IPL 2022: ಐಪಿಎಲ್ 2022 ರ ಎಲಿಮಿನೇಟರ್ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs LSG) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಎರಡನೇ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಆದರೆ ಈ ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವಿರಾಟ್ ಕೊಹ್ಲಿ (Virat Kohli) ಮೇಲಿದೆ. ಏಕೆಂದರೆ ವಿರಾಟ್ ಕೊಹ್ಲಿ ಆರ್ಸಿಬಿ ಪರ ಆರಂಭಿಕರಾಗಿ ಆಡುತ್ತಿದ್ದು, ತಂಡಕ್ಕೆ ಉತ್ತಮ ಆರಂಭ ಒದಗಿಸುವ ಜವಾಬ್ದಾರಿ ಅವರ ಮೇಲಿದೆ. ಆದರೆ ಐಪಿಎಲ್ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಉತ್ತಮ ದಾಖಲೆ ಹೊಂದಿಲ್ಲ.
ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿರುವ ವಿರಾಟ್ ಕೊಹ್ಲಿ, ನಾಕೌಟ್ ಹಂತದಲ್ಲಿ ಮಾತ್ರ ಎಡುವುತ್ತಾ ಬಂದಿದ್ದಾರೆ. ಏಕೆಂದರೆ ಐಪಿಎಲ್‌ನ 220 ಪಂದ್ಯಗಳ 212 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 6519 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್‌ನಿಂದ 5 ಶತಕಗಳು ಮೂಡಿಬಂದಿವೆ. ಆದರೆ ನಾಕೌಟ್ ಪಂದ್ಯಗಳಲ್ಲಿ ರನ್ ಗಳಿಸುವ ವಿಚಾರದಲ್ಲಿ ಮಾತ್ರ ವಿರಾಟ್ ಹಿಂದೆ ಬಿದ್ದಿದ್ದಾರೆ. ಐಪಿಎಲ್‌ನಲ್ಲಿ ಇದುವರೆಗಿನ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಅಂಕಿ ಅಂಶಗಳನ್ನು ನೋಡುವುದಾದರೆ…
ಪ್ಲೇಆಫ್ ಹಂತದಲ್ಲಿ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಂಕಿ ಅಂಶಗಳು:
ಅಂದರೆ ಇಲ್ಲಿ ವಿರಾಟ್ ಕೊಹ್ಲಿ 9 ನಾಕೌಟ್ ಪಂದ್ಯಗಳನ್ನು ಆಡಿದರೂ ಒಂದು ಬಾರಿ ಮಾತ್ರ ಅರ್ಧಶತಕ ಬಾರಿಸಿದ್ದಾರೆ. ಇನ್ನುಳಿದ ನಿರ್ಣಾಯಕ ಪಂದ್ಯಗಳಲ್ಲಿ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿಯೇ ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ವಿರಾಟ್ ಕೊಹ್ಲಿ ಅಬ್ಬರಿಸುವ ಕೊಹ್ಲಿ ಹೊಸ ಇತಿಹಾಸ ಬರೆಯಲಿದ್ದಾರಾ ಕಾದು ನೋಡಬೇಕಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:36 pm, Wed, 25 May 22