IPL 2022: RR ನಾಯಕ ಯುಜ್ವೇಂದ್ರ ಚಹಲ್: ಅಭಿಮಾನಿಗಳಿಗೆ ಶಾಕ್ ನೀಡಿದ ರಾಜಸ್ಥಾನ್ ರಾಯಲ್ಸ್

Rajasthan Royals: ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ

IPL 2022: RR ನಾಯಕ ಯುಜ್ವೇಂದ್ರ ಚಹಲ್: ಅಭಿಮಾನಿಗಳಿಗೆ ಶಾಕ್ ನೀಡಿದ ರಾಜಸ್ಥಾನ್ ರಾಯಲ್ಸ್
Rajasthan Royals
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 16, 2022 | 3:16 PM

ಐಪಿಎಲ್ ಸೀಸನ್ 15 ನಲ್ಲಿ ಯುಜ್ವೇಂದ್ರ ಚಹಲ್ ರಾಜಸ್ಥಾನ್ ರಾಯಲ್ಸ್ ಪರ ಆಡುವುದು ಗೊತ್ತಿರುವ ವಿಷಯ. ಈ ಬಾರಿ ರಾಜಸ್ಥಾನ್ ರಾಯಲ್ಸ್ ತಂಡವು ಚಹಲ್ ಅವರನ್ನು ಬರೋಬ್ಬರಿ 6.5 ಕೋಟಿ ನೀಡಿ ಖರೀದಿಸಿದೆ. ಇತ್ತ ಆರ್​ಸಿಬಿ ತಂಡದ ಖಾಯಂ ಸದಸ್ಯರಾಗಿ ಗುರುತಿಸಿಕೊಂಡಿದ್ದ ಚಹಲ್ ಈ ಸೀಸನ್​ ಮೂಲಕ ಕ್ಲಾಸಿಕ್ ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇದೀಗ ರಾಜಸ್ಥಾನ್ ರಾಯಲ್ಸ್ ಅಭ್ಯಾಸ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿರುವ ಚಹಲ್ ತಮ್ಮ ಈ ಹಿಂದಿನ ವರಸೆ ಶುರು ಮಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಸದಾ ಕಿಚಾಯಿಸುವ ಚಹಲ್ ಈ ಬಾರಿ ಆರ್​ಆರ್ ತಂಡದ ಟ್ವಿಟರ್ ಖಾತೆಯ ಅಡ್ಮಿನ್​ನ್ನು ಹಿಡಿದುಕೊಂಡಿದ್ದಾರೆ.

ಬುಧವಾರ ಟ್ವೀಟ್ ಮೂಲಕ ರಾಜಸ್ಥಾನ ರಾಯಲ್ಸ್ ಖಾತೆಯನ್ನು ಹ್ಯಾಕ್ ಮಾಡುವುದಾಗಿ ಯುಜ್ವೇಂದ್ರ ಚಹಲ್ ತಿಳಿಸಿದ್ದರು. ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದ ರಾಜಸ್ಥಾನ್ ರಾಯಲ್ಸ್, ಅದು ಮಾತಿನಲ್ಲಷ್ಟೇ ಹೇಳಬಹುದು, ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂಬಾರ್ಥದಲ್ಲಿ ಉತ್ತರ ನೀಡಿದ್ದರು. ಆದರೆ ಇದರ ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡದ ಟ್ವಿಟರ್​ ಖಾತೆಯಲ್ಲಿ ಚಹಲ್ ಫೋಟೋ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ ಈ ಫೋಟೋಗೆ ರಾಜಸ್ಥಾನ್ ರಾಯಲ್ಸ್​ ತಂಡದ ಹೊಸ ನಾಯಕ ಎಂಬ ಕ್ಯಾಪ್ಷನ್ ನೀಡಲಾಗಿತ್ತು ಎಂಬುದು ವಿಶೇಷ.

ಇದನ್ನು ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾದರು. ಏಕೆಂದರೆ ಮೊನ್ನೆಯವರೆಗೂ ಸಂಜು ಸ್ಯಾಮ್ಸನ್ ನಾಯಕ ಎಂದಿದ್ದ ರಾಜಸ್ಥಾನ್ ರಾಯಲ್ಸ್ ದಿಢೀರಣೆ ಚಹಲ್ ಫೋಟೋ ಹಾಕಿ ನಾಯಕ ಎಂದರೆ ಯಾರಿಗೆ ತಾನೇ ಆಶ್ಚರ್ಯವಾಗುವುದಿಲ್ಲ ಹೇಳಿ. ಅಂದರೆ ಆರ್​ಆರ್ ಟ್ವಿಟರ್ ಖಾತೆ ಹ್ಯಾಕ್ ಮಾಡಿ ನಾನೇ ನಾಯಕ ಎಂದು ಚಹಲ್ ಈ ಟ್ವೀಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ಆರ್​ಆರ್ ಅಡ್ಮಿನ್ ಮತ್ತೊಮ್ಮೆ ಚಹಲ್ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ಟೀಮ್ ಇಂಡಿಯಾ ಜೆರ್ಸಿಯಲ್ಲಿ ಬ್ಯಾಟ್ ಬೀಸುತ್ತಿರುವ ಚಹಲ್ ಫೋಟೋ ಹಂಚಿಕೊಂಡಿರುವ ರಾಜಸ್ಥಾನ್ ರಾಯಲ್ಸ್, 10 ಸಾವಿರ ರಿಟ್ವೀಟ್ ಆದರೆ, ಜೋಸ್ ಬಟ್ಲರ್ ಜೊತೆ ಯುಜ್ವೇಂದ್ರ ಚಹಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಕಿಚಾಯಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಇರಲಿ ಅಥವಾ ರಾಜಸ್ಥಾನ್ ರಾಯಲ್ಸ್ ಇರಲಿ, ಅಭಿಮಾನಿಗಳಿಗೆ ಚಹಲ್ ಅವರ ಆಫ್​ ಫೀಲ್ಡ್ ಮನರಂಜನೆಯಂತು ಸಿಗಲಾರಂಭಿಸಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ: ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಹಾಲ್, ಪ್ರಸಿದ್ಧ್ ಕೃಷ್ಣ, ಕೆಸಿ ಕಾರ್ಯಪ್ಪ, ನವದೀಪ್ ಸೈನಿ, ತೇಜಸ್ ಬರೋಕಾ, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಕುಲ್ದ್ರುವ್ ಜುರೆಲ್ , ಶುಭಂ ಗರ್ವಾಲ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವಾನ್ ಡೆರ್ ಡುಸ್ಸೆನ್, ಜೇಮ್ಸ್ ನೀಶಮ್, ಡೇರಿಲ್ ಮಿಚೆಲ್, ಕರುಣ್ ನಾಯರ್, ಒಬೆಡ್ ಮೆಕಾಯ್.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Yuzvendra Chahal hacks RR’s Twitter account)

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!