IPL 2022 Points Table: ಪಂಜಾಬ್ ಗೆಲುವಿನಿಂದ 6ನೇ ಸ್ಥಾನಕ್ಕೆ ಕುಸಿದ ಆರ್​ಸಿಬಿ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಪಂಜಾಬ್ ಗೆಲುವಿನಿಂದ 6ನೇ ಸ್ಥಾನಕ್ಕೆ ಕುಸಿದ ಆರ್​ಸಿಬಿ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
PBKS IPL 2022
Follow us
TV9 Web
| Updated By: Vinay Bhat

Updated on:May 04, 2022 | 12:33 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಅದರಲ್ಲೂ ಹಾರ್ದಿಕ್ ಪಡೆ 16 ಅಂಕದೊಂದಿಗೆ ಪ್ಲೇ ಆಫ್ ಹಾದಿ ಖಚಿತ ಪಡಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  1. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಪಂಜಾಬ್ ವಿರುದ್ಧ ಸೋತರೂ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ 10 ಪಂದ್ಯಗಳ ಪೈಕಿ ಕೇವಲ ಎರಡಲ್ಲಿ ಸೋಲು, ಎಂಟರಲ್ಲಿ ಗೆಲುವು ಕಂಡು 16 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸುವುದು ಪಕ್ಕಾ ಆಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.158 ಆಗಿದೆ.
  2. ಮತ್ತೊಂದು ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಎರಡನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳ ಪೈಕಿ ಏಳರಲ್ಲಿ ಗೆದ್ದು ಒಟ್ಟು 14 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.397 ಆಗಿದೆ.
  3. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಇವರು ಆಡಿದ ಹತ್ತು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ನಾಲ್ಕರಲ್ಲಿ ಸೋಲುಂಡು ಒಟ್ಟು 12 ಅಂಕ ಸಂಪಾದಿಸಿದೆ. ಆರ್​ಆರ್​ +0.340 ರನ್​​ರೇಟ್ ಹೊಂದಿದೆ.
  4. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿ 10 ಅಂಕ ಸಂಪಾದಿಸಿ 0.471 ರನ್ ರೇಟ್ ಹೊಂದಿದೆ.
  5. ಎಂಟನೇ ಸ್ಥಾನದಲ್ಲಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಇದೀಗ ಐದನೇ ಸ್ಥಾನಕ್ಕೇರಿದೆ. 10 ಪಂದ್ಯಗಳ ಪೈಕಿ ತಲಾ 5 ರಲ್ಲಿ ಗೆಲುವು-ಸೋಲು ಕಂಡು 10 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.229 ಆಗಿದೆ.
  6. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹತ್ತು ಪಂದ್ಯಗಳಲ್ಲಿ ತಲಾ ಐದರಲ್ಲಿ ಸೋಲು-ಗೆಲುವು ಕಂಡಿದೆ. ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.558 ಆಗಿದೆ.
  7. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. 8 ಅಂಕದೊಂದಿಗೆ ಡೆಲ್ಲಿಯ ನಿವ್ವಳ ರನ್ ರೇಟ್ 0.587 ಆಗಿದೆ.
  8. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು, ಆರರಲ್ಲಿ ಸೋಲು ಕಂಡು ಒಟ್ಟು 8 ಅಂಕದೊಂದಿಗೆ 0.060 ರನ್​​ರೇಟ್​ ಹೊಂದಿದೆ.
  9. ಇತ್ತ ಆಡಿದ ಒಂಬತ್ತು ಪಂದ್ಯಗಳ ಪೈಕಿ 6 ರಲ್ಲಿ ಸೋಲು ಮೂರರಲ್ಲಿ ಗೆಲುವು ಕಂಡಿರುವ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಅಂಕದೊಂದಿಗೆ -0.407 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  10. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಕೊನೆಗೂ ಖಾತೆ ತೆರೆದಿರುವ ಎಂಐ ಆಡಿದ 9 ಪಂದ್ಯದ ಪೈಕಿ ಒಂದರಲ್ಲಿ ಜಯ ಸಾಧಿಸಿದೆ. ಮುಂಬೈ ನಿವ್ವಳ ರನ್ ರೇಟ್ -0.836.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು 10 ಪಂದ್ಯಗಳಿಂದ 588 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದು ಇವರು 451 ರನ್ ಗಳಿಸಿದ್ದಾರೆ. ಮೂರನೇ ಸ್ಥಾನಕ್ಕೆ ಶಿಖರ್ ಧವನ್ ಜಿಗಿದಿದ್ದು ಆಡಿದ 10 ಪಂದ್ಯಗಳಿಂದ ಮೂರು ಅರ್ಧಶತಕ ಸಹಿತಿ 369 ರನ್ ಸಿಡಿಸಿದ್ದಾರೆ. ಅಭಿಷೇಕ್ ಶರ್ಮಾ 4ನೇ ಸ್ಥಾನದಲ್ಲಿದ್ದು ಆಡಿದ ಒಂಬತ್ತು ಪಂದ್ಯಗಳಿಂದ 324 ರನ್ ಗಳಿಸಿದ್ದಾರೆ. ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ 10 ಪಂದ್ಯಗಳಿಂದ 324 ರನ್ ಸಿಡಿಸಿ 5ನೇ ಸ್ಥಾನದಲ್ಲಿದ್ದಾರೆ.

Hardik Pandya: ಐಪಿಎಲ್ 2022 ರಲ್ಲಿ ಎರಡನೇ ಸೋಲುಂಡ ಬಳಿಕ ಹಾರ್ದಿಕ್ ಪಾಂಡ್ಯ ಶಾಕಿಂಗ್ ಹೇಳಿಕೆ

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ 10 ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 19 ವಿಕೆಟ್ ಕಬಳಿಸಿದ್ದಾರೆ. ಕುಲ್ದೀಪ್ ಯಾದವ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು 9 ಪಂದ್ಯಗಳಿಂದ 17 ವಿಕೆಟ್ ಕಿತ್ತಿದ್ದಾರೆ. ಪಂಜಾಬ್ ತಂಡದ ಕಗಿಸೊ ರಬಾಡ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು 9 ಪಂದ್ಯಗಳಿಂದ ಇವರುಕೂಡ 17 ವಿಕೆಟ್ ಪಡೆದಿದ್ದಾರೆ. ಇವರ ಜೊತೆಗೆ ಒಂಬತ್ತು ಪಂದ್ಯಗಳಿಂದ 17 ವಿಕೆಟ್ ಕಿತ್ತು ಟಿ. ನಟರಾಜನ್ 4ನೇ ಸ್ಥಾನದಲ್ಲಿದ್ದಾರೆ. ಉಮೇಶ್ ಯಾದವ್ 10 ಪಂದ್ಯಗಳಿಂದ 15 ವಿಕೆಟ್ ಪಡೆದುಕೊಂಡು 5ನೇ ಸ್ಥಾನದಲ್ಲಿದ್ದಾರೆ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:33 pm, Wed, 4 May 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ