ಸೋಮವಾರ ನಡೆಯಲಿರುವ ಐಪಿಎಲ್ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ . ಎರಡೂ ತಂಡಗಳು ತಮ್ಮ ಕೊನೆಯ ಪಂದ್ಯದಲ್ಲಿ ಸೋತಿರುವ ಕಾರಣ ಈ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ ಸೋಲಿಸಿದರೆ, ರಾಜಸ್ಥಾನವನ್ನು ಗುಜರಾತ್ ಟೈಟನ್ಸ್ ಸೋಲಿಸಿತು. ಹೀಗಾಗಿ ಈ ಪಂದ್ಯವು ಉಭಯ ತಂಡಗಳೂ ಮಹತ್ವದ ಪಂದ್ಯ ಎನಿಸಿಕೊಂಡಿದೆ.
ಐಪಿಎಲ್ 2022 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 6 ಪಂದ್ಯಗಳನ್ನು ಆಡಿದ್ದರೆ, ರಾಜಸ್ಥಾನ್ ರಾಯಲ್ಸ್ ಇದುವರೆಗೆ 5 ಪಂದ್ಯಗಳನ್ನು ಆಡಿದೆ. ಮೊದಲ 6 ಪಂದ್ಯಗಳಲ್ಲಿ ಕೋಲ್ಕತ್ತಾ 3ರಲ್ಲಿ ಗೆದ್ದು 3ರಲ್ಲಿ ಸೋತು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ಮೊದಲ 5 ಪಂದ್ಯಗಳಲ್ಲಿ 3 ಗೆದ್ದು 2 ಸೋತಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಭಯ ತಂಡಗಳು ಸಮಬಲ ಹೊಂದಿದ್ದು, ಹೀಗಾಗಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ರಾಜಸ್ಥಾನದಲ್ಲಿ ಅಶ್ವಿನ್ ಮತ್ತು ಯುಜ್ವೇಂದ್ರ ಚಹಾಲ್ ಇದ್ದರೆ, ಕೋಲ್ಕತ್ತಾಗೆ ಸುನೀಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಇದ್ದಾರೆ. ಬ್ಯಾಟಿಂಗ್‌ನಲ್ಲಿ ಜೋಸ್ ಬಟ್ಲರ್ ಅವರ ಫಾರ್ಮ್ ರಾಜಸ್ಥಾನಕ್ಕೆ ದೊಡ್ಡ ಪ್ಲಸ್ ಆಗಿದೆ. ಈ ಪಂದ್ಯವನ್ನು ಕೋಲ್ಕತ್ತಾ ಗೆಲ್ಲಲೇ ಬೇಕಾದರೆ ಬಟ್ಲರ್ ಬ್ಯಾಟ್ ಬೀಸಬೇಕಾಗುತ್ತದೆ.
RR vs KKR, IPL 2022 ನಡುಣ ಪಂದ್ಯ ಯಾವಾಗ, ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಬಹುದು?
ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಈ ಪಂದ್ಯವು ಸೋಮವಾರ, ಏಪ್ರಿಲ್ 18 ರಂದು ನಡೆಯಲಿದೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಎಲ್ಲಿ ನಡೆಯಲಿದೆ?
ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ.
ರಾಜಸ್ಥಾನ್ ರಾಯಲ್ಸ್ -ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಯಾವಾಗ ಆರಂಭವಾಗುತ್ತದೆ?
ಈ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.
ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?
ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಹಾಗೆಯೇ Disney+Hotstar ನಲ್ಲೂ ನೋಡಬಹುದಾಗಿದೆ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ