Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!

IPL 2022 : ಒಂದೇ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು.

Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!
Rahul Tewatia-Virender Sehwag
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2022 | 2:23 PM

ಐಪಿಎಲ್​ ಸೀಸನ್​ 15 ನಲ್ಲಿ (IPL 2022) ಗುಜರಾತ್ ಟೈಟನ್ಸ್ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಗೆಲುವಿನ ನಾಗಾಲೋಟದಲ್ಲಿ ಪಂಜಾಬ್ ಕಿಂಗ್ಸ್ 2ನೇ ಸೋಲುಂಡಿದೆ. ಶುಕ್ರವಾರ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ (PBKS vs GT) ಮುಖಾಮುಖಿಯಾಗಿತ್ತು. ರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಪಂಜಾಬ್ ಮೊದಲು ಬ್ಯಾಟ್ ಮಾಡಿ 189 ರನ್​ ಕಲೆಹಾಕಿತು. 190 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟನ್ಸ್ ತಂಡವು ಕೊನೆಯ ಓವರ್​ ವೇಳೆಗೆ ಸೋಲಿನ ಸುಳಿಗೆ ಸಿಲುಕಿತ್ತು. ಅದರಲ್ಲೂ ಕೊನೆಯ ಎರಡು ಎಸೆತಗಳಲ್ಲಿ 12 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಓಡಿಯನ್ ಸ್ಮಿತ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುವ ಮೂಲಕ ರಾಹುಲ್ ತೆವಾಟಿಯಾ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ದ ಗುಜರಾತ್ ಟೈಟನ್ಸ್ ತಂಡವು ರೋಚಕ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಟ್ವೀಟ್ ಮಾಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ಲಾರ್ಡ್ ತೆವಾಟಿಯಾ ಎಂದು ಹಾಡಿಹೊಗಳಿದ್ದಾರೆ. ಅಷ್ಟೇ ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ತಮ್ಮ ಡಗೌಟ್​ನಲ್ಲಿ ರಾಹುಲ್ ತೆವಾಟಿಯಾ ಅವರ ಪ್ರತಿಮೆಯನ್ನು ಮಾಡಿಟ್ಟುಕೊಳ್ಳುವಂತೆ ಕಾಲೆಳೆದಿದ್ದಾರೆ. ಏಕೆಂದರೆ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್ ವಿರುದ್ದ ಭರ್ಜರಿ ಪ್ರದರ್ಶನದ ಮೂಲಕ ಗೆಲುವನ್ನು ಕಸಿದುಕೊಳ್ಳುತ್ತಿರುವುದು ಇದು 2ನೇ ಬಾರಿ.

2020 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್​ ವಿರುದ್ದದ ರೋಚಕ ಪಂದ್ಯದಲ್ಲಿ ಶೆಲ್ಡನ್ ಕಾಟ್ರೆಲ್ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು. ಇದೀಗ ಗುಜರಾತ್ ಟೈಟನ್ಸ್ ಮೂಲಕ ಮತ್ತೊಮ್ಮೆ ಅಂತಿಮ ಓವರ್​ನಲ್ಲಿ ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿ ಹೀರೋ ಎನಿಸಿಕೊಂಡಿದ್ದಾರೆ.

ಹೀಗಾಗಿಯೇ ವೀರೇಂದ್ರ ಸೆಹ್ವಾಗ್, ರಾಹುಲ್ ತೆವಾಟಿಯಾರನ್ನು ಲಾರ್ಡ್​ ಎಂದು ಬಣ್ಣಿಸುವ ಮೂಲಕ ಪಂಜಾಬ್ ಕಿಂಗ್ಸ್ ಅವರ ಪ್ರತಿಮೆಯನ್ನು ಡಗೌಟ್​ನಲ್ಲಿ ಸ್ಥಾಪಿಸುವುದು ಉತ್ತಮ ಎಂದಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ಗೆ ಅಂತಿಮ ಓವರ್​ನಲ್ಲಿ ಸೋಲುಣಿಸುವ ತೆವಾಟಿಯಾರನ್ನು ಪೂಜೆ ಮಾಡಿ ಒಲಿಸಿಕೊಳ್ಳುವಂತೆ ಪರೋಕ್ಷವಾಗಿ ಸೆಹ್ವಾಗ್ ಕಿಚಾಯಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ