IPL 2022 RR vs LSG Live Streaming: ರಾಜಸ್ಥಾನ್ vs ಲಕ್ನೋ: ಪಂದ್ಯದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ

| Updated By: ಝಾಹಿರ್ ಯೂಸುಫ್

Updated on: Apr 09, 2022 | 4:19 PM

IPL 2022 RR vs LSG Live Streaming: ರಾಜಸ್ಥಾನ್ ರಾಯಲ್ಸ್ ತಂಡವು ಸತತ ಎರಡು ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿತ್ತು. ತಂಡದ ಪರ, ಜೋಸ್ ಬಟ್ಲರ್ ಆರು ಸಿಕ್ಸರ್‌ಗಳೊಂದಿಗೆ ಅಜೇಯ 70 ರನ್ ಗಳಿಸಿದರು.

IPL 2022 RR vs LSG Live Streaming: ರಾಜಸ್ಥಾನ್ vs ಲಕ್ನೋ: ಪಂದ್ಯದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ
LSG vs RR
Follow us on

ಐಪಿಎಲ್​ನಲ್ಲಿ (IPL 2022) ಭಾನುವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (IPL 2022 RR vs LSG) ಮುಖಾಮುಖಿಯಾಗಲಿದೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತೊಂದು ಗೆಲುವನ್ನು ಎದುರು ನೋಡುತ್ತಿದ್ದರೆ, ಮತ್ತೊಂದೆಡೆ , ರಾಜಸ್ಥಾನ್ ರಾಯಲ್ಸ್ ತಂಡವು ಗೆಲುವಿನ ಟ್ರ್ಯಾಕ್‌ಗೆ ಮರಳಲು ಬಯಸುತ್ತಿದೆ. ಲಕ್ನೋ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಜಯದೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಮೂರು ಪಂದ್ಯಗಳಲ್ಲಿ ಎರಡು ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ಸತತ ಎರಡು ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿತ್ತು. ತಂಡದ ಪರ, ಜೋಸ್ ಬಟ್ಲರ್ ಆರು ಸಿಕ್ಸರ್‌ಗಳೊಂದಿಗೆ ಅಜೇಯ 70 ರನ್ ಗಳಿಸಿದರು. ನಾಲ್ಕನೇ ವಿಕೆಟ್‌ಗೆ ಶಿಮ್ರಾನ್ ಹೆಟ್ಮೆಯರ್ (ಔಟಾಗದೆ 42) ಅವರ ಅಜೇಯ 83 ರನ್‌ಗಳ ಜೊತೆಯಾಟವು ಮೂರು ವಿಕೆಟ್‌ಗಳಿಗೆ 169 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅವರ ನೆರವಿನಿಂದ ಐದು ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್‌ಗೆ 173 ರನ್ ಗಳಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವಿನ ಹ್ಯಾಟ್ರಿಕ್ ಗೆಲುವನ್ನು ನಿಲ್ಲಿಸಿದರು.

ಲಕ್ನೋ ತಂಡ ಹ್ಯಾಟ್ರಿಕ್ ಜಯ:
ಮತ್ತೊಂದೆಡೆ, ಮೊದಲ ಸೋಲಿನ ನಂತರ ಲಕ್ನೋ ತಂಡ ಅತ್ಯುತ್ತಮ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತ್ತು. ಕಠಿಣ ಪಿಚ್‌ನಲ್ಲಿ ಕ್ವಿಂಟನ್ ಡಿ ಕಾಕ್ ಅವರ 80 ರನ್ ಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸತತ ಮೂರನೇ ಗೆಲುವು ದಾಖಲಿಸಿತು. ಇದೀಗ ಈ ಗೆಲುವಿನ ನಾಗಾಲೋಟ ಮುಂದುವರೆಸುವ ಇರಾದೆಯಲ್ಲಿದೆ. ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಯಾವಾಗ ನಡೆಯಲಿದೆ?
ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವು ಮಂಗಳವಾರ, ಏಪ್ರಿಲ್ 10 ರಂದು ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?
ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯ ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?
ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ನಾನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?
ಈ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್​ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

Published On - 4:18 pm, Sat, 9 April 22