IPL 2022: ಮುಂಬೈ ಸೋಲಿನ ಬೆನ್ನಲ್ಲೇ ವಡ ಪಾವ್ ಅನ್ನು ಪ್ರಸ್ತಾಪಿಸಿ ಕಾಲೆಳೆದ ಸೆಹ್ವಾಗ್

IPL 2022: ಈ ಭರ್ಜರಿ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆಯ ಪಟ್ಟಿಯಲ್ಲಿ ಕಮಿನ್ಸ್ ಹೆಸರು ಕೂಡ ಸೇರ್ಪಡೆಯಾಗಿತ್ತು.

IPL 2022: ಮುಂಬೈ ಸೋಲಿನ ಬೆನ್ನಲ್ಲೇ ವಡ ಪಾವ್ ಅನ್ನು ಪ್ರಸ್ತಾಪಿಸಿ ಕಾಲೆಳೆದ ಸೆಹ್ವಾಗ್
virender sehwag- rohit sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 07, 2022 | 4:56 PM

ಐಪಿಎಲ್​ 14ನೇ ಪಂದ್ಯದಲ್ಲಿ (IPL 2022) ಮುಂಬೈ ಇಂಡಿಯನ್ಸ್ (Mumbai Indians) ವಿರುದ್ದ ಕೆಕೆಆರ್ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರೂವಾರಿ ಆಲ್​ರೌಂಡರ್ ಆಟಗಾರ ಪ್ಯಾಟ್ ಕಮಿನ್ಸ್. ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿದ ಕಮಿನ್ಸ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಮುಂಬೈ ಗೆಲುವವನ್ನು ಕಸಿದುಕೊಂಡಿದ್ದರು. ಅಲ್ಲದೆ 16ನೇ ಓವರ್​ನಲ್ಲಿ 35 ರನ್ ಬಾರಿಸಿ ಕೇವಲ 16 ಓವರ್​ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಈ ಭರ್ಜರಿ ಗೆಲುವಿನೊಂದಿಗೆ ಐಪಿಎಲ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆಯ ಪಟ್ಟಿಯಲ್ಲಿ ಕಮಿನ್ಸ್ ಹೆಸರು ಕೂಡ ಸೇರ್ಪಡೆಯಾಗಿತ್ತು.

ಈ ಅಮೋಘ ಗೆಲುವನ್ನು ಪಸ್ತಾಪಿಸಿ ಟ್ವೀಟ್ ಮಾಡಿದ್ದ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, “ಬಾಯಿಗೆ ಬಂದ ನಿವಾಲಾ ಕಸಿದುಕೊಂಡರು, ಕ್ಷಮಿಸಿ ವಡಾ ಪಾವ್ ಕಸಿದು ಕೊಂಡರು ಎಂದು ಕಾಲೆಳೆದಿದ್ದರು. ಅಲ್ಲದೆ ಪ್ಯಾಟ್ ಕಮ್ಮಿನ್ಸ್, ಕ್ಲೀನ್ ಹಿಟ್ಟಿಂಗ್‌ನ ಅದ್ಭುತ ಪ್ರದರ್ಶನ ಎಂದು ಟ್ವೀಟ್ ಮಾಡಿ ಹಾಡಿಹೊಗಳಿದ್ದರು. ಮುಂಬೈ ಇಂಡಿಯನ್ಸ್ ಸೋಲಿನ ಬೆನ್ನಲ್ಲೇ ಸೆಹ್ವಾಗ್ ಮಾಡಿರುವ ಈ ಟ್ವೀಟ್ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ಸೆಹ್ವಾಗ್ ವಡ ಪಾವ್ ಎಂದು ಬೇಕೆಂತಲೇ ಪ್ರಸ್ತಾಪಿಸಿದ್ದಾರೆ ಎಂದು ಮುಂಬೈ ಇಂಡಿಯನ್ಸ್​ನ ಕೆಲ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ರೋಹಿತ್ ಶರ್ಮಾ ಅವರನ್ನು ವಡ ಪಾವ್ ಎಂಬ ಟ್ಯಾಗ್ ಲೈನ್ ನೀಡಿ ಟ್ರೋಲ್ ಮಾಡಲಾಗುತ್ತದೆ. ಸೆಹ್ವಾಗ್ ಕೂಡ ರೋಹಿತ್ ಶರ್ಮಾ ಅವರನ್ನು ಗುರಿಯಾಗಿಸಿ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ ಎಂದು ಹಿಟ್​ಮ್ಯಾನ್ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.

ಒಟ್ಟಿನಲ್ಲಿ ಭರ್ಜರಿ ಪ್ರದರ್ಶನವನ್ನು ಹಾಡಿಹೊಗಳುವ ಭರದಲ್ಲಿ ವೀರೇಂದ್ರ ಸೆಹ್ವಾಗ್ ಮಾಡಿರುವ ಟ್ವೀಟ್ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಸೆಹ್ವಾಗ್ ವಿರುದ್ದ ಇದೀಗ ರೋಹಿತ್ ಶರ್ಮಾ ಅಭಿಮಾನಿಗಳು ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಅದರಲ್ಲೂ ಕೆಲ ಫ್ಯಾನ್ ಪೇಜ್​ಗಳು ಒಂದೇ ಒಂದು ಐಪಿಎಲ್​ ಟ್ರೋಫಿ ಗೆಲ್ಲಲಾಗದ ಆಟಗಾರನೊಬ್ಬ 5 ಬಾರಿಯ ಚಾಂಪಿಯನ್​ ತಂಡವನ್ನು ಹೀಯಾಳಿಸುತ್ತಿದ್ದಾರೆ ಎಂದು ಸೆಹ್ವಾಗ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ