Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 SRH vs KKR Live Streaming: ಕೋಲ್ಕತ್ತಾ vs ಹೈದರಾಬಾದ್; ಪಂದ್ಯದ ಬಗೆಗಿನ ಸಂಪೂರ್ಣ ಮಾಹಿತಿ ಹೀಗಿದೆ

IPL 2022 SRH vs KKR Live Streaming: ಇದು ಸನ್‌ರೈಸರ್ಸ್ ಹೈದರಾಬಾದ್‌ನ ಐದನೇ ಪಂದ್ಯ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ನ ಆರನೇ ಪಂದ್ಯವಾಗಿದೆ. ಇದಕ್ಕೂ ಮುನ್ನ ಆಡಿದ ನಾಲ್ಕು ಪಂದ್ಯಗಳಲ್ಲಿ ಸನ್ ರೈಸರ್ಸ್ 2 ಗೆದ್ದು 2 ಸೋಲು ಕಂಡಿದೆ. ಮತ್ತೊಂದೆಡೆ, ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲ 5 ಪಂದ್ಯಗಳಲ್ಲಿ 3 ಗೆದ್ದು 2 ಸೋತಿದೆ.

IPL 2022 SRH vs KKR Live Streaming: ಕೋಲ್ಕತ್ತಾ vs ಹೈದರಾಬಾದ್; ಪಂದ್ಯದ ಬಗೆಗಿನ ಸಂಪೂರ್ಣ ಮಾಹಿತಿ ಹೀಗಿದೆ
SRH vs KKR
Follow us
TV9 Web
| Updated By: ಪೃಥ್ವಿಶಂಕರ

Updated on: Apr 14, 2022 | 6:29 PM

ಐಪಿಎಲ್ 2022 (IPL 2022)ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Sunrisers Hyderabad and Kolkata Knight Riders) ತಂಡಗಳು ಏಪ್ರಿಲ್ 15 ರಂದು ಅಂದರೆ ಶುಕ್ರವಾರ ಮುಖಾಮುಖಿಯಾಗಲಿವೆ. ಈ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಲೀಗ್‌ನ ಅಂಕಪಟ್ಟಿ ನೋಡಿದರೆ ಕೋಲ್ಕತ್ತಾದ ಮೇಲುಗೈ, ಸನ್‌ರೈಸರ್ಸ್‌ಗೆ ಭಾರವಾಗಲಿದೆ. ಆದರೆ, ಕಳೆದೆರಡು ಪಂದ್ಯಗಳಲ್ಲಿ ಕೇನ್‌ ವಿಲಿಯಮ್ಸನ್‌ ತಂಡ ತಿರುಗೇಟು ನೀಡಿದ ರೀತಿಯನ್ನು ನೋಡಿದರೆ ಶ್ರೇಯಸ್ ಅಯ್ಯರ್ ಅವರ ನೈಟ್ ರೈಡರ್ಸ್​ಗೆ ಅವರ ಸವಾಲು ಅಷ್ಟು ಸುಲಭವಲ್ಲ ಅನ್ನಿಸುತ್ತದೆ. ಸನ್‌ರೈಸರ್ಸ್ ಹೈದರಾಬಾದ್ ತನ್ನ ಕೊನೆಯ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದೆ ಮತ್ತು ಈಗ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ KKR ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ.

ಐಪಿಎಲ್ 2022 ರಲ್ಲಿ, ಇದು ಸನ್‌ರೈಸರ್ಸ್ ಹೈದರಾಬಾದ್‌ನ ಐದನೇ ಪಂದ್ಯ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ನ ಆರನೇ ಪಂದ್ಯವಾಗಿದೆ. ಇದಕ್ಕೂ ಮುನ್ನ ಆಡಿದ ನಾಲ್ಕು ಪಂದ್ಯಗಳಲ್ಲಿ ಸನ್ ರೈಸರ್ಸ್ 2 ಗೆದ್ದು 2 ಸೋಲು ಕಂಡಿದೆ. ಮತ್ತೊಂದೆಡೆ, ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲ 5 ಪಂದ್ಯಗಳಲ್ಲಿ 3 ಗೆದ್ದು 2 ಸೋತಿದೆ. ಅಂಕಪಟ್ಟಿಯಲ್ಲಿ ಕೋಲ್ಕತ್ತಾ ತಂಡ ಎರಡನೇ ಸ್ಥಾನದಲ್ಲಿದೆ. ಸನ್ ರೈಸರ್ಸ್ 10 ತಂಡಗಳ ಪೈಕಿ ಸದ್ಯ 8ನೇ ಸ್ಥಾನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಕೋಲ್ಕತ್ತಾ ವಿರುದ್ಧದ ಜಯವು ಐಪಿಎಲ್‌ನ ಆರೆಂಜ್ ಆರ್ಮಿಯನ್ನು ಬಲಪಡಿಸುವುದಲ್ಲದೆ, ಇದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಪಂದ್ಯದ ಬಗೆಗಿನ ಪೂರ್ಣ ವಿವರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ IPL-2022 ಪಂದ್ಯ ಯಾವಾಗ ನಡೆಯಲಿದೆ? ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್-2022 ಪಂದ್ಯವು ಶುಕ್ರವಾರ, ಏಪ್ರಿಲ್ 15 ರಂದು ನಡೆಯಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ನಡೆಯಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಚಂದಾದಾರಿಕೆಯೊಂದಿಗೆ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಇದನ್ನೂ ಓದಿ:IPL 2022 SRH vs KKR: ಹೈದರಾಬಾದ್​ಗೆ ಕೋಲ್ಕತ್ತಾ ನೈಟ್ ಚಾಲೆಂಜ್; ಉಭಯ ತಂಡಗಳ ಮುಖಾಮುಖಿ ವರದಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ