IPL 2022: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ RCB
IPL 2022: ಇನಿಂಗ್ಸ್ ಆರಂಭಿಸಿದ ಆರ್ಸಿಬಿ ಪರ ಫಾಫ್ ಡುಪ್ಲೆಸಿಸ್ 4 ರನ್ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಹಾಗೂ ಅನೂಜ್ ರಾವತ್ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಗ್ಲೆನ್ ಮ್ಯಾಕ್ಸ್ವೆಲ್ (12), ಸುಯಶ್ ಪ್ರಭುದೇಸಾಯಿ (15) ಎರಡಂಕಿ ಗಳಿಸಿ ಪೆವಿಲಿಯನ್ ಕಡೆ ಮುಖ ಮಾಡಿದರು.
IPL 2022: ಐಪಿಎಲ್ನ 36ನೇ ಪಂದ್ಯದಲ್ಲಿ ಎಸ್ಆರ್ಹೆಚ್ (RCB vs SRH) ವಿರುದ್ದ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಕೆಟ್ಟ ದಾಖಲೆಯೊಂದನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಎಸ್ಆರ್ಹೆಚ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿ ಪರ ಫಾಫ್ ಡುಪ್ಲೆಸಿಸ್ 4 ರನ್ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಹಾಗೂ ಅನೂಜ್ ರಾವತ್ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಗ್ಲೆನ್ ಮ್ಯಾಕ್ಸ್ವೆಲ್ (12), ಸುಯಶ್ ಪ್ರಭುದೇಸಾಯಿ (15) ಎರಡಂಕಿ ಗಳಿಸಿ ಪೆವಿಲಿಯನ್ ಕಡೆ ಮುಖ ಮಾಡಿದರು. ಇದಾದ ಬಳಿಕ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ ಆರ್ಸಿಬಿ ಕೇವಲ 68 ರನ್ಗೆ ಆಲೌಟ್ ಆಯಿತು.
ಇದರೊಂದಿಗೆ ಐಪಿಎಲ್ನಲ್ಲಿ 70 ರನ್ ಅಥವಾ ಅದಕ್ಕಿಂತ ಕಡಿಮೆ ರನ್ಗಳ ಒಳಗೆ ಅತೀ ಹೆಚ್ಚು ಬಾರಿ ಆಲೌಟ್ ಆದ ತಂಡ ಎಂಬ ಕೆಟ್ಟ ದಾಖಲೆಯೊಂದು ಆರ್ಸಿಬಿ ಪಾಲಾಗಿದೆ. ಐಪಿಎಲ್ನಲ್ಲಿ ಕೇವಲ 8 ಬಾರಿ ಮಾತ್ರ ತಂಡಗಳು 70 ಅಥವಾ ಅದಕ್ಕಿಂತ ಕಡಿಮೆಗೆ ಆಲೌಟ್ ಆಗಿದೆ. ಈ ಪಟ್ಟಿಯಲ್ಲಿ ಆರ್ಸಿಬಿ, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ತಂಡಗಳು ಮಾತ್ರ ಇರುವುದು ವಿಶೇಷ. ಅಂದರೆ ಅತೀ ಕಡಿಮೆ ರನ್ಗಳಿಸಿದ ಪಟ್ಟಿಯಲ್ಲಿ ಈ ನಾಲ್ಕು ತಂಡಗಳೇ ಇವೆ.
ಅದರಲ್ಲೂ ಆರ್ಸಿಬಿ 4 ಬಾರಿ 70 ಅಥವಾ ಅದಕ್ಕಿಂತ ಕಡಿಮೆಗೆ ಆಲೌಟ್ ಆಗುವ ಮೂಲಕ ಕೆಟ್ಟ ದಾಖಲೆ ಬರೆದಿದೆ. ಅಂದರೆ ಐಪಿಎಲ್ ಇತಿಹಾಸದಲ್ಲೇ 70 ಕ್ಕಿಂತ ಕಡಿಮೆ ರನ್ಗೆ ಅತೀ ಹೆಚ್ಚು ಬಾರಿ ಆಲೌಟ್ ಆಗಿರುವ ಅಪಖ್ಯಾತಿಯನ್ನು ಆರ್ಸಿಬಿ ಹೊಂದಿದೆ. ಆರ್ಸಿಬಿ ಕೆಕೆಆರ್ ವಿರುದ್ದ 49 ರನ್ಗಳಿಗೆ, ಎಸ್ಆರ್ಹೆಚ್ ವಿರುದ್ದ 68 ರನ್ಗೆ, ಸಿಎಸ್ಕೆ ವಿರುದ್ದ 70 ರನ್ಗೆ, ರಾಜಸ್ಥಾನ್ ರಾಯಲ್ಸ್ ವಿರುದ್ದ 70 ರನ್ಗಳಿಗೆ ಆಲೌಟ್ ಆಗಿದೆ.
ಅಷ್ಟೇ ಅಲ್ಲದೆ ಐಪಿಎಲ್ನಲ್ಲಿ ಅತೀ ಹೆಚ್ಚು ಬಾರಿ 100 ರನ್ಗಳ ಒಳಗೆ ಆಲೌಟ್ ಆದ ತಂಡಗಳ ಪಟ್ಟಿಯಲ್ಲಿ ಆರ್ಸಿಬಿ 2ನೇ ಸ್ಥಾನದಲ್ಲಿದೆ. ಆರ್ಸಿಬಿ ಇದುವರೆಗೆ ಐಪಿಎಲ್ 8 ಬಾರಿ 100 ಕ್ಕಿಂತ ಕಡಿಮೆ ರನ್ಗೆ ಆಲೌಟ್ ಆಗಿದೆ. ಈ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದೆ. ಡೆಲ್ಲಿ ತಂಡವು ಇದುವರೆಗೆ 9 ಬಾರಿ 100 ಕ್ಕಿಂತ ಕಡಿಮೆ ರನ್ಗಳಿಗೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ.
ಇದನ್ನೂ ಓದಿ: Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್