RCB vs RCB: ಎದುರಾಳಿ ತಂಡದ ಮೂವರು ಮಿಂಚಲಿ: ಆರ್​ಸಿಬಿ ಗೆಲ್ಲಲಿ ಎಂದ ಮಿ. ನಾಗ್ಸ್

| Updated By: ಝಾಹಿರ್ ಯೂಸುಫ್

Updated on: Apr 05, 2022 | 6:42 PM

IPL 2022: ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 12 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು ರಾಜಸ್ಥಾನ್ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ.

RCB vs RCB: ಎದುರಾಳಿ ತಂಡದ ಮೂವರು ಮಿಂಚಲಿ: ಆರ್​ಸಿಬಿ ಗೆಲ್ಲಲಿ ಎಂದ ಮಿ. ನಾಗ್ಸ್
Mr.Nags
Follow us on

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ (IPL 2022) 13ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs RR) ಮುಖಾಮುಖಿಯಾಗಲಿವೆ . ರಾಜಸ್ಥಾನ್ ರಾಯಲ್ಸ್ ಆಡಿರುವ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದರಲ್ಲಿ ಗೆದ್ದು, ಒಂದರಲ್ಲಿ ಸೋತಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನ ಲಯವನ್ನು ಮುಂದುವರೆಸುವ ಇರಾದೆಯಲ್ಲಿದೆ. ಉಭಯ ತಂಡಗಳು ಇದುವರೆಗೆ 25 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 12 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು ರಾಜಸ್ಥಾನ್ ಗೆದ್ದಿರುವುದು ಕೇವಲ 10 ಪಂದ್ಯಗಳಲ್ಲಿ ಮಾತ್ರ. ಇನ್ನು ಮೂರು ಪಂದ್ಯಗಳು ನಾನಾ ಕಾರಣದಿಂದ ರದ್ದಾಗಿತ್ತು. ಅಷ್ಟೇ ಅಲ್ಲದೆ ಕಳೆದ ಸೀಸನ್​ನಲ್ಲೂ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್​ ವಿರುದ್ದ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಈ ಅಂಕಿ ಅಂಶಗಳ ಪ್ರಕಾರ ಆರ್​ಸಿಬಿ ಬಲಿಷ್ಠ ತಂಡವೆಂದೇ ಹೇಳಬಹುದು. ಆದರೆ ಕಳೆದ ಬಾರಿ ಆರ್​ಸಿಬಿ ತಂಡದಲ್ಲಿದ್ದ ಮೂವರು ಆಟಗಾರರು ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದಾರೆ.

ಹೌದು, ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಯುಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್ ಹಾಗೂ ನವದೀಪ್ ಸೈನಿ ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮಿಸ್ಟರ್ ನಾಗ್ಸ್ ಖ್ಯಾತಿಯ ದಾನಿಶ್ ಸೇಠ್, ಈ ಮೂವರು ಆಟಗಾರರು ಆರ್​ಸಿಬಿ ವಿರುದ್ದ ಮಿಂಚಲಿ ಎಂದು ಬಯಸಿದ್ದಾರೆ. ಆದರೆ ಗೆಲುವು ಮಾತ್ರ ಆರ್​ಸಿಬಿ ತಂಡದ್ದೇ ಆಗಿರಲಿ ಎಂದಿದ್ದಾರೆ.

ಚಹಲ್ ವಿಕೆಟ್ ಪಡೆಯಬೇಕು, ಪಡಿಕ್ಕಲ್ ರನ್​ಗಳಿಸಬೇಕು, ಸೈನಿ ಉತ್ತಮವಾಗಿ ಬೌಲಿಂಗ್ ಮಾಡಬೇಕು…ಆದರೆ ಆರ್​ಸಿಬಿ ಗೆಲ್ಲಲೇಬೇಕು  ಎಂದು ಟ್ವೀಟ್ ಮಾಡುವ ಮೂಲಕ ದಾನಿಶ್ ಸೇಠ್ ಗಮನ ಸೆಳೆದಿದ್ದಾರೆ. ಒಟ್ಟಿನಲ್ಲಿ ಈ ಮೂವರು ಆಟಗಾರರು ಆರ್​ಸಿಬಿ ವಿರುದ್ದ ಕಣಕ್ಕಿಳಿದರೆ ಆರ್​ಸಿಬಿ vs ಆರ್​​ಸಿಬಿ ಪಂದ್ಯವಾದರೂ ಅಚ್ಚರಿಪಡಬೇಕಿಲ್ಲ. ಅದರಲ್ಲೂ ಮಾಜಿ ಆರ್​ಸಿಬಿ ಆಟಗಾರರಲ್ಲಿ ಯಾರು ಆರ್​ಸಿಬಿ ವಿರುದ್ದವೇ ಅಬ್ಬರಿಸಲಿದ್ದಾರೆ ಕಾದು ನೋಡಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ರಾಜಸ್ಥಾನ್ ರಾಯಲ್ಸ್ (RR) ತಂಡ:
ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ, ಕೆಸಿ ಕಾರ್ಯಪ್ಪ, ನವದೀಪ್ ಸೈನಿ, ತೇಜಸ್ ಬರೋಕಾ, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಕುಲ್ದ್ರುವ್ ಜುರೆಲ್ , ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವಾನ್ ಡೆರ್ ಡುಸ್ಸೆನ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಕರುಣ್ ನಾಯರ್, ಒಬೆಡ್ ಮೆಕಾಯ್.

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್