IPL 2022: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಪ್ಲೇಆಫ್ ಪಂದ್ಯಗಳು ಶುರುವಾಗಿದೆ. ಲೀಗ್ ಹಂತದಲ್ಲಿ ಆಡಿದ 10 ತಂಡಗಳಲ್ಲಿ ನಾಲ್ಕು ತಂಡಗಳು ಪ್ಲೇಆಫ್ಗೆ ಕಾಲಿಫೈ ಆಗಿದ್ದು, ಅದರಂತೆ ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪಂದ್ಯಗಳನ್ನು ಆಡಲಿದೆ. ಈ ಪೈಕಿ ಮೊದಲ ಕ್ವಾಲಿಫೈಯರ್ (Qualifier 1) ಪಂದ್ಯ ಮುಗಿದಿದ್ದು, ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಗುಜರಾತ್ ಟೈಟಾನ್ಸ್ (GT vs RR) ಭರ್ಜರಿ ಜಯ ಸಾಧಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ 7 ವಿಕೆಟ್ಗಳಿಂದ ಜಯಗಳಿಸಿರುವ ಗುಜರಾತ್ ಟೈಟಾನ್ಸ್ ತಂಡವು ನೇರವಾಗಿ ಫೈನಲ್ ಪ್ರವೇಶಿಸಿದೆ. ಆದರೆ ಸೋತ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್ನಿಂದ ಹೊರಬಿದ್ದಿಲ್ಲ. ಬದಲಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಫೈನಲ್ಗೆ ಪ್ರವೇಶಿಸಲು ಮತ್ತೊಂದು ಅವಕಾಶ ಇರಲಿದೆ.
ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡಗಳಿಗೆ ಫೈನಲ್ ಪ್ರವೇಶಿಸಲು ಎರಡು ಅವಕಾಶ ನೀಡಲಾಗುತ್ತದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡ ಸೋತರೂ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್ಗೆ ಪ್ರವೇಶಿಸಬಹುದು. ಇಂತಹದೊಂದು ಅವಕಾಶ ನೀಡಲೆಂದೇ ಕ್ವಾಲಿಫೈಯರ್ ನಿಯಮಗಳನ್ನು ಐಪಿಎಲ್ನಲ್ಲಿ ಪರಿಚಯಿಸಲಾಗಿದೆ.
ಏಕೆಂದರೆ ಐಪಿಎಲ್ ದೀರ್ಘಾವಧಿಯ ಟೂರ್ನಿಯಾಗಿದ್ದು, ಇಲ್ಲಿ ಪ್ರತಿ ತಂಡಗಳು ಲೀಗ್ ಹಂತದಲ್ಲಿ 14 ಪಂದ್ಯಗಳನ್ನು ಆಡುತ್ತದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಟಾಪ್ 4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಪ್ಲೇಆಫ್ ಪ್ರವೇಶಿಸಲಿದೆ. ಹಾಗೆಯೇ ಅಗ್ರ ಎರಡು ಸ್ಥಾನಗಳನ್ನು ಪಡೆಯುವ 2 ತಂಡಗಳಿಗೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ನೀಡಲಾಗುತ್ತದೆ. ಇಲ್ಲಿ ಸೆಮಿಫೈನಲ್ ಬದಲು ಕ್ವಾಲಿಫೈಯರ್ ಪಂದ್ಯಗಳ ಅವಕಾಶ ನೀಡುವ ಮೂಲಕ ಇಡೀ ಟೂರ್ನಿಯುದಕ್ಕೂ ಉತ್ತಮ ಪ್ರದರ್ಶನದ ನೀಡಿದ 2 ತಂಡಗಳಿಗೆ ಫೈನಲ್ಗೇರಲು 2 ಅವಕಾಶ ನೀಡಲಾಗಿದೆ.
ಅಂದರೆ ಸೆಮಿಫೈನಲ್ ಆಡಿಸಿದ್ರೆ ಒಂದು ತಂಡವು ನೇರವಾಗಿ ಹೊರಬೀಳಲಿದೆ. ಆದರೆ ಲೀಗ್ ಹಂತದಲ್ಲಿ 14 ಪಂದ್ಯಗಳಲ್ಲಿ ಉತ್ತಮವಾಗಿ ಆಡಿದರೂ, ಅಂತಿಮವಾಗಿ ಕೇವಲ ಒಂದು ಪಂದ್ಯದಿಂದ ತಂಡವನ್ನು ಹೊರಗಿಡುವುದನ್ನು ತಪ್ಪಿಸಲು ಕ್ವಾಲಿಫೈಯರ್ ಮೂಲಕ ನಾಕೌಟ್ ಪಂದ್ಯಗಳನ್ನು ಆಡಿಸಲಾಗುತ್ತಿದೆ. ಅದರಂತೆ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲ ಮತ್ತು ದ್ವಿತೀಯಾ ಸ್ಥಾನ ಪಡೆಯುವ 2 ತಂಡಗಳಿಗೆ ಫೈನಲ್ಗೇರಲು 2 ಅವಕಾಶ ನೀಡಲಾಗಿದೆ. ಇದೀಗ ಮೊದಲ ಕ್ವಾಲಿಫೈಯರ್ ಅವಕಾಶದಲ್ಲಿ ಗುಜರಾತ್ ಟೈಟಾನ್ಸ್ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಹಾಗೆಯೇ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.
ಅದರಂತೆ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2ನೇ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ಸಿಕ್ಕಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಬೇಕಾಗುತ್ತದೆ.
ಇಲ್ಲಿ ಮೊದಲ ಅವಕಾಶದಲ್ಲಿ ಸೋತರೂ, 2ನೇ ಕ್ವಾಲಿಫೈಯರ್ ಪಂದ್ಯದ ಮೂಲಕ ಫೈನಲ್ಗೆ ಎಂಟ್ರಿ ಕೊಡುವ ಚಾನ್ಸ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇರಲಿದೆ. ಆದರೆ ಎಲಿಮಿನೇಟರ್ ಪಂದ್ಯವಾಡುವ ಆರ್ಸಿಬಿ-ಲಕ್ನೋ ತಂಡಗಳಲ್ಲಿ ಸೋತ ತಂಡ ನೇರವಾಗಿ ಐಪಿಎಲ್ನಿಂದ ಹೊರಬೀಳಲಿದೆ. ಅಂದರೆ ಪಾಯಿಂಟ್ಸ್ ಟೇಬಲ್ನಲ್ಲಿ 3ನೇ ಮತ್ತು 4ನೇ ಸ್ಥಾನ ಪಡೆಯುವ ತಂಡಗಳಿಗೆ ಮತ್ತೊಂದು ಅವಕಾಶ ಇರುವುದಿಲ್ಲ. ಹೀಗಾಗಿಯೇ ಈ ಪಂದ್ಯವನ್ನು ಎಲಿಮಿನೇಟರ್ ಪಂದ್ಯ ಎಂದು ಕರೆಯಲಾಗುತ್ತದೆ. ಇಲ್ಲಿ ಸೋತ ತಂಡವು ಐಪಿಎಲ್ನಿಂದ ಹೊರಬೀಳಲಿದೆ.
ಹಾಗೆಯೇ ಎಲಿಮಿನೇಟರ್ನಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್ಸಿಬಿ ನಡುವಣ ಪಂದ್ಯದಲ್ಲಿ ಗೆದ್ದ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ದ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್ಗೆ ಪ್ರವೇಶಿಸಲಿದೆ. ಅದರಂತೆ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.