IPL 2022 SRH vs GT live streaming: ಎಸ್​ಆರ್​ಹೆಚ್ vs ​ಟೈಟನ್ಸ್: ಪಂದ್ಯದ ಬಗೆಗಿನ ಪೂರ್ಣ ಮಾಹಿತಿ ಇಲ್ಲಿದೆ

| Updated By: ಝಾಹಿರ್ ಯೂಸುಫ್

Updated on: Apr 10, 2022 | 9:28 PM

IPL 2022 SRH vs GT: ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ 2022 ರಲ್ಲಿ ಇದುವರೆಗೆ 3 ಪಂದ್ಯಗಳನ್ನು ಆಡಿದೆ. ಅದರಲ್ಲಿ 2 ಪಂದ್ಯ ಸೋತಿದ್ದಾರೆ ಮತ್ತು ಒಂದು ಪಂದ್ಯವನ್ನು ಗೆದ್ದಿದ್ದಾರೆ.

IPL 2022 SRH vs GT live streaming: ಎಸ್​ಆರ್​ಹೆಚ್ vs ​ಟೈಟನ್ಸ್: ಪಂದ್ಯದ ಬಗೆಗಿನ ಪೂರ್ಣ ಮಾಹಿತಿ ಇಲ್ಲಿದೆ
IPL 2022 SRH vs GT
Follow us on

IPL 2022 ರ 20ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಲಾಗಿದೆ. ಏಕೆಂದರೆ ಸನ್‌ರೈಸರ್ಸ್ ಹೈದರಾಬಾದ್ ತನ್ನ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಲೀಗ್‌ನಲ್ಲಿ ಮೊದಲ ಜಯ ದಾಖಲಿಸಿದೆ. ಮತ್ತೊಂದೆಡೆ ಗುಜರಾತ್ ಟೈಟನ್ಸ್ ಸೋಲಿಲ್ಲದ ಸರದಾರನಾಗಿ ಮುಂದುವರೆಯುತ್ತಿದೆ.

ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ 2022 ರಲ್ಲಿ ಇದುವರೆಗೆ 3 ಪಂದ್ಯಗಳನ್ನು ಆಡಿದೆ. ಅದರಲ್ಲಿ 2 ಪಂದ್ಯ ಸೋತಿದ್ದಾರೆ ಮತ್ತು ಒಂದು ಪಂದ್ಯವನ್ನು ಗೆದ್ದಿದ್ದಾರೆ. ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 61 ರನ್‌ಗಳಿಂದ ಸೋಲಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕೈಯಲ್ಲಿ 12 ರನ್‌ಗಳ ಅಂತರದಿಂದ ಸೋತಿತ್ತು. ಆ ಬಳಿಕ ಸಿಎಸ್​ಕೆ ವಿರುದ್ದ ಗೆಲ್ಲುವ ಮೂಲಕ ಎಸ್​ಆರ್​ಹೆಚ್ ಜಯದ ಖಾತೆ ತೆರೆದಿದೆ. ಮತ್ತೊಂದೆಡೆ ಗುಜರಾತ್ ತಂಡವು ಇಲ್ಲಿಯವರೆಗೆ ಆಡಿದ 3 ಪಂದ್ಯಗಳಲ್ಲಿ ಗೆದ್ದಿದೆ. ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿದ್ದಾರೆ. ಹೀಗಾಗಿ ಎಸ್​ಆರ್​ಹೆಚ್​ಗೆ ಕಠಿಣ ಪೈಪೋಟಿ ಎದುರಾಗಬಹುದು. ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಸೋಮವಾರ, ಏಪ್ರಿಲ್ 11 ರಂದು ನಡೆಯಲಿದೆ.

ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯ ಎಲ್ಲಿ ನಡೆಯಲಿದೆ?
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ.

ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗಲಿದೆ?
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.