ಐಪಿಎಲ್ನ 29ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಸಿಎಸ್ಕೆ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗುಜರಾತ್ ತಂಡದ ನಾಯಕನಾಗಿ ರಶೀದ್ ಖಾನ್ ಕಾಣಿಸಿಕೊಂಡಿದ್ದರು. ಇದುವರೆಗೆ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗುಳಿದಿದ್ದರು. ಉತ್ತಮ ಫಾರ್ಮ್ನಲ್ಲಿದ್ದ ಪಾಂಡ್ಯ ಇದಕ್ಕಿದ್ದಂತೆ ತಂಡದಿಂದ ಹೊರಗುಳಿಯಲು ಕಾರಣವೇನು ಎಂದು ನೋಡುವುದಾದರೆ, ಫಿಟ್ನೆಸ್ ಸಮಸ್ಯೆ. ಹಾರ್ದಿಕ್ ಪಾಂಡ್ಯಗೆ ಮತ್ತೆ ಫಿಟ್ನೆಸ್ ಸಮಸ್ಯೆ ಎದುರಾಗಿದೆ. ಇದೀಗ ತೊಡೆಸಂದು ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಸಿಎಸ್ಕೆ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಗುಜರಾತ್ ತಂಡವನ್ನು ರಶೀದ್ ಖಾನ್ ಮುನ್ನಡೆಸಿದ್ದಾರೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಫಿಟ್ನೆಸ್ ಮತ್ತೆ ಟೆನ್ಶನ್:
ಈ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಅವರ ಫಿಟ್‌ನೆಸ್ ಹೆಚ್ಚು ಗಮನ ಸೆಳೆದಿತ್ತು. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಟಿ 20 ವಿಶ್ವಕಪ್ ನಂತರ ಭಾರತೀಯ ಆಲ್‌ರೌಂಡರ್ ಐಪಿಎಲ್‌ಗೆ ನೇರ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಹಾರ್ದಿಕ್ ಆರಂಭಿಕ ಪಂದ್ಯಗಳಿಂದ ಸಂಪೂರ್ಣವಾಗಿ ಫಿಟ್ ಆಗಿ ಕಾಣಿಸಿಕೊಂಡರು. ಬ್ಯಾಟಿಂಗ್ ಜೊತೆ ಬೌಲಿಂಗ್ ಕೂಡ ಮಾಡಿದ್ದರು. ಈ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದರು. ಇದೀಗ ಮತ್ತೆ ಫಿಟ್ನೆಸ್ ಸಮಸ್ಯೆ ಕಂಡು ಬಂದಿರುವುದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಅನ್ನು ಸ್ವಲ್ಪ ಚಿಂತೆಗೀಡು ಮಾಡಿದೆ.
ನಾಯಕನಾಗಿ ಮಿಂಚಿಂಗ್:
ಮೊದಲ ಬಾರಿಗೆ ಐಪಿಎಲ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2022 ಗೆ ಉತ್ತಮ ಆರಂಭವನ್ನು ಪಡೆದಿದ್ದರು. ಅವರ ನಾಯಕತ್ವದಲ್ಲಿ ಗುಜರಾತ್ ತಂಡವು ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ. ನಾಯಕನಾಗಿ ಹಾರ್ದಿಕ್ ಪಾಂಡ್ಯ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದರು. ಅವರು ಸತತ ಎರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಅಜೇಯ 87 ರನ್ ಗಳಿಸಿದ್ದರು. ಅಲ್ಲದೆ ಬೌಲಿಂಗ್ನಲ್ಲಿ 1 ವಿಕೆಟ್ ಮತ್ತು 1 ರನ್ ಔಟ್ ಮಾಡಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದರು.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ
Published On - 10:35 pm, Sun, 17 April 22