AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸೋಲಿನ ಬೆನ್ನಲ್ಲೇ ಎಸ್​ಆರ್​ಹೆಚ್​ಗೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಗಾಯ

IPL 2022: ಸನ್ ರೈಸರ್ಸ್ ಹೈದರಾಬಾದ್ (SRH): ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್

IPL 2022: ಸೋಲಿನ ಬೆನ್ನಲ್ಲೇ ಎಸ್​ಆರ್​ಹೆಚ್​ಗೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಗಾಯ
SRH
TV9 Web
| Edited By: |

Updated on: May 02, 2022 | 2:45 PM

Share

IPL 2022: ಐಪಿಎಲ್ ಸೀಸನ್ 15 ನಲ್ಲಿ ಆರಂಭದ ಎರಡು ಪಂದ್ಯಗಳಲ್ಲಿ ಸೋತು ಆ ಬಳಿಕ ಭರ್ಜರಿ ಕಂಬ್ಯಾಕ್ ಮಾಡಿದ್ದ ಸನ್​ರೈಸರ್ಸ್​ ಹೈದರಾಬಾದ್​ಗೆ (SRH) ಮುಂದಿನ ಪಂದ್ಯಗಳು ನಿರ್ಣಾಯಕ. ಏಕೆಂದರೆ ಕಳೆದ ಪಂದ್ಯದಲ್ಲಿ ಸಿಎಸ್​​ಕೆ (CSK) ವಿರುದ್ದ ಸೋತಿರುವ ಎಸ್​ಆರ್​ಹೆಚ್​ಗೆ ಇನ್ನು 5 ಪಂದ್ಯಗಳು ಮಾತ್ರ ಉಳಿದಿದೆ. ಹೀಗಾಗಿ ಇದರಲ್ಲಿ ನಾಲ್ಕರಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬಹುದು. ಆದರೆ ನಿರ್ಣಾಯಕ ಹಂತದಲ್ಲಿ ತಂಡದ ಪ್ರಮುಖ ಆಟಗಾರ ಮತ್ತೆ ಗಾಯಗೊಂಡಿರುವುದು ಇದೀಗ ಎಸ್​ಆರ್​ಹೆಚ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೌದು, ಎಸ್​ಆರ್​ಹೆಚ್​ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್​ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಾಷಿಂಗ್ಟನ್ ಆಡುವುದು ಅನುಮಾನ.

ವಾಷಿಂಗ್ಟನ್ ಸುಂದರ್ ಅವರು ಬೌಲಿಂಗ್ ಮಾಡುವ ಕೈಗೆ ಮತ್ತೆ ಗಾಯ ಮಾಡಿಕೊಂಡಿದ್ದಾರೆ ಎಂದು ತಂಡದ ಮುಖ್ಯ ಕೋಚ್ ಟಾಮ್ ಮೂಡಿ ಬಹಿರಂಗಪಡಿಸಿದ್ದಾರೆ. ಹೀಗಾಗಿ ಸಿಎಸ್ ಕೆ ವಿರುದ್ಧ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಗಾಯಗೊಂಡಿದ್ದ ವಾಷಿಂಗ್ಟನ್ 3 ಪಂದ್ಯಗಳಿಂದ ಹೊರಗುಳಿದಿದ್ದರು. ಇದಾದ ನಂತರ ಗುಜರಾತ್ ಟೈಟಾನ್ಸ್ ವಿರುದ್ಧ ಕಂಬ್ಯಾಕ್ ಮಾಡಿದ್ದರು. ಇದೀಗ ಮತ್ತೆ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿರುವ ಸುಂದರ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ವಾಷಿಂಗ್ಟನ್ ಸುಂದರ್ ಅವರ ತೋಳು ಭಾಗಕ್ಕೆ ಗಾಯವಾಗಿರುವುದು ದುರದೃಷ್ಟಕರ ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಟಾಮ್ ಮೂಡಿ ಹೇಳಿದರು. ಮೊನ್ನೆಯಷ್ಟೇ ಗಾಯ ಸಂಪೂರ್ಣವಾಗಿ ವಾಸಿಯಾಗಿದ್ದರೂ ಮತ್ತೆ ಅದೇ ಕೈಗೆ ಗಾಯವಾಗಿದೆ ಎಂದರು. ಗಾಯದಿಂದಾಗಿ ವಾಷಿಂಗ್ಟನ್ ಸುಂದರ್ ಬೌಲಿಂಗ್ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದು ಸಿಎಸ್​ಕೆ ವಿರುದ್ದದ ನಮ್ಮ ಬೌಲಿಂಗ್ ಮೇಲೆ ಪರಿಣಾಮ ಬೀರಿತು ಎಂದು ತಿಳಿಸಿದರು.

ಅಷ್ಟೇ ಅಲ್ಲದೆ, ಸಿಎಸ್ ಕೆ ವಿರುದ್ಧದ ಪಂದ್ಯದ ಮಧ್ಯೆ ಟಿ ನಟರಾಜನ್ ಕೂಡ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರಗುಳಿದಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಕೇನ್ ವಿಲಿಯಮ್ಸನ್ ಅವರು ಏಡನ್ ಮಾರ್ಕ್ರಾಮ್ ಮತ್ತು ಶಶಾಂಕ್ ಸಿಂಗ್ ಅವರಿಂದ ಬೌಲಿಂಗ್ ಮಾಡಿಸಬೇಕಾಯಿತು. ಆದರೆ ಇಬ್ಬರೂ ನಾಲ್ಕು ಓವರ್‌ಗಳಲ್ಲಿ ಒಟ್ಟು 46 ರನ್‌ಗಳನ್ನು ಬಿಟ್ಟುಕೊಟ್ಟರು. ಅತ್ತ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 202 ರನ್​ಗಳಿಸುವ ಮೂಲಕ ಎಸ್​ಆರ್​ಹೆಚ್​ಗೆ ಬೃಹತ್ ಟಾರ್ಗೆಟ್ ನೀಡಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಎಸ್​ಆರ್​ಹೆಚ್ ತಂಡವು 189 ರನ್​ಗಳಿಸುವ ಮೂಲಕ 13 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಸನ್ ರೈಸರ್ಸ್ ಹೈದರಾಬಾದ್ (SRH): ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್