AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸಚಿನ್​ರ 13 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಗಿಲ್

IPL 2022: ಈ ಸಾಧಾರಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ದ ಗುಜರಾತ್ ಟೈಟನ್ಸ್ ಬೌಲರ್​ಗಳು ಪರಾಕ್ರಮ ಮೆರೆದರು. ಅದರಲ್ಲೂ ನಾಲ್ಕು ವಿಕೆಟ್ ಉರುಳಿಸುವ ಮೂಲಕ ರಶೀದ್ ಖಾನ್ ಲಕ್ನೋ ಪಾಲಿಗೆ ಕಂಟಕವಾದರು.

IPL 2022: ಸಚಿನ್​ರ 13 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಗಿಲ್
Shubman Gill-Sachin Tendulkar
TV9 Web
| Edited By: |

Updated on:May 11, 2022 | 7:45 PM

Share

IPL 2022: ಐಪಿಎಲ್​ನಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಅದರಲ್ಲಿ ಕೆಲ ದಾಖಲೆಗಳು ಬಹಳ ಅಪರೂಪದ ದಾಖಲೆಗಳು. ಅಂದರೆ ಕೆಲ ರೆಕಾರ್ಡ್​ಗಳು ನಿರ್ಮಾಣವಾಗಿ ವರ್ಷಗಳು ಕಳೆದರೂ ಆ ದಾಖಲೆಯತ್ತ ಮತ್ಯಾವುದೇ ಆಟಗಾರರ ಹೆಸರು ಕೂಡ ಕಾಣಿಸಿಕೊಂಡಿಲ್ಲ. ಅಂತಹ ದಾಖಲೆಗಳಲ್ಲಿ ಒಂದು ಸಚಿನ್ ತೆಂಡೂಲ್ಕರ್ 2009 ರಲ್ಲಿ ನಿರ್ಮಿಸಿದ ಫುಲ್ ಇನಿಂಗ್ಸ್ ದಾಖಲೆ. ಈ ದಾಖಲೆಯ ವಿಶೇಷತೆ ಎಂದರೆ ಆ ಪಂದ್ಯದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಆರಂಭಿಕರಾಗಿ ಕಣಕ್ಕಿಳಿದು 20 ಓವರ್​ಗಳನ್ನು ಆಡಿರುವುದು. ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸದೇ ಕ್ರೀಸ್​ನಲ್ಲಿ ಅಜೇಯರಾಗಿ ಉಳಿದಿದ್ದರು. ಇದೀಗ ಈ ದಾಖಲೆಯನ್ನು 13 ವರ್ಷಗಳ ಬಳಿಕ ಶುಭ್​ಮನ್ ಗಿಲ್ ಸರಿಗಟ್ಟಿದ್ದಾರೆ.

2009ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಬ್ಯಾಟ್ ಮಾಡಿದ್ದ ಸಚಿನ್ ತೆಂಡೂಲ್ಕರ್ ಪೂರ್ತಿ 20 ಓವರ್​ಗಳನ್ನು ಆಡಿ ಒಂದೇ ಒಂದು ಸಿಕ್ಸರ್ ಬಾರಿಸಿರಲಿಲ್ಲ. ಅಂದು 49 ಎಸೆತಗಳನ್ನು ಎದುರಿಸಿದ್ದ ಸಚಿನ್ 7 ಫೋರ್​ಗಳೊಂದಿಗೆ ಅಜೇಯ 59 ರನ್ ಬಾರಿಸಿದ್ದರು.

ಇದೀಗ ಗುಜರಾತ್ ಟೈಟನ್ಸ್ ಪರ ಆಡುತ್ತಿರುವ ಶುಭ್​ಮನ್ ಗಿಲ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಅಜೇಯರಾಗಿ ಉಳಿದಿದ್ದಾರೆ. ವಿಶೇಷ ಎಂದರೆ ಸಚಿನ್ ಅವರಂತೆಯೇ ಗಿಲ್ ಕೂಡ 20 ಓವರ್ ಆಡಿದರೂ ಒಂದೇ ಒಂದು ಸಿಕ್ಸ್ ಬಾರಿಸಿಲ್ಲ. ಈ ಪಂದ್ಯದಲ್ಲಿ 49 ಎಸೆತಗಳನ್ನು ಎದುರಿಸಿದ್ದ ಗಿಲ್ 63 ರನ್​ ಕಲೆಹಾಕಿದ್ದಾರೆ. ಈ ವೇಳೆ 7 ಫೋರ್ ಮಾತ್ರ ಬಾರಿಸಿದ್ದರು. ಈ ಮೂಲಕ 13 ವರ್ಷಗಳ ಹಿಂದೆ 20 ಓವರ್ ಬ್ಯಾಟ್ ಮಾಡಿ ಸಿಕ್ಸ್ ಬಾರಿಸದೇ ಅಜೇಯರಾಗಿ ಉಳಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಶುಭ್​ಮನ್ ಗಿಲ್ ಸರಿಗಟ್ಟಿದ್ದಾರೆ.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಗುಜರಾತ್ ಟೈಟನ್ಸ್​​ಗೆ ಜಯ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೇಂಟ್ಸ್ ತಂಡವನ್ನು ಸೋಲಿಸಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (LSG vs GT) ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇದರೊಂದಿಗೆ ಐಪಿಎಲ್​ ಸೀಸನ್​ 15 ನಲ್ಲಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಗುಜರಾತ್ ಟೈಟನ್ಸ್ ಹೊರಹೊಮ್ಮಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಗುಜರಾತ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

ಶುಭ್​ಮನ್ ಗಿಲ್ (63) ಅವರ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 144 ರನ್​ ಕಲೆಹಾಕಿತು. ಈ ಸಾಧಾರಣ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ದ ಗುಜರಾತ್ ಟೈಟನ್ಸ್ ಬೌಲರ್​ಗಳು ಪರಾಕ್ರಮ ಮೆರೆದರು. ಅದರಲ್ಲೂ ನಾಲ್ಕು ವಿಕೆಟ್ ಉರುಳಿಸುವ ಮೂಲಕ ರಶೀದ್ ಖಾನ್ ಲಕ್ನೋ ಪಾಲಿಗೆ ಕಂಟಕವಾದರು. ಅಂತಿಮವಾಗಿ 13.5 ಓವರ್​ಗಳಲ್ಲಿ 82 ರನ್​ಗಳಿಗೆ ಆಲೌಟ್ ಆಗುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು 62 ರನ್​ಗಳಿಂದ ಹೀನಾಯ ಸೋಲೊಪ್ಪಿಕೊಂಡಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 pm, Wed, 11 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ