IPL 2022: ಹಾರ್ದಿಕ್ ಪಾಂಡ್ಯ ಹೊರಗುಳಿಯಲು ಕಾರಣವೇನು?

IPL 2022: ಮೊದಲ ಬಾರಿಗೆ ಐಪಿಎಲ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2022 ಗೆ ಉತ್ತಮ ಆರಂಭವನ್ನು ಪಡೆದಿದ್ದರು. ಅವರ ನಾಯಕತ್ವದಲ್ಲಿ ಗುಜರಾತ್ ತಂಡವು ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ.

IPL 2022: ಹಾರ್ದಿಕ್ ಪಾಂಡ್ಯ ಹೊರಗುಳಿಯಲು ಕಾರಣವೇನು?
hardik pandya
Follow us
| Updated By: ಝಾಹಿರ್ ಯೂಸುಫ್

Updated on:Apr 17, 2022 | 10:35 PM

ಐಪಿಎಲ್​​ನ 29ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕನಾಗಿ ರಶೀದ್ ಖಾನ್ ಕಾಣಿಸಿಕೊಂಡಿದ್ದರು. ಇದುವರೆಗೆ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗುಳಿದಿದ್ದರು. ಉತ್ತಮ ಫಾರ್ಮ್​ನಲ್ಲಿದ್ದ ಪಾಂಡ್ಯ ಇದಕ್ಕಿದ್ದಂತೆ ತಂಡದಿಂದ ಹೊರಗುಳಿಯಲು ಕಾರಣವೇನು ಎಂದು ನೋಡುವುದಾದರೆ, ಫಿಟ್​ನೆಸ್ ಸಮಸ್ಯೆ. ಹಾರ್ದಿಕ್ ಪಾಂಡ್ಯಗೆ ಮತ್ತೆ ಫಿಟ್​ನೆಸ್ ಸಮಸ್ಯೆ ಎದುರಾಗಿದೆ. ಇದೀಗ ತೊಡೆಸಂದು ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಗುಜರಾತ್ ತಂಡವನ್ನು ರಶೀದ್ ಖಾನ್ ಮುನ್ನಡೆಸಿದ್ದಾರೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಫಿಟ್ನೆಸ್ ಮತ್ತೆ ಟೆನ್ಶನ್: ಈ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಹೆಚ್ಚು ಗಮನ ಸೆಳೆದಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಟಿ 20 ವಿಶ್ವಕಪ್ ನಂತರ ಭಾರತೀಯ ಆಲ್‌ರೌಂಡರ್ ಐಪಿಎಲ್‌ಗೆ ನೇರ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಹಾರ್ದಿಕ್ ಆರಂಭಿಕ ಪಂದ್ಯಗಳಿಂದ ಸಂಪೂರ್ಣವಾಗಿ ಫಿಟ್ ಆಗಿ ಕಾಣಿಸಿಕೊಂಡರು. ಬ್ಯಾಟಿಂಗ್ ಜೊತೆ ಬೌಲಿಂಗ್ ಕೂಡ ಮಾಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದರು. ಇದೀಗ ಮತ್ತೆ ಫಿಟ್​ನೆಸ್ ಸಮಸ್ಯೆ ಕಂಡು ಬಂದಿರುವುದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನ್ನು ಸ್ವಲ್ಪ ಚಿಂತೆಗೀಡು ಮಾಡಿದೆ.

ನಾಯಕನಾಗಿ ಮಿಂಚಿಂಗ್: ಮೊದಲ ಬಾರಿಗೆ ಐಪಿಎಲ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2022 ಗೆ ಉತ್ತಮ ಆರಂಭವನ್ನು ಪಡೆದಿದ್ದರು. ಅವರ ನಾಯಕತ್ವದಲ್ಲಿ ಗುಜರಾತ್ ತಂಡವು ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ. ನಾಯಕನಾಗಿ ಹಾರ್ದಿಕ್ ಪಾಂಡ್ಯ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದರು. ಅವರು ಸತತ ಎರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಅಜೇಯ 87 ರನ್ ಗಳಿಸಿದ್ದರು. ಅಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್ ಮತ್ತು 1 ರನ್ ಔಟ್ ಮಾಡಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದರು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 10:35 pm, Sun, 17 April 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು