದ್ದ 13 ಬಾರಿ ಮಾತ್ರ ಜಯ ಸಾಧಿಸಿದೆ. ಈ ಹಿಂದಿನ ಅಂಕಿ ಅಂಶಗಳ ಪ್ರಕಾರ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ಈ ಬಾರಿ ಆರ್ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆಟದ XI)
ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (WK), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶದೀಪ್, ಮೊಹಮ್ಮದ್ ಸಿರಾಜ್.
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI)
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ಸಿ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಾಕ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು