IPL 2022: ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಅನುಮಾನ

| Updated By: ಝಾಹಿರ್ ಯೂಸುಫ್

Updated on: Mar 15, 2022 | 10:31 PM

Mumbai Indians: ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್.

IPL 2022: ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಅನುಮಾನ
Mumbai Indians
Follow us on

IPL 2022 ಆರಂಭಕ್ಕೂ ಮುನ್ನ ಇದೀಗ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸ್ಟಾರ್ ಆಟಗಾರನ ಗಾಯದ ಸಮಸ್ಯೆ ಎದುರಾಗಿದೆ. ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆಡಲಿದ್ದು ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಆಡುವುದು ಅನುಮಾನ ಎನ್ನಲಾಗಿದೆ. ಸೂರ್ಯ ಗಾಯಗೊಂಡಿದ್ದು, ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ. ಸೂರ್ಯಕುಮಾರ್ ಮುಂಬೈ ಇಂಡಿಯನ್ಸ್ ತಂಡದ ಮಧ್ಯಮ ಕ್ರಮಾಂಕದ ಶಕ್ತಿ. ಹೀಗಾಗಿ ಮೊದಲ ಪಂದ್ಯದಲ್ಲೇ ಅವರ ಅನುಪಸ್ಥಿತಿ ತಂಡದ ಮೇಲೆ ಪರಿಣಾಮ ಬೀರಬಹುದು.

ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್ ಚೇತರಿಸಿಕೊಳ್ಳಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳಲ್ಲಿದ್ದಾರೆ. ಹೀಗಾಗಿ ಅವರು ಐಪಿಎಲ್ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ. ಇದಾಗ್ಯೂ 2ನೇ ಅಥವಾ 3ನೇ ಪಂದ್ಯದ ವೇಳೆಗೆ ಸೂರ್ಯಕುಮಾರ್ ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು, ”ಸೂರ್ಯಕುಮಾರ್ ಯಾದವ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಬಗ್ಗೆ ಟ್ರೈನಿಂಗ್ ಮಾಡುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. ಆದರೆ ಅವರು ಐಪಿಎಲ್ 2022 ರ ಮೊದಲ ಪಂದ್ಯವನ್ನು ಆಡುತ್ತಾರೆ ಎಂದು ಈಗಲೇ ಹೇಳುವುದು ಕಷ್ಟ. ವೈದ್ಯರು ಅವರನ್ನು ಪಂದ್ಯಾವಳಿಯ ಆರಂಭಿಕ ಪಂದ್ಯದಿಂದ ದೂರವಿರಲು ಸೂಚಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತನ್ನ ಎರಡನೇ ಪಂದ್ಯವನ್ನು ಏಪ್ರಿಲ್ 2 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಈ ಪಂದ್ಯದ ಮೂಲಕ ಸೂರ್ಯಕುಮಾರ್ ಕಣಕ್ಕಿಳಿಯುವ ನಿರೀಕ್ಷೆಯಿದೆ. ಅಷ್ಟರೊಳಗೆ ಸೂರ್ಯಕುಮಾರ್ ಸಂಪೂರ್ಣ ಫಿಟ್ ಆಗಲಿದ್ದು, ಆಡಲು ಸಿದ್ಧರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ನಾಲ್ವರು ಆಟಗಾರರಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಗೆಲುವಿನ ಹೀರೋ ಕೂಡ ಆಗಿದ್ದರು. ಅಲ್ಲದೆ ಆ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಆದರೆ ಶ್ರೀಲಂಕಾ ವಿರುದ್ದದ ಸರಣಿ ವೇಳೆ ಗಾಯಗೊಂಡ ಬಳಿಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂಬೈ ಇಂಡಿಯನ್ಸ್:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಸಂಜಯ್ ಯಾದವ್, ರಮಣ್‌ದೀಪ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ರಾಹುಲ್ ಬುಮ್ರಾ, ಹೃತಿಕ್ ಶೋಕೀನ್ , ಅರ್ಷದ್ ಖಾನ್, ಟೈಮಲ್ ಮಿಲ್ಸ್, ಜೋಫ್ರಾ ಆರ್ಚರ್, ಫ್ಯಾಬಿಯನ್ ಅಲೆನ್, ಡೇನಿಯಲ್ ಸ್ಯಾಮ್ಸ್, ಅನ್ಮೋಲ್ಪ್ರೀತ್ ಸಿಂಗ್, ಟಿಮ್ ಡೇವಿಡ್, ರಿಲೆ ಮೆರೆಡಿತ್.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Suryakumar Yadav unlikely to be available for MI’s IPL opener vs DC on Mar 27)

Published On - 2:55 pm, Tue, 15 March 22