RCB vs SRH Playing 11: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ ಕಣಕ್ಕಿಳಿಸಿದ ಆರ್​ಸಿಬಿ

IPL 2022 SRH vs RCB playing XI: ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಸನ್​ರೈಸರ್ಸ್​​ ಹೈದರಾಬಾದ್ ತಂಡವು 12 ಬಾರಿ ಗೆದ್ದಿದೆ. ಮತ್ತೊಂದೆಡೆ ಆರ್​ಸಿಬಿ ತಂಡ ಗೆದ್ದಿರುವುದು 8 ಬಾರಿ ಮಾತ್ರ.

RCB vs SRH Playing 11: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ ಕಣಕ್ಕಿಳಿಸಿದ ಆರ್​ಸಿಬಿ
RCB Playing 11
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 08, 2022 | 3:30 PM

IPL 2022: ಐಪಿಎಲ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್​​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಉಭಯ ತಂಡಗಳಿಗೂ ಮಹತ್ವದ ಮ್ಯಾಚ್ ಆಗಿದ್ದು, ಪ್ಲೇಆಫ್​ ಗೇರಲು ಎರಡೂ ತಂಡಗಳೂ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್​ಗೆ ಮರಳುವ ನಿರೀಕ್ಷೆಯಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ಫಾರ್ಮ್‌ಗೆ ಮರಳಿರುವುದನ್ನು ಸೂಚಿಸಿದರು. ಆದರೆ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಆಟವಾಡಲು ಸಾಧ್ಯವಾಗಲಿಲ್ಲ.

ಹಾಗೆಯೇ ಎಸ್​ಆರ್​ಹೆಚ್​ ನಾಯಕ ಕೇನ್ ವಿಲಿಯಮ್ಸನ್ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಇನ್ನೊಂದೆಡೆ ಕ್ಯಾಪ್ಟನ್ ಆಗಿರುವ ಕಾರಣ ಸತತ ಸೋಲುಗಳ ಒತ್ತಡ ಕೂಡ ವಿಲಿಯಮ್ಸನ್ ಮೇಲಿದೆ. ಏಕೆಂದರೆ ಸತತ ಐದು ಪಂದ್ಯಗಳನ್ನು ಗೆದ್ದ ನಂತರ, ಸನ್‌ರೈಸರ್ಸ್ ಸತತ ಮೂರು ಪಂದ್ಯಗಳಲ್ಲಿ ಸೋತಿದೆ. ಮುಖ್ಯವಾಗಿ ತಮ್ಮ ಸ್ಟಾರ್ ಬೌಲರ್‌ಗಳ ಗಾಯದಿಂದಾಗಿ ಬೌಲಿಂಗ್ ಲೈನಪ್ ಕೂಡ ಹಳಿತಪ್ಪಿದೆ. ಈ ಸೋಲುಗಳಿಂದಾಗಿ ಎಸ್​ಆರ್​ಹೆಚ್ ಸದ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಇನ್ನು ಈ ಪಂದ್ಯವು ಮತ್ತಷ್ಟು ವಿಶೇಷವಾಗಲು ಮುಖ್ಯ ಕಾರಣ ಕಳೆದ ಬಾರಿ ಆರ್‌ಸಿಬಿಯನ್ನು ಎಸ್​ಆರ್​ಹೆಚ್ ತಂಡವು ಕೇವಲ 68 ರನ್‌ಗಳಿಗೆ ಆಲೌಟ್ ಮಾಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ತಮ್ಮ ಹೀನಾಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

ಇನ್ನು ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಸನ್​ರೈಸರ್ಸ್​​ ಹೈದರಾಬಾದ್ ತಂಡವು 12 ಬಾರಿ ಗೆದ್ದಿದೆ. ಮತ್ತೊಂದೆಡೆ ಆರ್​ಸಿಬಿ ತಂಡ ಗೆದ್ದಿರುವುದು 8 ಬಾರಿ ಮಾತ್ರ. ಅದರಲ್ಲೂ ಕಳೆದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಆರ್​ಸಿಬಿ ಹೀನಾಯವಾಗಿ ಸೋತಿದೆ. ಹೀಗಾಗಿ ಈ ಬಾರಿ ಕೂಡ ಎಸ್​ಆರ್​ಹೆಚ್​ ತಂಡವೇ ಮೇಲುಗೈ ಹೊಂದಿದೆ ಎನ್ನಬಹುದು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ.

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ