AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದದ್ದು ಯಾಕೆ ಗೊತ್ತಾ?

IPL 2022: ಚೊಚ್ಚಲ ಪಂದ್ಯವಾಡಿದ ಸುಯಶ್ 18 ಎಸೆತಗಳಲ್ಲಿ 34 ರನ್ ಬಾರಿಸುವ ಮೂಲಕ ತಮ್ಮ ಪಾತ್ರ ನಿರ್ವಹಿಸಿದ್ದರು. ಮತ್ತೊಂದೆಡೆ 27 ಎಸೆತಗಳಲ್ಲಿ 41 ರನ್ ಬಾರಿಸಿ ಶಹಬಾಜ್ ಕೂಡ ಅಬ್ಬರಿಸಿದರು.

IPL 2022: RCB ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದದ್ದು ಯಾಕೆ ಗೊತ್ತಾ?
RCB
TV9 Web
| Edited By: |

Updated on: Apr 13, 2022 | 4:40 PM

Share

ಐಪಿಎಲ್​ನ 22ನೇ (IPL 2022) ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ (RCB vs CSK) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೈದಾನಕ್ಕಿಳಿದ ಆರ್​ಸಿಬಿ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು (Why is RCB wearing black armbands) ಧರಿಸಿದ್ದರು. ಹೀಗೆ ಬ್ಲ್ಯಾಕ್​ ಬ್ಯಾಂಡ್​ನೊಂದಿಗೆ ಆರ್​ಸಿಬಿ ತಂಡವು ಕಣಕ್ಕಿಳಿಯಲು ಕಾರಣ ಹರ್ಷಲ್ ಪಟೇಲ್ ಅವರ ಸಹೋದರಿಯ ನಿಧನ ಎಂದು ತಿಳಿದು ತಿಳಿದು ಬಂದಿದೆ. ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ಅವರ ಸಹೋದರಿ ಅರ್ಚಿತಾ ಪಟೇಲ್ ಶನಿವಾರ ನಿಧನರಾಗಿದ್ದರು. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಕಪ್ಪು ಪಟ್ಟಿಗಳನ್ನು ಧರಿಸಿದ್ದರು.

ಇನ್ನು ಸಹೋದರಿಯ ನಿಧನದ ನಿಮಿತ್ತ ಹರ್ಷಲ್ ಪಟೇಲ್ ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದ ಬಳಿಕ ಹರ್ಷಲ್ ಮನೆಗೆ ತೆರಳಿದ್ದರು. ಇನ್ನು ಐಪಿಎಲ್​ಗೆ ಆಗಮಿಸಿದರೂ 3 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಬೇಕಾಗುತ್ತದೆ. ಇದಾಗ್ಯೂ ಹರ್ಷಲ್ ಪಟೇಲ್ ಮುಂದಿನ ಪಂದ್ಯಗಳಲ್ಲಿ ಆರ್​ಸಿಬಿ ಪರ ಆಡಲಿದ್ದಾರಾ ಎಂಬುದು ಇನ್ನೂ ಕೂಡ ಖಚಿತವಾಗಿಲ್ಲ.

ಸಿಎಸ್​ಕೆ ವಿರುದ್ದದ ಪಂದ್ಯದಲ್ಲಿ ಹರ್ಷಲ್ ಪಟೇಲ್ ಅವರ ಅಲಭ್ಯತೆಯು ಆರ್​ಸಿಬಿ ತಂಡವನ್ನು ಕಾಡಿದೆ. ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ನಾಲ್ಕು ಪಂದ್ಯಗಳಲ್ಲಿ 5.50 ಎಕನಾಮಿ ರೇಟ್​ನಲ್ಲಿ ಹರ್ಷಲ್ ಒಟ್ಟು ಆರು ವಿಕೆಟ್‌ಗಳನ್ನು ಗಳಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿದ್ದರು. ಇನ್ನು 31ರ ಹರೆಯದ ಹರ್ಷಲ್ ಪಟೇಲ್ ಐಪಿಎಲ್ 2021ರಲ್ಲಿ 15 ಪಂದ್ಯಗಳಲ್ಲಿ 32 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಕೂಡ ಆಗಿದ್ದರು.

ಸಿಎಸ್​ಕೆಗೆ ಮೊದಲ ಜಯ: ಇನ್ನು ಐಪಿಎಲ್​ನ 22ನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬೌಲಿಂಗ್ ಆಯ್ದುಕೊಂಡರು. ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಹಾಗೂ ಆಲ್​ರೌಂಡರ್ ಶಿವಂ ದುಬೆ ಅಬ್ಬರಿಸುವ ಮೂಲಕ ಮೂರನೇ ವಿಕೆಟ್​ಗೆ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಜೋಡಿ 165 ರನ್​ಗಳ ಜೊತೆಯಾಟವಾಡಿದರು. ಈ ವೇಳೆ 50 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ ಬಾರಿಸಿದ್ದ ರಾಬಿನ್ ಉತ್ತಪ್ಪ ಔಟಾದರು. ಆದರೆ ದುಬೆಯ ಆರ್ಭಟ ಮಾತ್ರ ಮುಂದುವರೆದಿತ್ತು. ಕೊನೆಯ ಓವರ್​ವರೆಗೂ ಬ್ಯಾಟ್ ಬೀಸಿದ ದುಬೆ 8 ಸಿಕ್ಸ್​ ಹಾಗೂ 5 ಬೌಂಡರಿಯೊಂದಿಗೆ ಕೇವಲ 45 ಎಸೆತಗಳಲ್ಲಿ ಅಜೇಯ 95 ರನ್​ಗಳಿಸಿತ್ತು. ಅಲ್ಲಿಗೆ ಸಿಎಸ್​ಕೆ ತಂಡದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 216 ಕ್ಕೆ ಬಂದು ನಿಂತಿತು.

217 ರನ್​ಗಳ ಟಾರ್ಗೆಟ್ ನೀಡಿದ ಸಿಎಸ್​ಕೆ ಗೆಲುವಿನ ವಿಶ್ವಾಸದಲ್ಲೇ ಮೈದಾನಕ್ಕಿಳಿಯಿತು. ಮೂರನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್, 5ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ 6ನೇ ಓವರ್​ನಲ್ಲಿ ಅನೂಜ್ ರಾವತ್ ವಿಕೆಟ್ ಪಡೆಯುವ ಮೂಲಕ ಸಿಎಸ್​ಕೆ ಪವರ್​ಪ್ಲೇನಲ್ಲೇ ಆರ್​ಸಿಬಿಗೆ ಆಘಾತ ನೀಡಿದರು. ಅಷ್ಟೇ ಅಲ್ಲದೆ ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 42 ರನ್​ ಮಾತ್ರ. ಇನ್ನು 11 ಎಸೆತಗಳಲ್ಲಿ 26 ರನ್ ಬಾರಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ಶಹಬಾಜ್ ಅಹ್ಮದ್ ಹಾಗೂ ಸುಯಶ್ ಪ್ರಭುದೇಸಾಯಿ ಅರ್ಧಶತಕದ ಜೊತೆಯಾಟವಾಡಿದರು.

ಅದರಲ್ಲೂ ಚೊಚ್ಚಲ ಪಂದ್ಯವಾಡಿದ ಸುಯಶ್ 18 ಎಸೆತಗಳಲ್ಲಿ 34 ರನ್ ಬಾರಿಸುವ ಮೂಲಕ ತಮ್ಮ ಪಾತ್ರ ನಿರ್ವಹಿಸಿದ್ದರು. ಮತ್ತೊಂದೆಡೆ 27 ಎಸೆತಗಳಲ್ಲಿ 41 ರನ್ ಬಾರಿಸಿ ಶಹಬಾಜ್ ಕೂಡ ಅಬ್ಬರಿಸಿದರು. ಅಂತಿಮ ಹಂತದಲ್ಲಿ ದಿನೇಶ್ ಕಾರ್ತಿಕ್ ಬಿರುಸಿನ ಬ್ಯಾಟಿಂಗ್ ನಡೆಸಿ ಕೇವಲ 13 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 34 ರನ್ ಬಾರಿಸಿದರು. ಆದರೆ ಬ್ರಾವೊ ಅವರ ಬೌಲಿಂಗ್​ನಲ್ಲಿ ದಿನೇಶ್ ಕಾರ್ತಿಕ್ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿ ಔಟಾದರು. ಅಂತಿಮವಾಗಿ ಆರ್​ಸಿಬಿ ತಂಡವು 9 ವಿಕೆಟ್ ನಷ್ಟಕ್ಕೆ 193 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ ತಂಡವು 23 ರನ್​ಗಳಿಂದ ಈ ಬಾರಿಯ ಐಪಿಎಲ್​ನ ಮೊದಲ ಜಯ ದಾಖಲಿಸಿತು.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!