IPL 2022 Points Table: ಐಪಿಎಲ್ ಪಾಯಿಂಟ್ ಟೇಬಲ್ ಹೇಗಿದೆ?. ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಐಪಿಎಲ್ ಪಾಯಿಂಟ್ ಟೇಬಲ್ ಹೇಗಿದೆ?. ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
IPL 2022 Points Table
Follow us
TV9 Web
| Updated By: Vinay Bhat

Updated on: Apr 21, 2022 | 10:35 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಐದು ಪಂದ್ಯಗಳಲ್ಲಿ ಸೋಲುಂಡರೆ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಆರೂ ಪಂದ್ಯಗಳಲ್ಲಿಯು ಸೋಲು ಅನುಭವಿಸಿ ಕೆಟ್ಟ ದಾಖಲೆ ಬರೆದಿದೆ. ಇಂದು ಉಭಯ ತಂಡಗಳು ಮುಖಾಮುಖಿ ಆಗಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಆರು ಪಂದ್ಯದಲ್ಲಿ ಒಂದರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ. 10 ಅಂಕದೊಂದಿಗೆ ಗುಜರಾತ್ ನಿವ್ವಳ ರನ್ ರೇಟ್ +0.395 ಆಗಿದೆ.
  • ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನದಲ್ಲಿದ್ದು, ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.251 ಆಗಿದೆ.
  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 8 ಅಂಕ ಸಂಪಾದಿಸಿದೆ. ಆರ್​ಆರ್​ +0.380 ರನ್​​ರೇಟ್ ಹೊಂದಿದೆ.
  • ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಒಟ್ಟು 8 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.124.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿದ್ದು 8 ಅಂಕ ಸಂಪಾದಿಸಿ -0.077 ರನ್ ರೇಟ್ ಹೊಂದಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೇಲಕ್ಕೇರಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಭರ್ಜರಿ ಗೆಲುವಿನ ಬಳಿಕ ಆರನೇ ಸ್ಥಾನಕ್ಕೇರಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.942 ಆಗಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಏಳನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ನಾಲ್ಕರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.160 ರನ್​​ರೇಟ್​ನೊಂದಿಗೆ 6ನೇ ಸ್ಥಾನದಲ್ಲಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಎಂಟನೇ ಸ್ಥಾನಕ್ಕೆ ಕುಸಿದಿದೆ. 6 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.562 ಆಗಿದೆ.
  • ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಪೈಕಿ 5 ರಲ್ಲಿ ಸೋಲು ಒಂದರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಅಂಕದೊಂದಿಗೆ -0.638 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಆರೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.048.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಇವರು ಆರು ಪಂದ್ಯಗಳಿಂದ 375 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನಕ್ಕೆ ಲಖನೌ ತಂಡದ ನಾಯಕ ಕೆಎಲ್ ರಾಹುಲ್ 265 ರನ್ ಸಿಡಿಸಿ ಜಿಗಿದಿದ್ದಾರೆ. ಅಂತೆಯೆ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ 7 ಪಂದ್ಯಗಳಿಂದ 250 ರನ್ ಕಲೆಹಾಕಿ ಮೂರನೇ ಸ್ಥಾನದಲ್ಲಿದ್ದಾರೆ. ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಏಳು ಪಂದ್ಯಗಳಿಂದ 236 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದು ಇವರು ಐದು ಪಂದ್ಯಗಳಿಂದ 228 ರನ್ ಸಿಡಿಸಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ಆರು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 17 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನಕ್ಕೆ ಕುಲ್ದೀಪ್ ಯಾದವ್ ಜಿಗಿದಿದ್ದು ಇವರು ಆರು ಪಂದ್ಯಗಳಿಂದ 13 ಕಿತ್ತಿದ್ದಾರೆ. ನಂತರದ ಮೂರು ಸ್ಥಾನದಲ್ಲಿ ಟಿ. ನಟರಾಜನ್ ಇದ್ದು ಇವರು 6 ಪಂದ್ಯಗಳಿಂದ 12 ವಿಕೆಟ್, ಆವೇಶ್ ಖಾನ್ 11 ವಿಕೆಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ವನಿಂದು ಹಸರಂಗ ಕೂಡ 11 ವಿಕೆಟ್​ನೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.

Rishabh Pant: ಕೋವಿಡ್​ಗೆ ಸೆಡ್ಡು ಹೊಡೆದ ಡೆಲ್ಲಿ: ಪಂದ್ಯ ಮುಗಿದ ಬಳಿಕ ರಿಷಭ್ ಪಂತ್ ಹೇಳಿದ್ದೇನು ನೋಡಿ

MI vs CSK: ಐಪಿಎಲ್​​ನಲ್ಲಿಂದು ರೋಚಕ ಕದನ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಸಿಎಸ್​​ಕೆ-ಮುಂಬೈ