IPL 2022: ಐಪಿಎಲ್ ಸೀಸನ್ 15 ನಲ್ಲಿ ಆರಂಭದ ಎರಡು ಪಂದ್ಯಗಳಲ್ಲಿ ಸೋತು ಆ ಬಳಿಕ ಭರ್ಜರಿ ಕಂಬ್ಯಾಕ್ ಮಾಡಿದ್ದ ಸನ್ರೈಸರ್ಸ್ ಹೈದರಾಬಾದ್ಗೆ (SRH) ಮುಂದಿನ ಪಂದ್ಯಗಳು ನಿರ್ಣಾಯಕ. ಏಕೆಂದರೆ ಕಳೆದ ಪಂದ್ಯದಲ್ಲಿ ಸಿಎಸ್ಕೆ (CSK) ವಿರುದ್ದ ಸೋತಿರುವ ಎಸ್ಆರ್ಹೆಚ್ಗೆ ಇನ್ನು 5 ಪಂದ್ಯಗಳು ಮಾತ್ರ ಉಳಿದಿದೆ. ಹೀಗಾಗಿ ಇದರಲ್ಲಿ ನಾಲ್ಕರಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬಹುದು. ಆದರೆ ನಿರ್ಣಾಯಕ ಹಂತದಲ್ಲಿ ತಂಡದ ಪ್ರಮುಖ ಆಟಗಾರ ಮತ್ತೆ ಗಾಯಗೊಂಡಿರುವುದು ಇದೀಗ ಎಸ್ಆರ್ಹೆಚ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೌದು, ಎಸ್ಆರ್ಹೆಚ್ ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಾಷಿಂಗ್ಟನ್ ಆಡುವುದು ಅನುಮಾನ.
ವಾಷಿಂಗ್ಟನ್ ಸುಂದರ್ ಅವರು ಬೌಲಿಂಗ್ ಮಾಡುವ ಕೈಗೆ ಮತ್ತೆ ಗಾಯ ಮಾಡಿಕೊಂಡಿದ್ದಾರೆ ಎಂದು ತಂಡದ ಮುಖ್ಯ ಕೋಚ್ ಟಾಮ್ ಮೂಡಿ ಬಹಿರಂಗಪಡಿಸಿದ್ದಾರೆ. ಹೀಗಾಗಿ ಸಿಎಸ್ ಕೆ ವಿರುದ್ಧ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಗಾಯಗೊಂಡಿದ್ದ ವಾಷಿಂಗ್ಟನ್ 3 ಪಂದ್ಯಗಳಿಂದ ಹೊರಗುಳಿದಿದ್ದರು. ಇದಾದ ನಂತರ ಗುಜರಾತ್ ಟೈಟಾನ್ಸ್ ವಿರುದ್ಧ ಕಂಬ್ಯಾಕ್ ಮಾಡಿದ್ದರು. ಇದೀಗ ಮತ್ತೆ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿರುವ ಸುಂದರ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ವಾಷಿಂಗ್ಟನ್ ಸುಂದರ್ ಅವರ ತೋಳು ಭಾಗಕ್ಕೆ ಗಾಯವಾಗಿರುವುದು ದುರದೃಷ್ಟಕರ ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಟಾಮ್ ಮೂಡಿ ಹೇಳಿದರು. ಮೊನ್ನೆಯಷ್ಟೇ ಗಾಯ ಸಂಪೂರ್ಣವಾಗಿ ವಾಸಿಯಾಗಿದ್ದರೂ ಮತ್ತೆ ಅದೇ ಕೈಗೆ ಗಾಯವಾಗಿದೆ ಎಂದರು. ಗಾಯದಿಂದಾಗಿ ವಾಷಿಂಗ್ಟನ್ ಸುಂದರ್ ಬೌಲಿಂಗ್ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದು ಸಿಎಸ್ಕೆ ವಿರುದ್ದದ ನಮ್ಮ ಬೌಲಿಂಗ್ ಮೇಲೆ ಪರಿಣಾಮ ಬೀರಿತು ಎಂದು ತಿಳಿಸಿದರು.
ಅಷ್ಟೇ ಅಲ್ಲದೆ, ಸಿಎಸ್ ಕೆ ವಿರುದ್ಧದ ಪಂದ್ಯದ ಮಧ್ಯೆ ಟಿ ನಟರಾಜನ್ ಕೂಡ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರಗುಳಿದಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಕೇನ್ ವಿಲಿಯಮ್ಸನ್ ಅವರು ಏಡನ್ ಮಾರ್ಕ್ರಾಮ್ ಮತ್ತು ಶಶಾಂಕ್ ಸಿಂಗ್ ಅವರಿಂದ ಬೌಲಿಂಗ್ ಮಾಡಿಸಬೇಕಾಯಿತು. ಆದರೆ ಇಬ್ಬರೂ ನಾಲ್ಕು ಓವರ್‌ಗಳಲ್ಲಿ ಒಟ್ಟು 46 ರನ್‌ಗಳನ್ನು ಬಿಟ್ಟುಕೊಟ್ಟರು. ಅತ್ತ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 202 ರನ್ಗಳಿಸುವ ಮೂಲಕ ಎಸ್ಆರ್ಹೆಚ್ಗೆ ಬೃಹತ್ ಟಾರ್ಗೆಟ್ ನೀಡಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಎಸ್ಆರ್ಹೆಚ್ ತಂಡವು 189 ರನ್ಗಳಿಸುವ ಮೂಲಕ 13 ರನ್ಗಳಿಂದ ಸೋಲೊಪ್ಪಿಕೊಂಡಿತು.
ಸನ್ ರೈಸರ್ಸ್ ಹೈದರಾಬಾದ್ (SRH):
ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.