IPL 2022: SRH ತಂಡ ಉಳಿಸಿಕೊಳ್ಳುವ ಆಟಗಾರ ಯಾರೆಂದು ತಿಳಿಸಿದ ಮಾಜಿ ನಾಯಕ
Sunrisers Hyderabad: ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು. ಅದರಂತೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರ+ಇಬ್ಬರು ವಿದೇಶಿ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು.
ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಸಿದ್ದತೆಗಳು ಶುರುವಾದ ಬೆನ್ನಲ್ಲೇ, ಯಾವ ತಂಡ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಚರ್ಚೆಗಳು ಕೂಡ ಆರಂಭವಾಗಿದೆ. ಅದರಲ್ಲೂ ಎಲ್ಲರ ಕಣ್ಣು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯತ್ತ ನೆಟ್ಟಿದೆ. ಏಕೆಂದರೆ ಕಳೆದ ಸೀಸನ್ನಲ್ಲಿ ಡೇವಿಡ್ ವಾರ್ನರ್ ಅವರನ್ನು ನಾಯಕನ ಸ್ಥಾನದಿಂದ ಕೆಳಗಿಸಿ, ತಂಡದಿಂದ ಕೈಬಿಟ್ಟಿದ್ದ ಎಸ್ಆರ್ಹೆಚ್ ಫ್ರಾಂಚೈಸಿ ಇದೀಗ ಇಕ್ಕಟಿಗೆ ಸಿಲುಕಿದೆ. ಡೇವಿಡ್ ವಾರ್ನರ್ ಐಪಿಎಲ್ನಲ್ಲಿ ವಿಫಲರಾದರೂ, ಅತ್ತ ಟಿ20 ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಎಸ್ಆರ್ಹೆಚ್ ಫ್ರಾಂಚೈಸಿ ಅವರನ್ನು ಮತ್ತೊಮ್ಮೆ ತಂಡದಲ್ಲಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಪ್ರಶ್ನೆಗೆ ಡೇವಿಡ್ ವಾರ್ನರ್ ಅವರೇ ಉತ್ತರ ನೀಡುವ ಮೂಲಕ ತಾನು ಸನ್ರೈಸರ್ಸ್ ಹೈದರಾಬಾದ್ ಪರ ಆಡುವುದಿಲ್ಲ ಎಂಬುದನ್ನು ಮತ್ತೊಮ್ಮೆ ಪರೋಕ್ಷವಾಗಿ ತಿಳಿಸಿದ್ದಾರೆ.
ಹೌದು, ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ನೀವು ಮುಂದಿನ ಸೀಸನ್ನಲ್ಲೂ ಎಸ್ಆರ್ಹೆಚ್ ಪರ ಆಡುತ್ತೀರಲ್ಲವೇ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಎಸ್ಆರ್ಹೆಚ್ ತಂಡದ ಮಾಜಿ ನಾಯಕ ವಾರ್ನರ್, ದಯವಿಟ್ಟು ನನ್ನ ಸ್ನೇಹಿತ ಕೇನ್ ಅಲ್ಲಿಯೇ ಇರುತ್ತಾರೆ. ನೀವು ಅವರನ್ನು ಬೆಂಬಲಿಸಿ ಎಂಬಾರ್ಥದಲ್ಲಿ ಉತ್ತರ ನೀಡಿದ್ದಾರೆ. ಇದರೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು ಕೇನ್ ವಿಲಿಯಮ್ಸನ್ ಅವರನ್ನು ಮೆಗಾ ಹರಾಜಿಗೂ ಮುನ್ನ ರಿಟೈನ್ ಮಾಡಿಕೊಳ್ಳುವುದು ಬಹುತೇಕ ಖಚಿತ ಎಂಬುದು ಬಹಿರಂಗವಾಗಿದೆ. ಅಷ್ಟೇ ಅಲ್ಲದೆ ಡೇವಿಡ್ ವಾರ್ನರ್ ಎಸ್ಆರ್ಹೆಚ್ ತಂಡದಿಂದ ಹೊರಬರಲಿದ್ದಾರೆ ಎಂಬುದು ಸಹ ಸ್ಪಷ್ಟವಾಗಿದೆ.
ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು. ಅದರಂತೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರ+ಇಬ್ಬರು ವಿದೇಶಿ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಪ್ರಸ್ತುತ ಮಾಹಿತಿ ಪ್ರಕಾರ ಸನ್ರೈಸರ್ಸ್ ಹೈದರಾಬಾದ್ ತಂಡವು ಕೇನ್ ವಿಲಿಯಮ್ಸನ್ ಹಾಗೂ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ವಿದೇಶಿ ಕೋಟಾದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್: ಚಾಂಪಿಯನ್ ಪಟ್ಟಕ್ಕೇರಿದ 6 ತಂಡಗಳು
ಇದನ್ನೂ ಓದಿ: Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!
(IPL 2022: ‘Sunrisers Hyderabad to retain Kane Willamson’ hints good friend David Warner)