AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಂದು ರಾಜಸ್ಥಾನ- ಡೆಲ್ಲಿ ಮುಖಾಮುಖಿ; ಜಿದ್ದಾಜಿದ್ದಿನ ಪೈಪೋಟಿಯ ನಿರೀಕ್ಷೆ- ಸಂಭಾವ್ಯ ತಂಡ ಹೀಗಿದೆ

DC vs RR in IPL 2022: ಇತ್ತೀಚಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರೋಚ ಕಾದಾಟದಲ್ಲಿ ಮಣಿಸಿತ್ತು. ಹೀಗಾಗಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.

IPL 2022: ಇಂದು ರಾಜಸ್ಥಾನ- ಡೆಲ್ಲಿ ಮುಖಾಮುಖಿ; ಜಿದ್ದಾಜಿದ್ದಿನ ಪೈಪೋಟಿಯ ನಿರೀಕ್ಷೆ- ಸಂಭಾವ್ಯ ತಂಡ ಹೀಗಿದೆ
ರಿಷಭ್ ಪಂತ್, ಸಂಜು ಸ್ಯಾಮ್ಸನ್
TV9 Web
| Edited By: |

Updated on: Apr 22, 2022 | 10:28 AM

Share

ಪ್ರಸಕ್ತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2022ರ (IPL 2022) ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಶುಕ್ರವಾರ, ಏಪ್ರಿಲ್ 22) ಪಂದ್ಯ ನಡೆಯಲಿದ್ದು, ಸಂಜೆ 7:30 ಕ್ಕೆ ಆರಂಭವಾಗಲಿದೆ. ಇತ್ತೀಚಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರೋಚ ಕಾದಾಟದಲ್ಲಿ ಮಣಿಸಿತ್ತು. ಹೀಗಾಗಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ. ದೆಹಲಿ ತಂಡವು ಆಡಿದ ಆರು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಒಟ್ಟು 6 ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಡೇವಿಡ್ ವಾರ್ನರ್ ಹಾಗೂ ಪೃಥ್ವಿ ಷಾ ಭರ್ಜರಿ ಫಾರ್ಮ್​ನಲ್ಲಿರುವುದು ಡೆಲ್ಲಿಗೆ ದೊಡ್ಡ ಪ್ಲಸ್ ಪಾಯಿಂಟ್.

ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಈ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಇದುವರೆಗೆ ಆಡಿರುವ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಎರಡರಲ್ಲಿ ಸೋತಿರುವ ತಂಡವು ಸದ್ಯ ಮೂರನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತನ್ನ ಇತ್ತೀಚಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು 7 ರನ್‌ಗಳಿಂದ ಸೋಲಿಸಿತು, ಯುಜ್ವೇಂದ್ರ ಚಾಹಲ್ ಅವರ 5 ವಿಕೆಟ್ ಸಾಧನೆ ಮತ್ತು ಜೋಸ್ ಬಟ್ಲರ್ ಈ ಋತುವಿನ ಭರ್ಜರಿ ಎರಡನೇ ಶತಕ ತಂಡದ ಜಯಕ್ಕೆ ಕಾರಣವಾಗಿತ್ತು.

ರಾಜಸ್ಥಾನ್ ರಾಯಲ್ಸ್ ತಂಡದ ಎಲ್ಲಾ ಆಟಗಾರರು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆದರೆ ತಂಡಕ್ಕೆ ದೇವದತ್ ಪಡಿಕ್ಕಲ್ ಫಾರ್ಮ್ ಸ್ವಲ್ಪ ಚಿಂತೆ ತಂದಿದೆ. ಅದರ ಹೊರತಾಗಿ ರಾಜಸ್ಥಾನ್ ರಾಯಲ್ಸ್ ಬಲಿಷ್ಠ ತಂಡವನ್ನು ಹೊಂದಿದ್ದು, ಮತ್ತೊಂದು ಪ್ರಬಲ ಪ್ರದರ್ಶನಕ್ಕಾಗಿ ಎದುರು ನೋಡುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಪ್ಲೇಯಿಂಗ್ XI:

ಪೃಥ್ವಿ ಶಾ, ಡೇವಿಡ್ ವಾರ್ನರ್, ರಿಷಬ್ ಪಂತ್ (C/WK), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಸರ್ಫರಾಜ್ ಖಾನ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಖಲೀಲ್ ಅಹ್ಮದ್

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಪ್ಲೇಯಿಂಗ್ XI:

ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (C/wk), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

ರಾಜಸ್ಥಾನ್ ರಾಯಲ್ಸ್ ಮತ್ತು ದೆಹಲಿಯ ಹೆಡ್ ಟು ಹೆಡ್ ರೆಕಾರ್ಡ್

ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಆರಂಭದಿಂದಲೂ ಲೀಗ್‌ನ ಭಾಗವಾಗಿವೆ. ಉಭಯ ತಂಡಗಳ ನಡುವೆ ಇದುವರೆಗೆ 24 ಪಂದ್ಯಗಳು ನಡೆದಿದ್ದು, ಉಭಯ ತಂಡಗಳು ಸಮಾನ ಜಯ ಸಾಧಿಸಿವೆ. ಕಳೆದ ಋತುವಿನಲ್ಲಿಯೂ ಪರಸ್ಪರ ಎರಡು ಪಂದ್ಯಗಳನ್ನು ಆಡಿದ ತಂಡಗಳು ತಲಾ 1 ಪಂದ್ಯವನ್ನು ಗೆದ್ದಿದ್ದರು.

ಇದನ್ನೂ ಓದಿ: Highest Earners in IPL: ಧೋನಿಯಿಂದ ರೋಹಿತ್​ವರೆಗೆ; ಐಪಿಎಲ್​ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರಿವರು

DC vs RR, IPL 2022 Head to Head: ಡೆಲ್ಲಿ-ರಾಜಸ್ಥಾನ ಜಿದ್ದಾಜಿದ್ದಿನ ಪಂದ್ಯ! ಅಂಕಿ ಅಂಶ ಹೇಳುವುದೇನು?

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್