ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಅದರಲ್ಲೂ ಹಾರ್ದಿಕ್ ಪಡೆ 16 ಅಂಕದೊಂದಿಗೆ ಪ್ಲೇ ಆಫ್ ಹಾದಿ ಖಚಿತ ಪಡಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.
ಪಾಯಿಂಟ್ ಟೇಬಲ್:
ಆರೆಂಜ್ ಕ್ಯಾಪ್:
ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್ ಆರ್ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು 10 ಪಂದ್ಯಗಳಿಂದ 588 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಇವರು 451 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಅವರಿದ್ದು ಆಡಿದ ಒಂಬತ್ತು ಪಂದ್ಯಗಳಿಂದ 324 ರನ್ ಸಿಡಿಸಿದ್ದಾರೆ. ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ 10 ಪಂದ್ಯಗಳಿಂದ 324 ರನ್ ಸಿಡಿಸಿ 4ನೇ ಸ್ಥಾನದಲ್ಲಿದ್ದಾರೆ. ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ 8 ಪಂದ್ಯಗಳಿಂದ 308 ರನ್ ಸಿಡಿಸಿ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.
GT vs PBKS: ಇಂದಿನ ಪಂದ್ಯದಲ್ಲಿ ಯಾರು ಗೆದ್ದರೆ ಆರ್ಸಿಬಿಗೆ ಸಹಾಯ ಆಗಲಿದೆ?: ಇಲ್ಲಿದೆ ನೋಡಿ
ಪರ್ಪಲ್ ಕ್ಯಾಪ್:
ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್ನಲ್ಲಿದ್ದಾರೆ. ಇವರು ಆಡಿದ 10 ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 19 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಯಾದವ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು 9 ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಟಿ. ನಟರಾಜನ್ ಮೂರನೇ ಸ್ಥಾನಕ್ಕೆ ಜಿಗಿದಿದ್ದು ಒಂಬತ್ತು ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಉಮೇಶ್ ಯಾದವ್ 10 ಪಂದ್ಯಗಳಿಂದ 15 ವಿಕೆಟ್ ಪಡೆದುಕೊಂಡು ನಾಲ್ಕನೇ ಸ್ಥಾನದಲ್ಲಿದ್ದಾರೆ. ಇವರ ಜೊತೆಗೆ ವನಿಂದು ಹಸರಂಗ ಕೂಡ 5ನೇ ಸ್ಥಾನದಲ್ಲಿದ್ದು 10 ಪಂದ್ಯಗಳಿಂದ 15 ವಿಕೆಟ್ ಕಿತ್ತಿದ್ದಾರೆ.
ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:31 am, Tue, 3 May 22